ಚಿಕ್ಕಮಗಳೂರು: ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಜೊತೆಗೆ ಬಿಜೆಪಿ ಏಜೆಂಟ್ ರೀತಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ತಾಲೂಕು ಕಚೇರಿಯಿಂದ ಆಜಾದ್ ಪಾರ್ಕ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಆಜಾದ್ ಪಾರ್ಕ್ನಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಎಐಸಿಸಿ ಕಾರ್ಯದರ್ಶಿ ಬಿ.ಎಂ.ಸಂದೀಪ್, ಎಸ್‌ಐಆರ್ ಪ್ರಕ್ರಿಯೆ ಮೂಲಕ ಅರ್ಹ ೧೩ ಕೋಟಿ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ ಕೆಲಸ ಮಾಡಲಾಗುತ್ತಿದೆ. ಈ ಮೂಲಕ ದೇಶದ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲಾಗುತ್ತಿದೆ. ಬಿಜೆಪಿ ತಮಗೆ ಮತ ನೀಡುವವರ ಹೆಸರನ್ನು ಮಾತ್ರ ಉಳಿಸಿಕೊಳ್ಳುವ ಕೆಲಸದಲ್ಲಿ ತಲ್ಲೀನವಾಗಿದೆ. ಇದಕ್ಕೆ ಜ್ಞಾನೇಶ್ ಕುಮಾರ್ ಸಹಕಾರ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಯುವ ಮತದಾರರು ಕೇಂದ್ರ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಇದೇ ಕಾರಣಕ್ಕೆ ಫಾರಂ ನಂ. ೬ಕ್ಕೆ ಬದಲಾವಣೆ ತಂದು ಯುವ ಮತದಾರರ ಮತದಾನದ ಹಕ್ಕು ಕಿತ್ತುಕೊಳ್ಳುವ ಕೆಲಸ ಮಾಡಲಾಗುತ್ತಿದೆ. ಅಂಬೇಡ್ಕರ್ ಪ್ರಜೆಗಳಿಗೆ ಮತದಾನದ ಹಕ್ಕು ನೀಡಿದರೆ ಬಿಜೆಪಿ ಮತದಾನದ ಹಕ್ಕು ಕಿತ್ತುಕೊಳ್ಳುವ ಕೆಲಸ ಮಾಡುತ್ತಿದೆ ಎಂದು ದೂರಿದರು.
ಭದ್ರಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮAತ್ ಮಾತನಾಡಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ೪೦೦ ಕ್ಷೇತ್ರಗಳಲ್ಲಿ ಗೆಲ್ಲುತ್ತೇನೆ ಎಂದು ಹೇಳಿಕೊಂಡಿತ್ತು. ಆದರೆ ೨೦೪೦ ಕ್ಷೇತ್ರಗಳಲ್ಲಿ ಗೆದ್ದು ಮುಖಭಂಗ ಅನುಭವಿಸಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿರಂತರವಾಗಿ ಮಹಿಳೆಯರು, ವಿದ್ಯಾರ್ಥಿಗಳು, ರೈತರು, ಕಾರ್ಮಿಕರಿಗೆ ದ್ರೋಹವಾಗುತ್ತಿದೆ ಎಂದು ದೂರಿದರು.
ಬಿಜೆಪಿ ಸರ್ಕಾರದ ವಿರುದ್ಧ ಜನ ತಿರುಗಿ ಬಿದ್ದಿರುವುದರಿಂದ ಆ ಪಕ್ಷದ ನಾಯಕರಿಗೆ ಈಗಾಗಲೇ ಆತಂಕ ಶುರುವಾಗಿದೆ. ಇದೇ ಕಾರಣದಿಂದ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೇಂದ್ರ ಸರ್ಕಾರ ಕೆಲಸ ಮಾಡಲಾರಂಭಿಸಿದೆ. ಹಿಂದೆ ರಾಹುಲ್ ಗಾಂಧಿ ಅವರು ಎತ್ತಿದ ಎಲ್ಲ ವಿಷಯಗಳು ಇಂದು ಸತ್ಯವಾಗುತ್ತಿವೆ ಎಂದರು.
ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಬಿಜೆಪಿ ಏಜೆಂಟ್ ರೀತಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೂಡಲೇ ಅವರನ್ನು ಮುಖ್ಯ ಆಯುಕ್ತ ಸ್ಥಾನದಿಂದ ವಜಾಗೊಳಿಸಿ ಬಂಧಿಸಬೇಕು. ಜ್ಞಾನೇಶ್ ಕುಮಾರ್ ಒಬ್ಬ ಭ್ರಷ್ಟ ಅಧಿಕಾರಿ. ಮುಂದಿನ ದಿನಗಳಲ್ಲಿ ರಾಜಕೀಯವಾಗಿ ಬಿಜೆಪಿಯಿಂದ ತಮಗೆ ಅನುಕೂಲವಾಗಲಿದೆ ಎಂಬ ಕಾರಣಕ್ಕಾಗಿ ಜನರಿಗೆ ಅನ್ಯಾಯ ಮಾಡುತ್ತಿದ್ದಾರೆ. ಇದನ್ನೇ ಇಟ್ಟುಕೊಂಡು ಬಿಜೆಪಿಗರು ಅವರನ್ನು ಬೆದರಿಸಿ ಮಾಡಬಾರದ ಕೆಲಸ ಮಾಡಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಪಿ.ಮಂಜೇಗೌಡ ಮಾತನಾಡಿ, ಕೇಂದ್ರ ಸರ್ಕಾರ ಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಈ ಮೂಲಕ ಮುಂಬರುವ ಚುನಾವಣೆಯಲ್ಲಿ ವಾಮಮಾರ್ಗದ ಮೂಲಕ ಅಧಿಕಾರ ಪಡೆಯಲು ಪ್ರಯತ್ನಿಸುತ್ತಿದೆ. ಜ್ಞಾನೇಶ್ ಕುಮಾರ್ ಅವರಿಗೆ ಸಂಬಳ ನೀಡುತ್ತಿರುವುದು ಜನರ ತೆರಿಗೆ ಹಣದಿಂದ. ಆದರೆ ಅವರು ಬಿಜೆಪಿ ನಾಯಕರು ನಿಮ್ಮನ್ನು ಲೋಕಸಭಾ ಸದಸ್ಯರನ್ನಾಗಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದರಿಂದಾಗಿ ಒಂದು ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ವಿಧಾನಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ಕಾಂಗ್ರೆಸ್ ಮುಖಂಡರಾದ ಎಂ.ಸಿ.ಶಿವಾನAದ ಸ್ವಾಮಿ, ಎಂ.ಎಲ್.ಮೂರ್ತಿ, ಎಚ್.ಎಚ್.ದೇವರಾಜ್, ಕೆ.ಮಹಮದ್, ನಯಾಜ್ ಅಹಮದ್, ಅಜೀಜ್ ಮತ್ತಿತರರಿದ್ದರು.
Congress workers stage a protest demanding the dismissal and arrest of Gyanesh Kumar.
Leave a comment