ಚಿಕ್ಕಮಗಳೂರು,: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಂಯುಕ್ತ ಆಶ್ರಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಮೇ ೨೪ ರಂದು ಮಧ್ಯಾಹ್ನ ೨ ಗಂಟೆಗೆ ನಗರದ ಕುವೆಂಪು ಕಲಾಮಂದಿರದಲ್ಲಿ ನಡೆಯಲಿದೆ.
ಇಂಧನ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಉದ್ಘಾಟಿಸಲಿರುವ ಈ ಕಾರ್ಯಕ್ರಮದಲ್ಲಿ ಮಾನ್ಯ ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ, ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ, ಮಾನ್ಯ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್, ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಆರ್.ಹೆಬ್ಬಾಳ್ಕರ್, ವಿಧಾನ ಪರಿಷತ್ ಮಾನ್ಯ ಉಪಸಭಾಪತಿ ಎಂ.ಕೆ.ಪ್ರಾಣೇಶ್, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ, ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ಪಾಲ್ಗೊಳ್ಳುವರು.
ಚಿಕ್ಕಮಗಳೂರು ಶಾಸಕ ಹೆಚ್.ಡಿ.ತಮ್ಮಯ್ಯ ಅಧ್ಯಕ್ಷತೆ ವಹಿಸಲಿದ್ದು, ರಾಜ್ಯಸಭೆಯ ಸದಸ್ಯ ಜೈರಾಮ್ ರಮೇಶ್, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಹಾಸನ ಸಂಸದ ಶ್ರೇಯಸ್ ಎಂ.ಪಟೇಲ್, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ, ಶಾಸಕರಾದ ತರೀಕೆರೆಯ ಜಿ.ಹೆಚ್.ಶ್ರೀನಿವಾಸ್, ಕಡೂರಿನ ಕೆ.ಎಸ್.ಆನಂದ್, ಮೂಡಿಗೆರೆಯ ನಯನ ಮೋಟಮ್ಮ, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ, ಡಾ.ಧನಂಜಯ ಸರ್ಜಿ, ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷ ಬಿ.ಹೆಚ್.ಹರೀಶ್, ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್, ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ, ಚಿಕ್ಕಮಗಳೂರು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಮಲ್ಲೇಶ್‌ಸ್ವಾಮಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಾರ್ಯದರ್ಶಿ ಶಮ್ಲಾ ಇಕ್ಬಾಲ್, ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್., ಜಿ.ಪಂ.ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಟಿ.ರಾಘವೇಂದ್ರ ಭಾಗವಹಿಸುವರು.
Conference of beneficiaries of Pancha Guarantee Schemes on May 24th
Leave a comment