Home namma chikmagalur chikamagalur ಸಿಎಂ ಪತ್ನಿ ಜಿಲ್ಲೆಯ ಆಧ್ಯಾತ್ಮಿಕ ಸ್ಥಳಗಳಿಗೆ ಭೇಟಿ
chikamagalurHomeLatest Newsnamma chikmagalur

ಸಿಎಂ ಪತ್ನಿ ಜಿಲ್ಲೆಯ ಆಧ್ಯಾತ್ಮಿಕ ಸ್ಥಳಗಳಿಗೆ ಭೇಟಿ

Share
Share

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದರೆ, ಅವರ ಪತ್ನಿ ಪಾರ್ವತಿ ಅವರು ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರಗಳ ದರ್ಶನ ಪಡೆಯುತ್ತಿದ್ದಾರೆ.

ನಿನ್ನೆ ಮಧ್ಯಾಹ್ನವೇ ಜಿಲ್ಲೆಗೆ ಆಗಮಿಸಿರುವ ಸಿಎಂ ಪತ್ನಿ ಪಾರ್ವತಿ ಅವರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಭಾನುವಾರ ಮಧ್ಯಾಹ್ನ 3 ಗಂಟೆಗೆ ಹೊರನಾಡು ಅನ್ನಪೂರ್ಣೇಶ್ವರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಆ ಬಳಿಕ ಶೃಂಗೇರಿಗೆ ತೆರಳಿ ಶಾರದಾಂಬೆಯ ದರ್ಶನ ಪಡೆದ ಅವರು, ರಾತ್ರಿ ಶಾರದಾ ಪೀಠದ ಮಠದಲ್ಲೇ ವಾಸ್ತವ್ಯ ಹೂಡಿದ್ದರು. ಸೋಮವಾರ ಮುಂಜಾನೆ ಶೃಂಗೇರಿಯಿಂದ ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆಯಲು ಅವರು ತೆರಳಿದ್ದಾರೆ.

ಮತ್ತೊಂದೆಡೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎನ್.ಆ‌ರ್.ಪುರದ ಪ್ರವಾಸಿ ಮಂದಿರದಲ್ಲಿ (IB) ವಾಸ್ತವ್ಯ ಹೂಡಿದ್ದರು. ಇಂದು ಜಿಲ್ಲೆಗೆ ಸಂಬಂಧಿಸಿದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

ಅಂದಾಜು 38 ಕೋಟಿ ರೂಪಾಯಿ ವೆಚ್ಚದ ಸೇತುವೆ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಸಿಎಂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಎನ್.ಆರ್.ಪುರದಿಂದ ಮುಖ್ಯಮಂತ್ರಿಗಳು ಬೆಂಗಳೂರಿಗೆ ಹಿಂದಿರುಗಲಿದ್ದಾರೆ. ಒಟ್ಟಾರೆಯಾಗಿ, ಒಂದು ಕಡೆ ಸಿಎಂ ಪತ್ನಿಯ ಆಧ್ಯಾತ್ಮಿಕ ಭೇಟಿ ಹಾಗೂ ಇನ್ನೊಂದೆಡೆ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರಿ ಕಾರ್ಯಕ್ರಮಗಳಿಂದಾಗಿ ಇಡೀ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

CM’s wife visits spiritual places in the district

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ ಇಲಿಗೆ ‘ಹಣದ ಮೋಹ’

ಚಿಕ್ಕಮಗಳೂರು : ತುಮಕೂರಿನಲ್ಲಿ ಇತ್ತೀಚೆಗೆ ಇಲಿಯೊಂದು ಚಿನ್ನದ ಆಭರಣಗಳನ್ನು ಎಗರಿಸಿ ಸುದ್ದಿಯಾಗಿದ್ದರೆ, ಇತ್ತ ಚಿಕ್ಕಮಗಳೂರಿನಲ್ಲಿ ಮತ್ತೊಂದು ಚಾಣಾಕ್ಷ ಇಲಿ ಒಂದು ಹೆಜ್ಜೆ ಮುಂದೆ ಹೋಗಿ ನೇರವಾಗಿ ಹಣವನ್ನೇ ಕದ್ದು ತನ್ನ ಸಾಮ್ರಾಜ್ಯ...

ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಹೆಸರಿನಲ್ಲಿಯೂ ನಕಲಿ ವಾಟ್ಸಪ್ ಖಾತೆ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಹ್ಯಾಕರ್‌ಗಳು ಮತ್ತು ವಂಚಕರು ವಾಟ್ಸಪ್, ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರನ್ನು...

Related Articles

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...

ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ

ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ...

ಕನಸು ಫೈನಾನ್ಸ್ ಹೆಸರಿನಲ್ಲಿ ₹1.60 ಲಕ್ಷ ವಂಚನೆ ಆರೋಪ

ಕಡೂರು: ಪ್ರತಿದಿನ ಉಳಿತಾಯದ ಹಣವನ್ನು ಸ್ವೀಕರಿಸಿ ಶೇ.7ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ, ಹಣವನ್ನು ವಾಪಸ್ ನೀಡದೆ...