ಚಿಕ್ಕಮಗಳೂರು: ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಎಂ.ಎಸ್. ಅನಂತ್ (52 )ಅನಾರೋಗ್ಯದಿಂದ ಅಕಾಲಿಕವಾಗಿ ನಿಧನರಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಅನಂತ್ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಬುಧವಾರ (ನ.4) ಮುಂಜಾನೆ ನಿಧನರಾಗಿ ದ್ದಾರೆ.
ಮಾಜಿ ಸಚಿವೆ ಮೋಟಮ್ಮ ನವರ ಅಣ್ಣನ ಮಗನಾಗಿದ್ದ ಅನಂತ್ ಇಂಜಿನಿಯರ್ ಪದವೀದರರಾಗಿದ್ದರು. ಪದವಿ ನಂತರ ರಾಜಕೀಯ ಮತ್ತು ಸಾರ್ವಜನಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿ ದ್ದರು.
ಮೂಡಿಗೆರೆ ಕಸಬಾ ಕ್ಷೇತ್ರದಿಂದ ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ಕಾಂಗ್ರೇಸ್ ಪಕ್ಷದಲ್ಲಿ ಪಕ್ಷದ ಜಿಲ್ಲಾ ವಕ್ತಾರ ಸೇರಿದಂತೆ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದರು.
ವಿವಿಧ ರಾಜ್ಯಗಳ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಉಸ್ತುವಾರಿ ಯಾಗಿ ಕೆಲಸ ಮಾಡಿದ್ದರು. ಮೃತ ಅನಂತ್ ಅವರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
Congress leader M.S. Ananth passes away
Leave a comment