ಚಿಕ್ಕಮಗಳೂರು: ಮೂರು ಕಾಡು ಗಿಳಿಗಳನ್ನು ಅಕ್ರಮವಾಗಿ ಬಂಧನದಲ್ಲಿಟ್ಟು ಸಾಕುತ್ತಿದ್ದ ಆರೋಪದಲ್ಲಿ ನಗರದ ನೆಹರುನಗರದ ನಿವಾಸಿ ಬಾಬು ಎಂಬುವವರ ವಿರುದ್ಧ ವನ್ಯಜೀವಿ ಸಂರಕ್ಷಣೆ ಕಾಯ್ದೆ- ೧೯೭೨ ರ ಅನ್ವಯ ಪ್ರಕರಣ ದಾಖಲಿಸಿರುವ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದವರು ತನಿಖೆ ನಡೆಸುತ್ತಿದ್ದಾರೆ.
ಸ್ವತಃ ಕೃಷಿಕರಾಗಿರುವ ಬಾಬು ಈ ಕಾಡುಗಿಳಿಗಳನ್ನು ಸರ್ಕಾರದ ಯಾವುದೇ ಪರವಾನಿಗಿ ಇಲ್ಲದೆ ಮನೆಯ ಪಕ್ಕದ ಶೆಡ್‌ನಲ್ಲಿ ಸಾಕಲಾಗುತ್ತಿತ್ತೆನ್ನಲಾಗಿದೆ. ಈ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಸೋಮವಾರ ಈ ದಾಳಿ ನಡೆಸಿ ಗಿಳಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸಿಐಡಿ ಅರಣ್ಯ ಘಟಕದ ಪೊಲೀಸ್ ಉಪ ಮಹಾನಿರೀಕ್ಷಕರಾದ ಜಿ.ಸಂಗೀತಾ, ಮಡಿಕೇರಿಯ ಸಿ.ಐ.ಡಿ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ (ಪ್ರಭಾರ) ಪಿ.ಎಸ್.ಸುದರ್ಶನ್ ಇವರ ಮಾರ್ಗದರ್ಶನದಲ್ಲಿ ಪೊಲೀಸ್ ಉಪ ನಿರೀಕ್ಷಕ ಬಾಬುದ್ದೀನ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಎಸ್.ಕೆ.ದಿವಾಕರ, ಕೆ.ಎಸ್.ದಿಲೀಪ್, ಹೆಚ್.ನಟರಾಜ್, ವೈ.ಹೇಮಾವತಿ, ಹಾಗೂ ಚಾಲಕ ತಿಮ್ಮಶೆಟ್ಟಿ ಮತ್ತಿತರರಿದ್ದ ತಂಡ ಭಾಗವಹಿಸಿತ್ತು.
Confiscation of illegally kept wild parrots
Leave a comment