Home namma chikmagalur ಕರ್ತಿಕೆರೆ ಪಂಚಾಯತಿ ಅಕ್ರಮ ವಿರುದ್ಧ ಲೋಕಾಯುಕ್ತಕ್ಕೆ ದೂರು
namma chikmagalurchikamagalurHomeLatest News

ಕರ್ತಿಕೆರೆ ಪಂಚಾಯತಿ ಅಕ್ರಮ ವಿರುದ್ಧ ಲೋಕಾಯುಕ್ತಕ್ಕೆ ದೂರು

Share
Share

ಚಿಕ್ಕಮಗಳೂರು:  ಇಲ್ಲಿನ ಕರ್ತಿಕೆರೆ ಗ್ರಾಮ ಪಂಚಾಯಿತಿಯಲ್ಲಿ ಅಕ್ರಮ ಅವ್ಯವಹಾರಗಳು ನಡೆದಿರುವುದನ್ನು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಇದೇ ಪಂಚಾಯಿತಿ ಕಾಂಗ್ರೆಸ್ ಸದಸ್ಯ ಸಿ.ಎಲ್. ಸಿದ್ದರಾಮೇಗೌಡ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ೨೦೨೧-೨೨ ಮತ್ತು ೨೦೨೨-೨೩ನೇ ಸಾಲಿನಲ್ಲಿ ಪಂಚಾಯಿತಿಯಲ್ಲಿ ಯಾವುದೇ ಕ್ರಿಯಾ ಯೋಜನೆ ಮಾಡದೆ ಸಾಮಾನ್ಯ ಸಭೆಯಲ್ಲಿ ಚರ್ಚಿಸದೆ ೧೫ನೇ ಹಣಕಾಸು ಮತ್ತು ವರ್ಗ-೧ ವಿಕಾಸ್ ಹಣ ಪಂಚಾಯಿತಿಗೆ ಸೇರಿದ ಕೆರೆಗಳ ಅಭಿವೃದ್ಧಿಗೆ ಮೀಸಲಿಟ್ಟ ೭.೧೦ ಲಕ್ಷ ರೂ ಹಾಗೂ ಚೆಕ್ ಬಳಸಿ ೨೪ ಲಕ್ಷ ಒಟ್ಟು ಸುಮಾರು ೩೧ ಲಕ್ಷ ರೂ ಹಣವನ್ನು ಅಧ್ಯಕ್ಷರೂ ಮತ್ತು ಪಿಡಿಓ ಶಾಮೀಲಾಗಿ ಅಕ್ರಮ ಎಸಗಿದ್ದಾರೆಂದು ದೂರಿದರು.

ಯೂನಿಯನ್ ಬ್ಯಾಂಕಿನಲ್ಲಿ ಸೆಲ್ಪ್ ಚೆಕ್ ಮುಖಾಂತರ ಮತ್ತು ಹಿರೇಮಗಳೂರು ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ ೫ ರಿಂದ ೬ ಚೆಕ್ ಬಳಸಿ ೨೪ ಲಕ್ಷ ರೂ ಪಡೆದುಕೊಂಡು ವಂಚಿಸಿದ್ದಾರೆಂದು ಆರೋಪಿಸಿದರು.

ಈ ಸಂಬಂಧ ಜಿಲ್ಲಾಧಿಕಾರಿಗಳು ಜಿ.ಪಂ ಸಿಇಓ, ತಾ.ಪಂ ಇಓ ಇವರುಗಳಿಗೆ ಹಲವಾರು ಬಾರಿ ಲಿಖಿತ ದೂರು ನೀಡಿದ್ದರೂ ಕಾನೂನು ಕ್ರಮ ಕೈಗೊಳ್ಳದೆ ಆರೋಪಿಗಳನ್ನು ರಕ್ಷಣೆ ಮಾಡಿದ್ದಾರೆಂದು ತಿಳಿಸಿದರು.

ಸಾರ್ವಜನಿಕರ ಹಣವನ್ನು ದುರುಪಯೋಗಪಡಿಸಿಕೊಂಡಿರುವ ಇವರುಗಳ ಮೇಲೆ ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಲು ನಿರ್ಧರಿಸಲಾಗಿದ್ದು, ವಿಳಂಭವಾದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ನಗರಸಭೆ ನಾಮಿನಿ ಸದಸ್ಯ ಪ್ರಕಾಶ್‌ರೈ, ಚಂದ್ರಣ್ಣ, ಮಂಜುನಾಥ, ಲಾಕೇಶ್ ಉಪಸ್ಥಿತರಿದ್ದರು

Complaint to Lokayukta against illegality of Karthikere Panchayat

Share

Leave a comment

Leave a Reply

Your email address will not be published. Required fields are marked *

Don't Miss

ಮಹಿಳೆ ಗಮನ ಬೇರೆಡೆ ಸೆಳೆದು ₹ 3.90 ಲಕ್ಷ ವಂಚನೆ

ಕಡೂರು: ಕಳೆದ ಜೂನ್‌ನಲ್ಲಿ ಗಮನ ಬೇರೆಡೆಗೆ ಸೆಳೆದು ಗ್ರಾಹಕರೋರ್ವರ ಖಾತೆಯಿಂದ ₹3.90 ಲಕ್ಷಡ್ರಾ ಮಾಡಿರುವ ಪ್ರಕರಣ ಕುರಿತು ಮಹಿಳೆಯೊಬ್ಬರುಕಡೂರು ಪೊಲೀಸರಿಗೆ ಗುರುವಾರ ದೂರು ನೀಡಿದ್ದಾರೆ. ತಾಲೂಕಿನ ಚಿಕ್ಕಪಟ್ಟಣಗೆರೆಯ ಸುನಂದ ಟಿ.ಎಂ. ಎಂಬವರು...

ಶಿವಮೊಗ್ಗ-ಶೃಂಗೇರಿ ಮಾರ್ಗ ಪರಿಗಣಿಸಿ

ಚಿಕ್ಕಮಗಳೂರು: ನೂತನ ರೈಲ್ವೆ ಯೋಜನೆಗೆ ಅಂತಿಮ ಸ್ಥಳ ನಿರ್ಧಾರ ಸಮೀಕ್ಷೆ ಮಾಡುವ ವೇಳೆ ಶಿವಮೊಗ್ಗ, ಭದ್ರಾವತಿ, ಮುತ್ತಿನಕೊಪ್ಪ, ಎನ್.ಆರ್.ಪುರ, ಬಾಳೆಹೊನ್ನೂರು, ಜಯಪುರ, ಕೊಪ್ಪ, ಹರಿಹರಪುರ, ಶೃಂಗೇರಿ ರೈಲ್ವೆ ಮಾರ್ಗವನ್ನು ಪ್ರಮುಖವಾಗಿ ಪರಿಗಣಿಸಬೇಕು...

Related Articles

ಮಾಧ್ಯಮ ಕ್ಷೇತ್ರ ಶಾಸಕಾಂಗ-ಕಾರ್ಯಾಂಗ-ಸಾರ್ವಜನಿಕರ ನಡುವೆ ಸೇತುವೆ

ಚಿಕ್ಕಮಗಳೂರು:  ಮಾಧ್ಯಮ ಕ್ಷೇತ್ರ ಪ್ರಜಾಪ್ರಭುತ್ವದ ನಾಲ್ಕನೆ ಅಂಗ ಎಂಬ ಮಾತು ಅಕ್ಷರಶಃ ಸತ್ಯ. ಸರಕಾರಗಳ ಯೋಜನೆಗಳ...

ರಕ್ತಕ್ಕೆ ಪರ್ಯಾಯ ವ್ಯವಸ್ಥೆಗಳಿಲ್ಲ ಅವಶ್ಯಕತೆ ಅರಿತು ರಕ್ತದಾನ ಮಾಡಬೇಕು

ಚಿಕ್ಕಮಗಳೂರು:  ರಕ್ತಕ್ಕೆ ಪರ್ಯಾಯ ವ್ಯವಸ್ಥೆಗಳಿಲ್ಲ. ಈ ದಿಸೆಯಲ್ಲಿ ರಕ್ತದ ಅವಶ್ಯಕತೆ ಅರಿತು ರಕ್ತದಾನ ಮಾಡಬೇಕು. ಇದು...

ಭೂದಾನ-ಗೋದಾನ-ಅನ್ನದಾನಕ್ಕಿಂತ ಮತದಾನ ಶ್ರೇಷ್ಠ

ಚಿಕ್ಕಮಗಳೂರು:  ಭೂದಾನ, ಗೋದಾನ, ಅನ್ನದಾನಕ್ಕಿಂತ ಸಮಾಜದ ನಾಗರೀಕರಿಗೆ ಮ ತದಾನ ಸರ್ವಶ್ರೇಷ್ಟ. ಆಸೆ-ಆಕಾಂಕ್ಷೆಗಳಿಗೆ ಒಳಗಾಗದೇ ಪ್ರಜೆಗಳ...

ಮರದಿಂದ ಬಿದ್ದು ಕಾರ್ಮಿಕ ಸಾವು

ಕಳಸ: ಮರದಿಂದ ಬಿದ್ದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಾಫಿ ಎಸ್ಟೇಟ್...