Home namma chikmagalur chikamagalur ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್ ವಿರುದ್ಧ ಆಯೋಗದ ತೀರ್ಪು
chikamagalurHomeLatest Newsnamma chikmagalur

ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್ ವಿರುದ್ಧ ಆಯೋಗದ ತೀರ್ಪು

Share
Share

ಚಿಕ್ಕಮಗಳೂರು: ಸಕಾಲದಲ್ಲಿ ಆಹಾರ ಪದಾರ್ಥವನ್ನು ತಲುಪಿಸದೆ ಆಹಾರ ಸಾಮಗ್ರಿಗಳು ಹಾಳಾಗಲು ಕಾರಣವಾದ ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್ ಸಂಸ್ಥೆ ಸೇವಾ ನ್ಯೂನತೆ ಎಸಗಿತೆಂಬ ಹಿನ್ನೆಲೆಯಲ್ಲಿ ಸಂಸ್ಥೆಯ ವಿರುದ್ಧ ತೀರ್ಪು ನೀಡಿರುವ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಪರಿಹಾರ ಹಾಗೂ ಖರ್ಚು, ವೆಚ್ಚವನ್ನು ದೂರುದಾರರಿಗೆ ನೀಡುವಂತೆ ಆದೇಶ ನೀಡಿದೆ.

ನಗರದ ಹೌಸಿಂಗ್ ಬೋರ್ಡ್‌ನ ಟಿ.ಶಫೀಕ್ ಎಂಬುವವರ ಪತ್ನಿ ರೇಷ್ಮಾಬಾನು ಎಂಬುವವರು ಕೇರಳದ ಕಣ್ಣೂರು ಜಿಲ್ಲೆಯಲ್ಲಿರುವ ತಮ್ಮ ಪತಿಗೆ ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್ ಸಂಸ್ಥೆಯ ಮೂಲಕ ಆಹಾರ ಸಾಮಗ್ರಿಯ ಪಾರ್ಸೆಲ್ ಬುಕ್ಕಿಂಗ್ ಮಾಡಿ ೨೭೩ ರೂ.ಗಳನ್ನು ಪಾವತಿಸಿದ್ದರು.

ಸಂsಸ್ಥೆಯು ಎರಡು ದಿನಗಳಲ್ಲಿ ಆಹಾರ ಪದಾರ್ಥವನ್ನು ತಲುಪಿಸುವ ಭರವಸೆ ನೀಡಿತ್ತು. ಆದರೆ ನಿಗದಿತ ಸಮಯದೊಳಗೆ ತಲುಪಿಸದ ಕಾರಣ ಆಹಾರ ಪದಾರ್ಥಗಳು ಹಾಳಾಗಿದ್ದವು. ಈ ಹಿನ್ನೆಲೆಯಲ್ಲಿ ಡಿಟಿಡಿಸಿ ಎಕ್ಸ್‌ಪ್ರೆಸ್ ಸಂಸ್ಥೆಯ ಬೆಂಗಳೂರು ಕಚೇರಿಯ ವ್ಯವಸ್ಥಾಪಕ ನಿರ್ದೇಶಕರು, ಕಲ್ಯಾಣನಗರ ಶಾಖೆಯ ಶಾಖಾ ವ್ಯವಸ್ಥಾಪಕರು ಹಾಗೂ ವ್ಯವಸ್ಥಾಪಕರ ವಿರುದ್ಧ ಮಾರ್ಚ್ ೩ ರಂದು ರೇಷ್ಮಾಬಾನು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ನೀಡಿದ್ದರು.

ಈ ಕುರಿತು ವಿಚಾರಣೆ ನಡೆಸಿದ ಆಯೋಗವು ಮೇ ೨೭ ರಂದು ತೀರ್ಪು ನೀಡಿದ್ದು, ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್‌ನ ಕಲ್ಯಾಣನಗರ ಶಾಖೆಯ ಶಾಖಾ ವ್ಯವಸ್ಥಾಪಕರು ಹಾಗೂ ವ್ಯವಸ್ಥಾಪಕರ ವಿರುದ್ಧ ತೀರ್ಪು ನೀಡಿದ್ದು. ಪಾರ್ಸೆಲ್ ಬುಕ್ಕಿಂಗ್ ಮೊತ್ತ ೨೭೩ ರೂ.ಗಳು, ಪರಿಹಾರವಾಗಿ ೫ ಸಾವಿರ ರೂ. ಹಾಗೂ ಖರ್ಚು-ವೆಚ್ಚಕ್ಕಾಗಿ ೫ ಸಾವಿರ ರೂ.ಗಳನ್ನು ನೀಡುವಂತೆ ಆದೇಶ ನೀಡಿದೆ. ಈ ತೀರ್ಪನ್ನು ೪೫ ದಿನಗಳ ಒಳಗಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರನ್ನು ಪ್ರಕರಣದಿಂದ ಕೈಬಿಡಲಾಗಿದೆ.

ಆಯೋಗದ ಅಧ್ಯಕ್ಷ ಎನ್.ಆರ್.ಚೆನ್ನಕೇಶವ, ಸದಸ್ಯರಾದ ಈ.ಪ್ರೇಮಾ ಹಾಗೂ ಡಾ.ಮಂಜುನಾಥ ಎಂ.ಬಮ್ಮನಕಟ್ಟಿ ಅವರು ಈ ಆದೇಶವನ್ನು ನೀಡುವ ಮೂಲಕ ಇನ್ಶೂರೆನ್ಸ್ ಸಂಸ್ಥೆಯು ಸೇವಾ ನ್ಯೂನತೆ ಎಸಗಿರುವುದನ್ನು ಪುರಾವೆ ಸಹಿತ ಸಾಬೀತುಪಡಿಸಿದ್ದು, ಗ್ರಾಹಕರಿಗೆ ನ್ಯಾಯ ಒದಗಿಸಿ ಜಾಗೃತಿ ಮೂಡಿಸಿದ್ದಾರೆ.

Commission’s verdict against DTDC Express Limited

Share

Leave a comment

Leave a Reply

Your email address will not be published. Required fields are marked *

Don't Miss

ಎಂ.ಸಿ. ಹಳ್ಳಿಯಲ್ಲಿ ಕಡವೆ ಬೇಟೆ-ಆರೋಪಿಗಳ ಬಂಧನ

ತರೀಕೆರೆ: ಲಕ್ಕವಳ್ಳಿ ವಲಯದ ಎಂ.ಸಿ. ಹಳ್ಳಿ ಶಾಖೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಡವೆಯನ್ನು ಬೇಟೆ ಮಾಡಿ ಮಾಂಸ ಕತ್ತರಿಸುತ್ತಿರುವ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ...

ಸೆ.21ರಿಂದ ಮುಖ್ಯಮಂತ್ರಿ ನಿವಾಸದವರೆಗೆ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು: ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ ಅಥವಾ ನೇರಪಾವತಿ ವ್ಯವಸ್ಥೆಗೆ ಒಳಪಡಿಸಿ ಸೇವಾ ಭದ್ರತೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಸೆ.21ರಿಂದ ತುಮಕೂರಿನ ಸಿದ್ದಗಂಗಾ ಮಠದಿಂದ...

Related Articles

ಪೂನಾ ಒಪ್ಪಂದ ಯಥಾವತ್ತಾಗಿ ಜಾರಿಗೆ ಆಗ್ರಹಿಸಿ ದಸಂಸ ಪ್ರತಿಭಟನೆ

ಚಿಕ್ಕಮಗಳೂರು:  ದಲಿತ ಸಮುದಾಯದ ಪ್ರಾತಿನಿಧ್ಯ ಹಾಗೂ ಹಕ್ಕುಗಳನ್ನು ಸಂರಕ್ಷಿಸುವ ಉ ದ್ದೇಶದಿಂದ ಪೂನಾ ಒಪ್ಪಂದ ಯಥಾವತ್ತಾಗಿ...

ಶೇ.90ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಚಿಕ್ಕಮಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ಚಿಕ್ಕಮಗಳೂರು ಜಿಲ್ಲಾ ಘಟಕದ ವತಿಯಿಂದ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ...

ರಾಜ್ಯ ಹೆದ್ದಾರಿಯಲ್ಲಿ ದೈತ್ಯ ಒಂಟಿ ಸಲಗ ಪ್ರತ್ಯಕ್ಷ

ಚಿಕ್ಕಮಗಳೂರು : ಪ್ರಸಿದ್ದ ಧಾರ್ಮಿಕ ಕ್ಷೇತ್ರಗಳಾದ ಶೃಂಗೇರಿ ಹಾಗೂ ಹೊರನಾಡಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ...

ಸಾರಿಗೆ ಸಂಸ್ಥೆಯ ಬಸ್ – ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ

ಮೂಡಿಗೆರೆ: ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ...