ಚಿಕ್ಕಮಗಳೂರು : ನಾಳೆ ನಗರದಲ್ಲಿ ಭೀಮಾ ಕೊರೇಗಾಂವ್ ವಿಜಯೋತ್ಸವ ಹಿನ್ನೆಲೆಯಲ್ಲಿ ದಲಿತ ಸಂಘಟನೆಗಳ ಒಕ್ಕೂಟ ಇಂದು ಬೈಕ್ ಜಾಥಾ ನಡೆಸಿತು. ನಗರದ ಪ್ರಮುಖ ರಸ್ತೆಗಳಲ್ಲಿ ನೀಲಿ ಬಾವುಟ ಕಟ್ಟಿಕೊಂಡು ನೂರಾರು ಯುವಕರು ರ್ಯಾಲಿ ನಡೆಸಿದರು. ತೊಗರಿ ಹಂಕಲ್ ವೃತದಿಂದ ಐ.ಜಿ ರಸ್ತೆ, ಆರ್ ಜಿ ರಸ್ತೆ ಬಸವನಹಳ್ಳಿ ಮುಖ್ಯ ರಸ್ತೆ, ಹನುಮಂತಪ್ಪ ವೃತ್ತ, ಎಂ.ಜಿ ರಸ್ತೆ, ಮಾರ್ಕೆಟ್ ರಸ್ತೆ ಮೂಲಕ ಸಾಗಿ ಜಿಲ್ಲಾ ಪಂಚಾಯಿತಿ ಆವರಣದಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಸಲ್ಲಿಸಲಾಯಿತು.
ನಾಳೆ ನಗರದ ಎಂ ಜಿ ರಸ್ತೆಯಲ್ಲಿ ಬೃಹತ್ ವಿಜಯೋತ್ಸವ ಸಾಗಲಿದ್ದು, ಜಿಲ್ಲೆಯ ಹತ್ತಾರು ದಲಿತ ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಬಳಿಕ ಕುವೆಂಪು ಕಲಮಂದಿರದಲ್ಲಿ ಸಮಾವೇಶ ನಡೆಯಲಿದ್ದು, ಮಹಾ ನಾಯಕ ಧಾರಾವಾಹಿಯ ಅಂಬೇಡ್ಕರ್ ಪಾತ್ರದಾರಿ ಅಥರ್ವ ಕಾರ್ವೆ, ಭೀಮ್ ಆರ್ಮಿ ಸಂಸ್ಥಾಪಕ ಚಂದ್ರಶೇಖರ್ ಆಜಾದ್ ರಾವಣ್, ಸಂಸದ ಶಶಿಕಾಂತ್ ಸೆಂಥಿಲ್ ಸೇರಿದಂತೆ ಹಲವರು ಕಾರ್ಯಕ್ರಮಕ್ಕೆ ಆಗಮಿಸಲಿದ್ದು, ಚಿಕ್ಕಮಗಳೂರು ನಗರ ಸಂಪೂರ್ಣ ನೀಲಿಮಯವಾಗಿದೆ. ನಗರದ ಎಲ್ಲೆಡೆ ಬ್ಯಾನರ್ ಬಂಟಿಂಗ್ಸ್ ಗಳು ರಾರಾಜಿಸುತ್ತಿದ್ದು, ವಿಜಯೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆದಿವೆ.
ಚಿಕ್ಕಮಗಳೂರು ನಗರದಲ್ಲಿ ವಾಹನ ಪಾರ್ಕಿಂಗ್ ನಿಷೇಧ
ಭೀಮ ಕೊರೆಗಾಂವ್ ವಿಜಯೋತ್ಸವ ಹಿನ್ನೆಲೆಯಲ್ಲಿ ನಗರದ ಕೆಲವು ರಸ್ತೆಗಳ ಮಾರ್ಗ ಬದಲಾವಣೆ ಮಾಡಿ, ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಎಂ.ಜಿ ರಸ್ತೆಯಲ್ಲಿ ಸಂಪೂರ್ಣ ವಾಹನಗಳ ಪಾರ್ಕಿಂಗ್ ನಿಷೇಧಿಸಲಾಗಿದ್ದು, ಟೌನ್ ಕ್ಯಾಂಟೀನ್, ಕೆಇಬಿ ಸರ್ಕಲ್ ಹಾಗೂ ಬಸವನಹಳ್ಳಿ ಮುಖ್ಯ ರಸ್ತೆಯಲ್ಲೂ ಕೂಡ ವಾಹನಗಳ ನಿಲುಗಡೆಗೆ ನಿರ್ಬಂಧ ಏರಲಾಗಿದೆ. ಮಾರ್ಕೆಟ್ ರಸ್ತೆಯನ್ನು ಒನ್ ವೇ ಮಾಡಲಾಗಿದ್ದು ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ.
ನಗರದಲ್ಲಿ ಮಧ್ಯ ಮಾರಾಟ ನಿಷೇಧ
ಭೀಮ ಕೊರೆಂಗಾವ್ ವಿಜಯೋತ್ಸವ ಹಿನ್ನೆಲೆಯಲ್ಲಿ ನಾಳೆ ಇಪ್ಪತ್ತು ಸಾವಿರ ಜನರು ಆಗಮಿಸುವ ಹಿನ್ನೆಲೆಯಲ್ಲಿ ಬೆಳಗ್ಗೆ 6 ಗಂಟೆಯಿಂದ ರಾತ್ರಿ 11 ವರೆಗೆ ಚಿಕ್ಕಮಗಳೂರು ನಗರ ಹಾಗೂ ಬಸವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸುತ್ತಮುತ್ತಲಿನ ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮಧ್ಯ ಮಾರಾಟ ಶೇಖರಣೆ ಮತ್ತು ಸಾಗಾಣಿಕೆಯನ್ನು ನಿಷೇಧಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.
ಕರ್ನಾಟಕ ಅಬಕಾರಿ ಅಧಿನಿಯಮ 1965 ವಿಧಿ 21 ರಲ್ಲಿ ದತ್ತವಾದ ಅಧಿಕಾರವನ್ನು ಚಲಾಯಿಸಿ ದಿನಾಂಕ 8.5 2025ರ ಬುಧವಾರ ಬೆಳಗ್ಗೆ 6 ಗಂಟೆಯಿಂದ ರಾತ್ರಿ 11ವರೆಗೆ ನಗರದ ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ನಮೂನೆಯ ಮಧ್ಯದ ಅಂಗಡಿಗಳನ್ನು ಮುಚ್ಚುವಂತೆಯೂ ಹಾಗೂ ಅಬಕಾರಿ ಪದಾರ್ಥಗಳ ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಸಿಸಿದ್ದಾರೆ.
Leave a comment