Home namma chikmagalur ಯೂಟ್ಯೂಬರ್ ಸಮೀರ್ ವಿರುದ್ಧ ಕಡೂರಿನಲ್ಲಿ ದೂರು
namma chikmagalurchikamagalurHomeLatest News

ಯೂಟ್ಯೂಬರ್ ಸಮೀರ್ ವಿರುದ್ಧ ಕಡೂರಿನಲ್ಲಿ ದೂರು

Share
Share

ಕಡೂರು: ಯೂಟ್ಯೂಬರ್ ಸಮೀರ್ ವಿರುದ್ಧ ಚಿಕ್ಕಮಗಳೂರು ಜಿಲ್ಲೆಯ ಕಡೂರು ಮೂಲದ ಮಂಜು ಜೈನ್ ಎಂಬುವರು ದೂರು ದಾಖಲಿಸಿದ್ದಾರೆ.

ಕಡೂರು ಪೊಲೀಸ್‌ ಠಾಣೆಗೆ ಸಲ್ಲಿಸಿರುವ ದೂರುನಲ್ಲಿ, ಸಮೀರ್ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಸಿ, ಸಮಾಜದ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಮಂಜು ಜೈನ್‌ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ BNS ಕಾಯ್ದೆಯಡಿ ಏಳು ಸೆಕ್ಷನ್‌ಗಳನ್ನು ಉಲ್ಲೇಖಿಸಿ ದೂರು ನೀಡಿದ್ದಾರೆ.

ಈ ಕುರಿತು ಹೇಳಿಕೆ ನೀಡಿದ ಮಂಜು ಜೈನ್‌, ರಾಜ್ಯದಾದ್ಯಂತ ಸಮೀರ್ ವಿರುದ್ಧ ಈಗಾಗಲೇ ಸುಮೋಟೊ ಪ್ರಕರಣ ದಾಖಲಾಗಿದೆ. ಆದರೆ, ನೇರವಾಗಿ ವ್ಯಕ್ತಿಯಿಂದ ದಾಖಲಾಗಿರುವ ದೂರು ಇದುವರೆಗೂ ಇರಲಿಲ್ಲ.

ನಾನು ನೀಡಿರುವ ಈ ದೂರು ರಾಜ್ಯದಲ್ಲಿ ಮೊದಲ ಅಧಿಕೃತ ದೂರು ಎಂಬುದಾಗಿ ಪರಿಗಣಿಸಬಹುದು ಎಂದು ಹೇಳಿದ್ದಾರೆ.

ಇದರೊಂದಿಗೆ ಸಮೀ‌ರ್ ವಿರುದ್ಧದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸಮೀರ್ ವಿರುದ್ಧ ರಾಜ್ಯದ ಹಲವು ಕಡೆಗಳಲ್ಲಿ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯ ವ್ಯಕ್ತವಾಗುತ್ತಿದ್ದರೆ, ಮಂಜು ಜೈನ್‌ ಅವರ ಈ ಕ್ರಮದಿಂದ ಪ್ರಕರಣ ಇನ್ನಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ.

ದೂರು ಸ್ವೀಕರಿಸಿರುವ ಕಡೂರು ಪೊಲೀಸರು, ಇನ್ನೂ FIR ದಾಖಲು ಆಗಿಲ್ಲ. ಸುಮೋಟೊ ಪ್ರಕರಣ ದಾಖಲಾಗಿರುವ ಠಾಣೆಗೆ ಈ ಪ್ರಕರಣವನ್ನು ವರ್ಗಾವಣೆ ಮಾಡಿ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದಾರೆ.

Complaint filed against YouTuber Sameer in Kadur

Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...

Related Articles

ನೀವು ಬೆಳಿಗ್ಗೆ ಕಸ ಗುಡಿಸದಿದ್ದರೆ ದೇಶವೇ ನಡೆಯಲ್ಲ ಧೈರ್ಯವಾಗಿ ಹಕ್ಕು ಕೇಳಿ

ಚಿಕ್ಕಮಗಳೂರು:  “ನೀವು ಬೆಳಿಗ್ಗೆ ಎದ್ದು ಕಸ ಗುಡಿಸದಿದ್ದರೆ ಈ ದೇಶದ ಯಾವುದೇ ನಗರ, ಪಟ್ಟಣ, ಊರುಗಳು...

ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಮೂಲಕವೇ ವ್ಯವಹರಿಸಿ

ಚಿಕ್ಕಮಗಳೂರು: ಪ್ರತೀ ಕಚೇರಿಗಳಲ್ಲೂ ಇ-ಆಫೀಸ್ ಮೂಲಕವೇ ಪತ್ರ ಹಾಗೂ ಕಡತಗಳನ್ನು ನಿರ್ವಹಿಸುವಂತೆ ಸರ್ಕಾರದ ಅಪರ ಮುಖ್ಯ...

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....