Home Comprehensive development:ಮುಖ್ಯಮಂತ್ರಿಗಳ ವಿಶೇಷ ಅನುದಾನ ಪಡೆದು ನಗರದ ಸಮಗ್ರ ಅಭಿವೃದ್ಧಿ
Home

Comprehensive development:ಮುಖ್ಯಮಂತ್ರಿಗಳ ವಿಶೇಷ ಅನುದಾನ ಪಡೆದು ನಗರದ ಸಮಗ್ರ ಅಭಿವೃದ್ಧಿ

Share
ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಗುದ್ದಲಿಪೂಜೆ
ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಗುದ್ದಲಿಪೂಜೆ
Share

ಚಿಕ್ಕಮಗಳೂರು:  ಮುಂದಿನ ದಿನಗಳಲ್ಲಿ ಚಿಕ್ಕಮಗಳೂರು ನಗರವನ್ನು ಮುಖ್ಯಮಂತ್ರಿಗಳ ವಿಶೇಷ ಅನುದಾನ ಪಡೆದು ಸಮಗ್ರ ಅಭಿವೃದ್ಧಿಪಡಿಸುವುದಾಗಿ ಶಾಸಕ ಹೆಚ್.ಡಿ ತಮ್ಮಯ್ಯ ಭರವಸೆ ನೀಡಿದರು.

ಅವರು ಇಂದು ನಗರದ ಕೋಟೆ ಬಡಾವಣೆ ಬೇಲೂರು ರಸ್ತೆ ನೂತನ ಬಸ್ ನಿಲ್ದಾಣ ಹಾಗೂ ನಗರದ ಆಯ್ದ ಪ್ರಮುಖ ಭಾಗಗಳಲ್ಲಿ ಅತ್ಯುನ್ನತ ಮಾದರಿಯ ೪ ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.

ಮುಖ್ಯಮಂತ್ರಿಗಳ ವಿಶೇಷ ಅನುದಾನ ಬಿಡುಗಡೆಯಾದ ಬಳಿಕ ಕಾಮಗಾರಿಗಳನ್ನು ಆರಂಭಿಸಿ ಮೇ ತಿಂಗಳೊಳಗೆ ನಗರದ ಎಲ್ಲಾ ರಸ್ತೆಗಳನ್ನು ಸಂಪೂರ್ಣ ಅಭಿವೃದ್ಧಿಪಡಿಸಲು ಗುರಿ ಹೊಂದಲಾಗಿದೆ ಎಂದು ಹೇಳಿದರು.

ನಗರದ ವಿವಿದೆಡೆ ವಿನೂತನ ಮಾದರಿಯಲ್ಲಿ ಹೊರದೇಶದಲ್ಲಿ ನಿರ್ಮಾಣವಾಗಿರುವ ಸುಸಜ್ಜಿತ ಬಸ್ ನಿಲ್ದಾಣಗಳನ್ನು ನಿರ್ಮಾಣ ಮಾಡಲು ಇಂದು ಗುದ್ದಲಿ ಪೂಜೆ ನೆರವೇರಿಸಿದ್ದು, ಈ ಬಸ್ ನಿಲ್ದಾಣಗಳನ್ನು ಅತ್ಯಾಧುನಿಕ ರೀತಿಯಲ್ಲಿ ಗ್ಲಾಸ್ ಅಳವಡಿಸಿರುವುದರಿಂದ ಇದು ಸರ್ಕಾರದ ಆಸ್ತಿ ಅಲ್ಲ ಸಾರ್ವಜನಿಕರ ಆಸ್ತಿ ಎಂದು ಭಾವಿಸಿ ಹಾನಿಯಾಗದಂತೆ ನೋಡಿಕೊಳ್ಳಬೇಕೆಂದು ಮನವಿ ಮಾಡಿದರು.

ಪಕ್ಷಾತೀತವಾಗಿ ಎಲ್ಲಾ ಪದಾಧಿಕಾರಿಗಳು ಭಾಗವಹಿಸಿ ಅಭಿವೃದ್ಧಿಗೆ ಕೈಜೋಡಿಸಿರುವ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ ಅವರು, ಇಲ್ಲಿ ಒಂದು ಬಸ್ ನಿಲ್ದಾಣ ನಿರ್ಮಾಣ ಮಾಡಬೇಕೆಂಬ ಹಲವು ದಿನಗಳ ಬೇಡಿಕೆ ಇಂದು ಈಡೇರಿದ್ದು, ಸಂಸದ ಜಯರಾಂ ರಮೇಶ್ ನಿಧಿಯಿಂದ ೧೦.೯೨ ಲಕ್ಷ ರೂ ಹಾಗೂ ತಮ್ಮ ಶಾಸಕರ ನಿಧಿಯಿಂದ ೫ ಲಕ್ಷ ರೂ ನಿಧಿಯಲ್ಲಿ ಈ ಬಸ್ ನಿಲ್ದಾಣ ನಿರ್ಮಿಸಲಾಗುತ್ತಿದೆ ಎಂದರು.

೧೦.೯೦ ಲಕ್ಷ ರೂ ವೆಚ್ಚದಲ್ಲಿ ಹಿರೇಮಗಳೂರಿನಲ್ಲಿ ಬಸ್ ನಿಲ್ದಾಣ, ನಗರಾಭಿವೃದ್ಧಿ ಪ್ರಾಧಿಕಾರದ ಬಡಾವಣೆ ಕಲ್ಯಾಣ ನಗರದಲ್ಲಿ ೧೦ ಲಕ್ಷ ರೂ ವೆಚ್ಚದಲ್ಲಿ ಬಸ್ ನಿಲ್ದಾಣ ಹಾಗೂ ಕಣಿವೇ ರುದ್ರೇಶ್ವರ ದೇವಸ್ಥಾನದ ಬಳಿ ಹೌಸಿಂಗ್ ಬೋರ್ಡ್ ಆರನೇ ಹಂತದ ಜನರಿಗೆ ಹಾಗೂ ದಾಸರಹಳ್ಳಿ ಜನರಿಗೆ ಅನುಕೂಲವಾಗುವಂತೆ ೧೦.೯೦ ಲಕ್ಷ ರೂ ವೆಚ್ಚದಲ್ಲಿ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗುವುದೆಂದರು.

ಈ ನಾಲ್ಕು ಕಾಮಗಾರಿಗಳಿಗೆ ಅಗತ್ಯವಾಗಿ ಬೇಕಾಗಿರುವ ಹಣ ಲಭ್ಯವಿದ್ದು, ಇನ್ನೊಂದು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಲಾಗುವುದೆಂದು ತಿಳಿಸಿದ ಅವರು, ಜನಪ್ರತಿನಿಧಿಗಳಾಗಿ ಎಲ್ಲಾ ಜನರ ಆಶಯಗಳಿಗೆ ಸ್ಪಂದಿಸಿ ಪಕ್ಷಾತೀತವಾಗಿ ಕೆಲಸ ಮಾಡಬೇಕಾಗಿರುವುದು ಅಗತ್ಯವಾಗಿದೆ ಎಂದರು.

ನಗರದಲ್ಲಿ ಹಾನಿಯಾಗಿರುವ ರಸ್ತೆಗಳ ದುರಸ್ಥಿಗೆ ಈಗಾಗಲೇ ಕಾಮಗಾರಿ ಆರಂಭಗೊಂಡಿದ್ದು ಅಂಚೆ ಕಚೇರಿ ರಸ್ತೆ, ಒಕ್ಕಲಿಗರ ಸಮುದಾಯ ಭವನದ ರಸ್ತೆ, ಶಂಕರಪುರ ಐದನೇ ಕ್ರಾಸ್ ರಸ್ತೆ ಸೇರಿದಂತೆ ಎಲ್ಲಾ ರಸ್ತೆಗಳನ್ನು ದುರಸ್ಥಿಪಡಿಸಲು ಜಯರಾಂ ರಮೇಶ್ ರವರ ಮನವೊಲಿಸಿ ಅನುದಾನ ತಂದಿರುವುದರ ಜೊತೆಗೆ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿ ಚಿಕ್ಕಮಗಳೂರು ನಗರಕ್ಕೆ ಸೀಮಿತವಾಗಿ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿರುವುದಾಗಿ ತಿಳಿಸಿದರು.

ಗವನಹಳ್ಳಿಯಿಂದ ರಾಂಪುರದವರೆಗೆ ಉತ್ತಮ ಗುಣಮಟ್ಟದ ವಿದ್ಯುತ್ ದೀಪ ಅಳವಡಿಸಲು ಈಗಾಗಲೇ ಡಿಪಿಆರ್ ಮಾಡಲಾಗಿದೆ. ಮುಂದೆ ಬೇಲೂರು ಬಸ್ ನಿಲ್ದಾಣದಿಂದ ಹಿರೇಮಗಳೂರುವರೆಗೆ ಬೀದಿದೀಪ ಅಳವಡಿಸಲು ಕ್ರಮವಹಿಸಲಾಗುವುದೆಂದು ಹೇಳಿದರು.

ನಗರಸಭಾಧ್ಯಕ್ಷೆ ಸುಜಾತ ಶಿವಕುಮಾರ್ ಮಾತನಾಡಿ, ನಾವು ಅಧ್ಯಕ್ಷರಾದ ನಂತರ ಸಿ ಟಿ ಬಸ್ ನಿಲ್ದಾಣಗಳನ್ನು ನಿರ್ಮಿಸಬೇಕೆಂದು ಸಾರ್ವಜನಿಕರಿಂದ ಬಹಾಳ ಬೇಡಿಕೆ ಬಂದ ಪರಿಣಾಮ ಇಂದು ಶಾಸಕರು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಈಡೇರಿಸಿದ್ದಾರೆ ಎಂದರು.

ಸಾರ್ವಜನಿಕರು ಈ ಅತ್ಯಾಧುನಿಕ ಬಸ್ ನಿಲ್ದಾಣಗಳನ್ನು ತಮ್ಮ ಆಸ್ತಿ ಎಂಬಂತೆ ಬಳಸಿಕೊಳ್ಳಬೇಕೆಂದು ಮನವಿ ಮಾಡಿದ ಅವರು,ಸಾರ್ವಜನಿಕರು ಸರ್ಕಾರದೊಂದಿಗೆ ಕೈಜೋಡಿಸಿದಾಗ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ವಿನಂತಿಸಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್ ಅಹಮದ್ ಮಾತನಾಡಿ, ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಬಸ್ ನಿಲ್ದಾಣಗಳು ಇಲ್ಲದೆ ತೊಂದರೆಯಾಗುತ್ತಿತ್ತು. ಇಂದು ನಗರದ ವಿವಿಧ ನಾಲ್ಕು ಭಾಗಗಳಲ್ಲಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಗುದ್ದಲ್ಲಿಪೂಜೆ ನೆರವೇರಿಸಿರುವುದು ಶ್ಲಾಘನೀಯ ಎಂದರು.

ನಗರದಲ್ಲಿ ಪರವಾನಗಿ ಇಲ್ಲದೆ ಅನಧಿಕೃತ ಕಟ್ಟಡಗಳು ನಿರ್ಮಾಣವಾಗುತ್ತಿರುವ ಬಗ್ಗೆ ಗಮನ ಸೆಳೆದಾಗ ಅಂತಹ ಕಟ್ಟಡ ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಡಿಎ ಆಯುಕ್ತರು ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಸಿಡಿಎ ಮಾಜಿ ಅಧ್ಯಕ್ಷ ಎಂ.ಎಲ್. ಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ. ಮಂಜೇಗೌಡ, ನಗರ ಕಾಂಗ್ರೆಸ್ ಅಧ್ಯಕ್ಷ ತನೂಜ್ ನಾಯ್ಡು, ಗ್ರಾಮಸ್ಥರಾದ ದಯಾನಂದ ನಾಯ್ಡು, ವೆಂಕಟೇಧ್ ನಾಯ್ಡು, ನಗರಸಭೆ ಸದಸ್ಯರಾದ ಮಧುಕುಮಾರ್ ರಾಜ್ ಅರಸ್, ಶಾದಬ್, ಆನಂದ, ಸೋಮಣ್ಣ ಹಾಗೂ ನಗರಸಭೆ ಪೌರಾಯುಕ್ತ ಬಿ.ಸಿ. ಬಸವರಾಜ್, ಸಿಡಿಎ ಆಯುಕ್ತರಾದ ನಾಗರತ್ನ ಮತ್ತಿತರರು ಉಪಸ್ಥಿತರಿದ್ದರು.

Comprehensive development of the city by receiving special grants from the Chief Minister

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...