Home namma chikmagalur chikamagalur ಕಾಂಗ್ರೆಸ್ ನಿಷ್ಠಾವಂತ ಕಾರ್ಯಕರ್ತರಿಗೆ ಸರಿಯಾದ ಮನ್ನಣೆ ಸಿಕ್ಕಿಲ್ಲ
chikamagalurHomeLatest Newsnamma chikmagalur

ಕಾಂಗ್ರೆಸ್ ನಿಷ್ಠಾವಂತ ಕಾರ್ಯಕರ್ತರಿಗೆ ಸರಿಯಾದ ಮನ್ನಣೆ ಸಿಕ್ಕಿಲ್ಲ

Share
Share

ಚಿಕ್ಕಮಗಳೂರು: ದಾವಣಗೆರೆಯ ಬೆನ್ನಲ್ಲೇ ಈಗ ಕಾಫಿನಾಡು ಚಿಕ್ಕಮಗಳೂರಿನಲ್ಲೂ ಕಾಂಗ್ರೆಸ್ ವಿರುದ್ಧ ಸ್ವಪಕ್ಷಿಯರಿಂದಲೇ ಅಸಮಾಧಾನ ವ್ಯಕ್ತವಾಗುತ್ತಿದೆ.

ಎನ್.ಆರ್.ಪುರ ತಾಲೂಕಿನ ಹಂತೂರು ಗ್ರಾಮದಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿನ ಸೇತುವೆ ಹಾಗೂ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಈ ಸರ್ಕಾರಿ ಕಾರ್ಯಕ್ರಮದಲ್ಲಿ ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿದ ಸ್ಥಳೀಯ ನಾಯಕರಿಗೆ ಮತ್ತು ನಿಷ್ಠಾವಂತ ಕಾರ್ಯಕರ್ತರಿಗೆ ಸರಿಯಾದ ಮನ್ನಣೆ ಸಿಕ್ಕಿಲ್ಲ ಎನ್ನುವುದು ಕಾರ್ಯಕರ್ತರ ಮುಖ್ಯ ಆರೋಪವಾಗಿದೆ.

ಈ ಕುರಿತು ಕೆಪಿಸಿಸಿ ಕಿಸಾನ್ ಘಟಕದ ರಾಜ್ಯಾಧ್ಯಕ್ಷರಾದ ಸಚಿನ್ ಮೀಗಾ ಅವರು ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರಿಗೆ ಪತ್ರ ಬರೆದು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಸದಸ್ಯರು, ಎಪಿಎಂಸಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಂತಹ ತಳಮಟ್ಟದ ನಾಯಕರೇ ಪಕ್ಷದ ನಿಜವಾದ ಬಲವಾಗಿದ್ದು, ಇಂತಹ ಸರ್ಕಾರಿ ವೇದಿಕೆಗಳಲ್ಲಿ ಅವರಿಗೆ ಪ್ರಾತಿನಿಧ್ಯ ನೀಡದಿದ್ದರೆ ಅವರ ಮನೋಬಲ ಕುಗ್ಗುತ್ತದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪಕ್ಷ ಮತ್ತು ಸರ್ಕಾರದ ನಡುವಿನ ಬಾಂಧವ್ಯ ಬಲಗೊಳ್ಳಬೇಕಾದರೆ ಸ್ಥಳೀಯ ನಾಯಕತ್ವವನ್ನು ಗುರುತಿಸುವುದು ಅತ್ಯಗತ್ಯ ಎಂದು ಸಚಿನ್ ಮೀಗಾ ಮನವಿ ಮಾಡಿದ್ದಾರೆ. ಇದರೊಂದಿಗೆ, ಸೇತುವೆಯ ಮೇಲೆ ಸ್ಥಾಪಿಸಲಾಗಿರುವ ಮುಖ್ಯಮಂತ್ರಿಯವರ ಪ್ರತಿಮೆಗೆ ಸೂಕ್ತ ಭದ್ರತೆಯನ್ನು ಒದಗಿಸಬೇಕು ಎಂಬ ಆಗ್ರಹವನ್ನೂ ಅವರು ಪತ್ರದ ಮೂಲಕ ಸರ್ಕಾರಕ್ಕೆ ತಲುಪಿಸಿದ್ದಾರೆ.

ಈ ಬೆಳವಣಿಗೆಯು ಚಿಕ್ಕಮಗಳೂರು ಜಿಲ್ಲಾ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಸಂಘಟನೆಯ ಒಳಜಗಳವನ್ನು ಬಹಿರಂಗಪಡಿಸಿದೆ.

Congress loyalists in Chikmagalur have not received due recognition.

Share

Leave a comment

Leave a Reply

Your email address will not be published. Required fields are marked *

Don't Miss

ನಕಲಿ “ಐ.ಎ.ಎಸ್” ಮಿಥುನ್ ಬಂಧನ

ಬೆಂಗಳೂರು: ಚಿಕ್ಕಮಗಳೂರು ಮೂಲದ ಮಿಥುನ್ ಎಂಬತಾ ಐ.ಎ.ಎಸ್.ನ ನಕಲಿ ದಾಖಲೆ ಸೃಷ್ಟಿ ಮಾಡಿ ಹಲವರಿಗೆ ವಂಚನೆ ಮಾಡಿದ್ದು ಬೆಂಗಳೂರಿನ ಅಮೃತಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಅರೋಗ್ಯ ಇಲಾಖೆಯ ಎನ್.ಹೆಚ್.ಎಮ್.ನ ಉಸ್ತುವಾರಿ ಎಂದು...

ನಗರದಲ್ಲಿ ಹಾಡುಹಗಲೇ ಶಿಕ್ಷಕಿಯ ಮಾಂಗಲ್ಯ ಸರ ಅಪಹರಣ

ಚಿಕ್ಕಮಗಳೂರು: ಹಾಡುಹಗಲೇ ಶಿಕ್ಷಕಿಯ ಕೊರಳಿಗೆ ಕೈ ಹಾಕಿ ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋದ ಘಟನೆ ಸೋಮವಾರ ಸಂಜೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ಈ ಕುರಿತು ಚಿಕ್ಕಮಗಳೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ...

Related Articles

ಪ್ರಯಾಣಿಕರೇ ಬಸ್ ತಳ್ಳುವ ಕೆಎಸ್‌ಆರ್‌ಟಿಸಿ ಬಸ್‌

ಚಿಕ್ಕಮಗಳೂರು: ಸರ್ಕಾರದ ಉಚಿತ ಯೋಜನೆಗಳ ಆರ್ಭಟದ ನಡುವೆ ಸಾರಿಗೆ ಬಸ್‌ಗಳ ನಿರ್ವಹಣೆ ಅಧೋಗತಿಗೆ ತಲುಪಿದೆಯೇ? ಇಂತಹದೊಂದು ಪ್ರಶ್ನೆ...

ಏ.23ಕ್ಕೆ ಕರಾಳಕೃತ್ಯ ಖಂಡಿಸಿ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ

ಚಿಕ್ಕಮಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಡೆಯದ ಅಪಚಾರ ಏಪ್ರಿಲ್ ೨೩ ರಂದು ಪಶ್ಚಿಮಬಂಗಾಳದಲ್ಲಿ ನಡೆಯುತ್ತಿದೆ. ಇದನ್ನು ವಿರೋಧಿಸಿ...

ಭದ್ರಾ ಅಭಯಾರಣ್ಯದಲ್ಲಿ ಭ್ರಷ್ಟಾಚಾರ

ಚಿಕ್ಕಮಗಳೂರು:ಭದ್ರಾ ಅಭಯಾರಣ್ಯದಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಮೌನವಹಿಸಿದ್ದಾರೆಂದು ದಲಿತ ಸಂಘರ್ಷಸಮಿತಿ ರಾಜ್ಯ ಸಂಘಟನಾ ಸಂಚಾಲಕ...

ಜನತೆ ಬಿಸಿಲಿನ ಬೇಗೆಗೆ ತತ್ತರಿಸಿ ಹೋದ ಕಾಫಿನಾಡಿನ ಜನತೆ

ಚಿಕ್ಕಮಗಳೂರು: ಮಲೆನಾಡಿನ ಮಡಿಲು, ತಂಪಾದ ಹವಾಮಾನಕ್ಕೆ ಹೆಸರಾದ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಈ ಬಾರಿ ಸೂರ್ಯನ ಪ್ರಖರತೆ...