Home namma chikmagalur chikamagalur ಕಾಡಾನೆಯಿಂದ ಕಾಫಿ, ಅಡಿಕೆ -ತೆಂಗಿನ ಮರಗಳು ಧ್ವಂಸ
chikamagalurHomeLatest Newsnamma chikmagalur

ಕಾಡಾನೆಯಿಂದ ಕಾಫಿ, ಅಡಿಕೆ -ತೆಂಗಿನ ಮರಗಳು ಧ್ವಂಸ

Share
Share

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಕಾರ್ಬೈಲು ಗ್ರಾಮದಲ್ಲಿ 20ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ದಾಳಿ ನಡೆಸಿ ಕಾಫಿ, ಅಡಿಕೆ, ತೆಂಗು ಸೇರಿದಂತೆ ವಿವಿಧ ಬೆಳೆಗಳನ್ನು ಸಂಪೂರ್ಣವಾಗಿ ನಾಶಪಡಿಸಿದೆ. ರಾತ್ರಿ ಸುಮಾರು 8 ಗಂಟೆಯ ವೇಳೆಗೆ ತೋಟಕ್ಕೆ ನುಗ್ಗಿದ ಆನೆಗಳ ಹಿಂಡು ಭಾರಿ ಹಾನಿ ಉಂಟುಮಾಡಿದೆ.

ಕಾರ್ಬೈಲು ಸುತ್ತಮುತ್ತ ಸುಮಾರು 20 ಕಾಡಾನೆಗಳ ಸಂಚಾರವಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದು, ಮೇಲಿನ ತೋಟದ ಭಾಗದಲ್ಲೂ ಮತ್ತೆ 15 ಆನೆಗಳು ಪ್ರತ್ಯಕ್ಷವಾಗಿವೆ.  ಕಾರ್ಬೈಲು, ಮಾಕನಹಳ್ಳಿ ಮತ್ತು ಗಬ್ಬಳ್ಳಿಪುರ ಭಾಗಗಳಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಕಾಫಿ ಬೆಳೆಗಾರರು ಹಾಗೂ ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿದೆ. ಕಾಫಿ, ಅಡಿಕೆ ಮತ್ತು ತೆಂಗಿನ ಮರಗಳು ಧ್ವಂಸಗೊಂಡಿವೆ.

ನವೆಂಬರ್ 30ರಂದು ನಡೆಯುವ ಸಭೆಯ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಅಧಿಕಾರಿಗಳು ಮತ್ತು ಶಾಸಕರು ತಿಳಿಸಿದ್ದಾರೆ. ಆದರೆ ಸಭೆಯವರೆಗೆ ಕಾಯದೆ ತಕ್ಷಣವೇ ಕಾಡಾನೆಗಳನ್ನು ಸ್ಥಳಾಂತರಿಸಬೇಕು ಹಾಗೂ ನಷ್ಟಕ್ಕೊಳಗಾದ ಬೆಳೆಗಳಿಗೆ ಸರ್ಕಾರ ಕೂಡಲೇ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಮತ್ತು ರೈತರು ಆಗ್ರಹಿಸಿದ್ದಾರೆ.
Coffee areca nut and coconut trees destroyed by wild elephants
Share

Leave a comment

Leave a Reply

Your email address will not be published. Required fields are marked *

Don't Miss

ಮನೆ ಬೀಗ ಒಡೆದು ಚಿನ್ನ, ಬೆಳ್ಳಿ ಹಾಗೂ ನಗದು ಕಳವು

ಚಿಕ್ಕಮಗಳೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಒಡೆದು ಒಳನುಗ್ಗಿದ ಕಳ್ಳರು ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದೆ....

ಜೀವರಾಜ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ಹೈಕೋರ್ಟ್‌ನಿಂದ ವಜಾ

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದಡಿ ಮಾಜಿ ಶಾಸಕ ಡಿ.ಎನ್. ಜೀವರಾಜ್ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕ್ರಿಮಿನಲ್...

Related Articles

ಸರಗಳ್ಳರ ಬಂಧನ: 21 ಲಕ್ಷ ರೂ. ಮೌಲ್ಯದ ಕದ್ದಮಾಲು ವಶ

ಚಿಕ್ಕಮಗಳೂರು: ಚಿಕ್ಕಮಗಳೂರು ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ನಡೆಸಿ ಸಾರ್ವಜನಿಕರಲ್ಲಿ ಆತಂಕ...

ಸಂವಿಧಾನದ ಆಶಯಗಳನ್ನು ಯುವಪೀಳಿಗೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು

ಚಿಕ್ಕಮಗಳೂರು:  ಸಂವಿಧಾನ ನಮಗೆ ನೀಡಿರುವ ಹಕ್ಕುಗಳ ಬಗ್ಗೆ ಮಾತನಾಡುವಷ್ಟೇ ಅದರಲ್ಲಿರುವ ಮೂಲಭೂತ ಕರ್ತವ್ಯಗಳನ್ನೂ ಪ್ರತಿಯೊಬ್ಬರೂ ಜೀವನದಲ್ಲಿ...

‘ಅಸ್ಪೃಶ್ಯತೆ ನಿವಾರಣೆಗೆ ಜನರ ಮನಸ್ಥಿತಿ ಬದಲಾಗಬೇಕು’

ಚಿಕ್ಕಮಗಳೂರು: ಸಂವಿಧಾನ ಮತ್ತು ಕಾನೂನಿನಿಂದ ಮಾತ್ರ ದೇಶದಲ್ಲಿರುವ ಮೇಲು-ಕೀಳು ಹಾಗೂ ಅಸ್ಪೃಶ್ಯತೆಯನ್ನು ಸಂಪೂರ್ಣವಾಗಿ ಹೋಗಲಾಡಿಸಲು ಸಾಧ್ಯವಿಲ್ಲ....

ಜಿಲ್ಲಾಸ್ಪತ್ರೆ ಸರಿಪಡಿಸುವಂತೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಪ್ರತಿಭಟನೆ

ಚಿಕ್ಕಮಗಳೂರು : ಜಿಲ್ಲಾ ಕೇಂದ್ರದಲ್ಲಿರುವ ಮಲ್ಲೇಗೌಡ ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಸರಿಪಡಿಸುವಂತೆ ಒತ್ತಾಯಿಸಿ ಇಂದು ಪ್ರಗತಿಪರ ಸಂಘಟನೆಗಳ...