Home namma chikmagalur chikamagalur ಗುಡುಗು ಸಿಡಿಲಿನ ಆರ್ಭಟಕ್ಕೆ ಬಸ್ ತಂಗುದಾಣದನಲ್ಲಿದ್ದ ದಂಪತಿ ಗಾಯ
chikamagalurCrime NewsHomeLatest Newsnamma chikmagalur

ಗುಡುಗು ಸಿಡಿಲಿನ ಆರ್ಭಟಕ್ಕೆ ಬಸ್ ತಂಗುದಾಣದನಲ್ಲಿದ್ದ ದಂಪತಿ ಗಾಯ

Share
Share

ಎನ್.ಆ‌ರ್.ಪುರ: ಕಾಫಿನಾಡಿನಲ್ಲಿ ಮುಂಗಾರುಪೂರ್ವ ಮಳೆಯ ಅಬ್ಬರ ಜೋರಾಗಿದ್ದು, ಗುಡುಗು ಸಿಡಿಲಿನ ಆರ್ಭಟಕ್ಕೆ ದಂಪತಿ ಗಾಯಗೊಂಡಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಸೀಗುವಾನಿ ಗ್ರಾಮದಲ್ಲಿ ಸಂಭವಿಸಿದೆ.

ಮಂಜುನಾಥ ಮತ್ತು ಮಮತಾ ಎಂಬ ದಂಪತಿ ಎನ್.ಆರ್.ಪುರ ಪಟ್ಟಣದಿಂದ ತಮ್ಮ ಮನೆಗೆ ಹಿಂತಿರುಗುತ್ತಿದ್ದಾಗ ಹಠಾತ್ ಮಳೆ ಸುರಿದಿದೆ. ಇದರಿಂದ ರಕ್ಷಣೆ ಪಡೆಯಲು ಸೀಗುವಾನಿ ಗ್ರಾಮದ ಬಸ್ ತಂಗುದಾಣದಲ್ಲಿ ಆಶ್ರಯ ಪಡೆದಿದ್ದರು.

ದಂಪತಿ ಬಸ್ ನಿಲ್ದಾಣದಲ್ಲಿ ನಿಂತಿದ್ದ ಸಂದರ್ಭದಲ್ಲಿಯೇ ಅದರ ಪಕ್ಕದಲ್ಲಿ ಸಿಡಿಲು ಅಪ್ಪಳಿಸಿದೆ. ಅದೃಷ್ಟವಶಾತ್ ಸಿಡಿಲು ನೇರವಾಗಿ ಬಡಿಯದ ಕಾರಣ ದಂಪತಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರಾದರೂ, ಅದರ ತೀವ್ರತೆಗೆ ಸಣ್ಣಪುಟ್ಟ ಗಾಯಗಳಾಗಿವೆ.

ಗಾಯಾಳುಗಳಿಗೆ ತಕ್ಷಣವೇ ಎನ್.ಆ‌ರ್.ಪುರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

Couple injured at bus stop after being struck by thunder and lightning

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...