Home namma chikmagalur chikamagalur ಸೇವಾ ನ್ಯೂನತೆ ದುರಸ್ತಿಪಡಿಸುವಂತೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ತೀರ್ಪು
chikamagalurCrime NewsHomeLatest Newsnamma chikmagalur

ಸೇವಾ ನ್ಯೂನತೆ ದುರಸ್ತಿಪಡಿಸುವಂತೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ತೀರ್ಪು

Share
Share

ಚಿಕ್ಕಮಗಳೂರು: ಆಸ್ಪತ್ರೆಗೆ ರೋಗಿಗಳ ಅನುಕೂಲಕ್ಕಾಗಿ ಸಂಸ್ಥೆಯೊಂದರಿಂದ ಖರೀದಿಸಿದ ನೀರು ಪೂರೈಕೆಯ ಯಂತ್ರ ಕೈಕೊಟ್ಟಾಗ ದುರಸ್ತಿಗೆ ಮುಂದಾಗದೆ ಸೇವಾ ನ್ಯೂನತೆ ಎಸಗಿದ ಹಿನ್ನೆಲೆಯಲ್ಲಿ ಸಂಸ್ಥೆಯ ವಿರುದ್ಧ ತೀರ್ಪು ನೀಡಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಕೂಡಲೇ ಯಂತ್ರ ದುರಸ್ತಿ ಮಾಡಿಕೊಡುವಂತೆ ಆದೇಶ ನೀಡಿದೆ.

ನಗರದ ಮಲ್ಲಂದೂರು ರಸ್ತೆಯ ಚೇತನ ನರ್ಸಿಂಗ್ ಹೋಂನ ಡಾ.ಕುಚೇಂದ್ರ ಹೆಚ್,ಜಿ. ಅವರು ರೋಗಿಗಳ ಅನುಕೂಲಕ್ಕಾಗಿ ಬೆಂಗಳೂರು ಬೊಮ್ಮಸಂದ್ರ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮೆ| ಯುರೇಖಾ ಫಾರ್ಬಸ್ ಲಿಮಿಟೆಡ್ ಸಂಸ್ಥೆಯಿಂದ ಶುದ್ಧವಾದ ಬಿಸಿ ಹಾಗೂ ತಂಪಾದ ನೀರು ಪೂರೈಸುವ ಯಂತ್ರವನ್ನು ಖರೀದಿಸಿ ಆಸ್ಪತ್ರೆಯಲ್ಲಿ ಅಳವಡಿಸಿದ್ದರು. ಜೊತೆಗೆ ವಾರ್ಷಿಕ ನಿರ್ವಹಣೆ ಹಾಗೂ ದುರಸ್ತಿ ಸಲುವಾಗಿ ಸಹ ಡಾ.ಕುಚೇಂದ್ರ ಸಂಸ್ಥೆಗೆ ಹಣ ಪಾವತಿಸಿದ್ದರು.

ಈ ನಡುವೆ ಯಂತ್ರದಲ್ಲಿ ಬಿಸಿನೀರು ಪೂರೈಕೆಯಾಗದೆ ಸಮಸ್ಯೆ ಉಂಟಾಗಿದ್ದು, ಈ ಬಗ್ಗೆ ಸಂಸ್ಥೆಗೆ ತಿಳಿಸಿ ಯಂತ್ರವನ್ನು ದುರಸ್ತಿಪಡಿಸಿಕೊಡುವಂತೆ ಕೋರಿದ್ದರೂ ಸಂಸ್ಥೆಯವರು ಯಾವುದೇ ಕ್ರಮ ಕೈಗೊಳ್ಳದೆ ಸೇವಾ ನ್ಯೂನತೆ ಎಸಗಿದ್ದರೆನ್ನಲಾಗಿದೆ. ಈ ಬಗ್ಗೆ ಡಾ.ಕುಚೇಂದ್ರ ಅವರು ಕಳೆದ ಜನವರಿ ೮ ರಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ನೀಡಿದ್ದರು.

ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ ಆಯೋಗವು, ಚೇತನ ನರ್ಸಿಂಗ್ ಹೋಂಗೆ ಪೂರೈಸಿರುವ ಶುದ್ಧ ನೀರಿನ ಘಟಕದ ಬಿಸಿನೀರು ಪೂರೈಕೆ ಸಾಮಗ್ರಿಯನ್ನು ಬದಲಾಯಿಸಿ, ಯಂತ್ರವನ್ನು ಕೂಡಲೇ ದುರಸ್ತಿ ಮಾಡಿಕೊಡುವುದಲ್ಲದೆ, ವಾರ್ಷಿಕ ನಿರ್ವಹಣೆ ಮತ್ತು ದುರಸ್ತಿಗಾಗಿ ಪಡೆದ ಮೊತ್ತ ೧೬,೩೯೯ ರೂ.ಗಳನ್ನು ದೂರುದಾರರಿಗೆ ಮರಳಿಸುವಂತೆ ಮತ್ತು ಪರಿಹಾರವಾಗಿ ೧೦,೦೦೦ ರೂ. ಹಾಗೂ ಪ್ರಕರಣದ ಖರ್ಚು-ವೆಚ್ಚಕ್ಕಾಗಿ ೫,೦೦೦ ರೂ.ಗಳನ್ನು ಡಾ.ಕುಚೇಂದ್ರ ಅವರಿಗೆ ಪಾವತಿಸುವಂತೆ ಸಂಸ್ತೆಗೆ ಸೂಚಿಸಿದೆ. ತೀರ್ಪನ್ನು ೪೫ ದಿನಗಳೊಳಗಾಗಿ ಪಾಲಿಸಬೇಕಿದ್ದು, ತಪ್ಪಿದಲ್ಲಿ ತೀರ್ಪಿನಲ್ಲಿರುವ ಮೊತ್ತವನ್ನು ಪಾವತಿಸುವವರೆಗೆ ವಾರ್ಷಿಕ ಶೇ.೬ ರ ಬಡ್ಡಿಯನ್ನು ನೀಡುವಂತೆ ಆದೇಶಿಸಿದೆ.

ಆಯೋಗದ ಅಧ್ಯಕ್ಷರಾದ ಎನ್.ಆರ್.ಚೆನ್ನಕೇಶವ, ಸದಸ್ಯರಾದ ಈ.ಪ್ರೇಮಾ ಮತ್ತು ಡಾ.ಮಂಜುನಾಥ ಎಂ.ಬಮ್ಮನಕಟ್ಟಿ ಅವರು ಈ ಆದೇಶವನ್ನು ನೀಡುವ ಮೂಲಕ ಸೇವಾ ನ್ಯೂನತೆ ಆಗಿರುವುದನ್ನು ಪುರಾವೆ ಸಹಿತ ಸಾಬೀತುಪಡಿಸಿದ್ದು, ಗ್ರಾಹಕರಿಗೆ ನ್ಯಾಯ ಒದಗಿಸಿ ಹಿತರಕ್ಷಣೆ ಮಾಡಲಾಗಿದೆ ಎಂದು ಜಿಲ್ಲಾ ಆಯೋಗದ ಸಹಾಯಕ ರಿಜಿಸ್ಟ್ರಾರ್ ಹಾಗೂ ಸಹಾಯಕ ಆಡಳಿತಾಧಿಕಾರಿ ಇಂದುಮತಿ ಬಾಯಿ ಬಿ.ಆರ್. ಆಯೋಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Consumer Disputes Redressal Commission’s ruling to rectify service deficiencies

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...