Home namma chikmagalur chikamagalur ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ.ರಾಜೇಗೌಡ ಮತ್ತೆ ಶಾಸಕರಾಗಿ ಮುಂದುವರಿಕೆ
chikamagalurHomeLatest Newsnamma chikmagalur

ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ.ರಾಜೇಗೌಡ ಮತ್ತೆ ಶಾಸಕರಾಗಿ ಮುಂದುವರಿಕೆ

Share
Share

ನವದೆಹಲಿ:  ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಿಂದ ಶಾಸಕ ಸ್ಥಾನ ಕಳೆದುಕೊಂಡಿದ್ದ ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ ಅವರಿಗೆ ಸುಪ್ರಿಂ ಕೋರ್ಟ್‌ ಬಿಗ್‌ ರಿಲೀಫ್‌ ನೀಡಿದ್ದು, ಹೈಕೋರ್ಟ್‌ನ ಆದೇಶಕ್ಕೆ ಮಧ್ಯಂತರ ತಡೆ ನೀಡಿ ಶಾಸಕ ಸ್ಥಾನವನ್ನು ಮುಂದುವರೆಸುವಂತೆ ಆದೇಶಿಸಿ, ಚುನಾವಣಾ ಆಯೋಗಕ್ಕೆ ನೋಟೀಸ್‌ ನೀಡಿ ವಿಚಾರಣೆಯನ್ನು ಮೇ.21 ಕ್ಕೆ ಮುಂದೂಡಿದೆ.

ಇದರೊಂದಿಗೆ ಕಾಂಗ್ರೆಸ್​​​ನ ರಾಜೇಗೌಡ ಅವರಿಗೆ ಮತ್ತೆ ಶಾಸಕ ಸ್ಥಾನ ದಕ್ಕಿದಂತಾಗಿದ್ದು, ಇನ್ನೊಂದೆಡೆ ಮೊನ್ನೆ ಅಷ್ಟೇ ಮರು ಮತ ಎಣಿಕೆಯಲ್ಲಿ ಗೆದ್ದು ಶಾಸಕರಾಗಿ ಪ್ರಮಾಣ ವಚನ ಸ್ವೀರಿಕರಿಸಿದ್ದ ಬಿಜೆಪಿಯ ಜೀವರಾಜ್​​ಗೆ ತಾತ್ಕಾಲಿಕ ಹಿನ್ನಡೆಯಾದಂತಾಗಿದೆ.

ಅಂಚೆ ಮತ ಮರು ಎಣಿಕೆಗೆ ಆದೇಶಿಸಿದ್ದ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಕಾಂಗ್ರೆಸ್​​ನ ರಾಜೇಗೌಡ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ ಸುಪ್ರೀಂಕೋರ್ಟ್​ ವಿಚಾರಣೆ ನಡೆಸಿದ್ದು, ​​ ಹೈಕೋರ್ಟ್‌ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ. ಮರು ಮತ ಎಣಿಕೆಯ ದಾಖಲೆ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿ, ವಿಚಾರಣೆಯನ್ನು ಮೇ 21ಕ್ಕೆ ಮುಂದೂಡಿದೆ. ಅಂಚೆ ಮತ ಮರು ಎಣಿಕೆಯಲ್ಲಿ ಬಿಜೆಪಿ ಡಿ.ಎನ್‌. ಜೀವರಾಜ್‌ ಗೆಲುವು ಸಾಧಿಸಿದ್ದರು. ಆದರೆ, ಇದೀಗ ಯಥಾಸ್ಥಿತಿ ಮುಂದುವರಿಸಲು ಸುಪ್ರೀ ಕೋರ್ಟ್‌ ಸೂಚನೆ ನೀಡಿದೆ. ಇದರಿಂದ ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ.ರಾಜೇಗೌಡ ಅವರೇ ಮತ್ತೆ ಶಾಸಕರಾಗಿ ಮುಂದುವರಿಯಲಿದ್ದಾರೆ.

ಸುಪ್ರೀಂಕೋರ್ಟ್​ ಆದೇಶದ ಬಗ್ಗೆ ಕಾಂಗ್ರೆಸ್​​​​ನ ಟಿ.ಡಿ.ರಾಜೇಗೌಡ ಟಿವಿ9ಗೆ ಪ್ರತಿಕ್ರಿಯಿಸಿದ್ದು, ಹೈಕೋರ್ಟ್ ಆದೇಶ ಮತ್ತು ನಂತರದ ಪ್ರಕ್ರಿಯೆಗೆ ತಡೆ ನೀಡಿದ್ದು, ಸುಪ್ರೀಂಕೋರ್ಟ್​ನಲ್ಲಿ‌ ನನಗೆ ನ್ಯಾಯ ಸಿಕ್ಕಿದೆ. ಅಂಚೆ ಮತ ಎಣಿಕೆಯಲ್ಲಿ 2 ಮತ ನನ್ನ ಪರವಾಗಿ ಬಂದಿತ್ತು. ನನ್ನ ಮತಗಳು ಹೆಚ್ಚಾಗುವ ಬದಲು ಕಡಿಮೆ‌ ತೋರಿಸಲಾಗಿತ್ತು. ಈ‌ ಹಂತದಲ್ಲಿ ‌ಅಕ್ರಮವಾಗಿದೆ ಎಂದು ಅನುಮಾನ ಇತ್ತು. ಹೀಗಾಗಿ ನಾನು ಸುಪ್ರೀಂಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಿದ್ದೆ. ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಇದರಿಂದ ನ್ಯಾಯ ಸಿಕ್ಕಂತಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

2023 ರ ಚುನಾವಣೆಯಲ್ಲಿ 201 ಮತಗಳ ಅಂತರದಿಂದ ಗೆದ್ದಿದ್ದ ಕಾಂಗ್ರೆಸ್ ರಾಜೇಗೌಡರು, 2026 ರ ಮರು ಎಣಿಕೆಯಲ್ಲಿ 52 ಮತಗಳಿಂದ ಸೋಲನ್ನಪ್ಪಿದ್ದರು. ಕಳೆದ ಬಾರಿ ಮಾನ್ಯವಾಗಿದ್ದ 255 ಮತಗಳು ಈ ಬಾರಿ ಅಮಾನ್ಯವಾಗಿದ್ದು ಹೇಗೆ ಎಂದು ಹೈಕೋರ್ಟ್​​​ನ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

1822 ಅಂಚೆ ಮತಗಳ ಪೈಕಿ 3 ನೋಟಾ, 267 ಮತಗಳು ಅಸಿಂಧು, 1540 ಮತಗಳು ಸಿಂಧು ಆಗಿದ್ದು, ಈ ಪೈಕಿ ಬಿಜೆಪಿಯ ಡಿ.ಎನ್ ಜೀವರಾಜ್ 692 ಮತಗಳು ಪಡೆದಿದ್ದರೆ, ಬಿಜೆಪಿಯ ಟಿ.ಡಿ‌ ರಾಜೇಗೌಡ 569 ಮತಗಳು ಪಡೆದುಕೊಂಡಿದ್ದರು. ಇದರೊಂದಿಗೆ ರಾಜೇಗೌಡ 201 ಮತಗಳಿಂದ ಗೆಲುವು ‌ಸಾಧಿಸಿದ್ದರು.

ಆದ್ರೆ, ಮರು ಎಣಿಕೆ ಬಳಿಕ ಡಿ.ಎನ್ ಜೀವರಾಜ್ ಅವರಿಗೆ 690 ಮತ ಬಂದಿದ್ದು, ಟಿ.ಡಿ ರಾಜೇಗೌಡ ಅವರಿಗೆ 314 ಮತಗಳು ಸಿಕ್ಕಿವೆ. 255 ಮತಗಳು ಡಬಲ್ ಟಿಕ್‌ ಆಗಿರುವ ಹಿನ್ನೆಲೆ ಅಸಿಂಧುವ ಆಗಿವೆ. ಹೀಗಾಗಿ 2026 ಮೇ‌ 2ರಂದು ನಡೆದ ಮರು ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿಯ ಜೀವರಾಜ್ 52 ಮತಗಳಿಂದ ಗೆಲುವು ಸಾಧಿಸಿದ್ದರು.

2023ರ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಜೀವರಾಜ್‌ ಅವರು ಸೋಲು ಕಂಡಿದ್ದು, ಕಾಂಗ್ರೆಸ್ ರಾಜೇಗೌಡ ಅವರು ಗೆಲುವು ಸಾಧಿಸಿದ್ದರು. ಆದ್ರೆ, ಅಂಚೆ ಮತಗಳ ಎಣಿಕೆಯಲ್ಲಿ ಲೋಪವಿಧೆಯೆಂದು ಪ್ರಶ್ನಿಸಿ ಜೀವರಾಜ್ ಅವರು ನ್ಯಾಯಾಲಯದ ಮೊರೆಹೋಗಿದ್ದರು.

ಇದನ್ನು ವಿಚಾರಣೆ ನಡೆಸಿದ್ದ ಹೈಕೋರ್ಟ್, ಮರು ಎಣಿಕೆಗೆ ಆದೇಶ ನೀಡಿತ್ತು. ಅದರಂತೆ ಮರು ಎಣಿಕೆ ಸಂದರ್ಭದಲ್ಲಿ ಜೀವರಾಜ್‌ ಅವರು ಗೆಲುವು ಸಾಧಿಸಿದ್ದು, ಚುನಾವಣಾ ಆಯೋಗ ಜೀವರಾಜ್‌ ಅವರನ್ನು ಶಾಸಕ ಎಂದು ಘೋಷಿಸಿ ದೃಢೀಕರಣ ಪತ್ರ ನೀಡಿತ್ತು.ಬಳಿಕ ಜೀವರಾಜ್ ಅವರು ಎರಡುವರೆ ವರ್ಷದ ಬಳಿಕ ಮತ್ತೆ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

Congress candidate T.D. Rajegowda to continue as MLA again

Share

Leave a comment

Leave a Reply

Your email address will not be published. Required fields are marked *

Don't Miss

ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರಿಂದ ಸಿಹಿ ಹಂಚಿ ಸಂಭ್ರಮಾಚರಣೆ

ಚಿಕ್ಕಮಗಳೂರು:  ದಾವಣಗೆರೆ ಮತ್ತು ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ ಹಾಗೂ ಕೇರಳ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ವಿಜಯ ಪತಾಕೆ ಹಾರಿಸಿದ ಹಿನ್ನೆಲೆಯಲ್ಲಿ ಸೋಮವಾರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ನಗರದ ಹನುಮಂತಪ್ಪ...

ಮರಗಸಿ ಮಾಡುವಾಗ ವಿದ್ಯುತ್ ಶಾಕ್ ತಗುಲಿ ಕಾರ್ಮಿಕ ಬಲಿ

ಚಿಕ್ಕಮಗಳೂರು: ಸಿಲ್ವರ್ ಮರ ಮರಗಸಿ ಮಾಡುವ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕರೊಬ್ಬರು ವಿದ್ಯುತ್ ಶಾಕ್ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಕರುಣಾಜನಕ ಘಟನೆ ಚಿಕ್ಕಮಗಳೂರು ತಾಲೂಕಿನ ಕೆರೆಮನೆ ಎಸ್ಟೇಟ್‌ನಲ್ಲಿ ಸಂಭವಿಸಿದೆ. ಮೃತ ದುರ್ದೈವಿಯನ್ನು ತಮಿಳುನಾಡು...

Related Articles

ಮಣ್ಣುಮುಕ್ಕ ಹಾವು ಮಾರಾಟಕ್ಕೆ ಯತ್ನ: ಐವರು ಬಂಧನ

ಚಿಕ್ಕಮಗಳೂರು: ಅಪರೂಪದ ವನ್ಯಜೀವಿಯಾದ ಮಣ್ಣುಮುಕ್ಕ ಹಾವು (Red Sand Boa) ಮಾರಾಟಕ್ಕೆ ಯತ್ನಿಸುತ್ತಿದ್ದ ಐವರು ಆರೋಪಿಗಳನ್ನು...

ಚಾರ್ಮಾಡಿ ಘಾಟ್‌ನ 10ನೇ ತಿರುವಿನಲ್ಲಿ ಒಂಟಿ ಸಲಗ

ಚಿಕ್ಕಮಗಳೂರು: ಚಾರ್ಮಾಡಿ ಘಾಟ್‌ನ 10ನೇ ತಿರುವಿನಲ್ಲಿ ಒಂಟಿ ಸಲಗ ರಸ್ತೆ ಮಧ್ಯೆ ನಿಂತ ಪರಿಣಾಮ ವಾಹನ ಸವಾರರು...

ಭಾರತ ಸಾರ್ವಭೌಮ ಪ್ರಜಾ ಪ್ರಭುತ್ವ ರಾಷ್ಟ್ರ

ಚಿಕ್ಕಮಗಳೂರು:  ಭಾರತ ಸಾರ್ವಭೌಮ, ಸಮಾಜವಾದಿ, ಧರ್ಮನಿರಪೇಕ್ಷ ದೊಡ್ಡ ಪ್ರಜಾ ಪ್ರಭುತ್ವ ರಾಷ್ಟ್ರ ಇಲ್ಲಿ ಸರ್ವರಿಗೂ ಸಮಪಾಲು,...

ಕೊಲೆ ಆರೋಪಿ ಗಲ್ಲಿಗೇರಿಸಲು ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ಕೊಡಗು ಜಿಲ್ಲೆಯ ಪತ್ರಿಕೋದ್ಯಮದ ವಿದ್ಯಾರ್ಥಿನಿ ರಂಜಿತಾ ಅವರನ್ನು ಅತ್ಯಾಚಾರ ಮಾಡಿ ಕೊಲೆಗೈದಿರುವ ಆರೋಪಿಗಳನ್ನು ಗಲ್ಲಿಗೇರಿಸುವಂತೆ...