Home namma chikmagalur chikamagalur ತಂಬಾಕು ದುಷ್ಪರಿಣಾಮ ಕುರಿತು ಜಾಗೃತಿ ಮೂಡಿಸಿ
chikamagalurHomeLatest Newsnamma chikmagalur

ತಂಬಾಕು ದುಷ್ಪರಿಣಾಮ ಕುರಿತು ಜಾಗೃತಿ ಮೂಡಿಸಿ

Share
Share

ಚಿಕ್ಕಮಗಳೂರು:  ತಂಬಾಕು ಉತ್ಪನ್ನಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಿಲ್ಲೆಯ ಜನರಲ್ಲಿ ಹೆಚ್ಚಿನ ಅರಿವು ಮೂಡಿಸಲು ಹಾಗೂ ಜಿಲ್ಲೆಯನ್ನು ತಂಬಾಕು ಮುಕ್ತವನ್ನಾಗಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಕೇಸ್ವಾನ್‌ನಲ್ಲಿ ಶುಕ್ರವಾರ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಸಮನ್ವಯ ಪ್ರಗತಿ ಪರಿಶೀಲನಾ  ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ತಂಬಾಕು ಉತ್ಪನ್ನಗಳ ನಿಯಂತ್ರಣ ಮತ್ತು ಕೋಟ್ಪಾ ಕಾಯ್ದೆಯನ್ನು ಅತ್ಯಂತ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಪೊಲೀಸ್, ಆರೋಗ್ಯ, ಶಿಕ್ಷಣ ಮತ್ತು ಸ್ಥಳೀಯ ಸಂಸ್ಥೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಶಿಕ್ಷಣ ಇಲಾಖೆಯು ಎಲ್ಲಾ ಶಾಲೆ ಹಾಗೂ ಕಾಲೇಜುಗಳ ಆವರಣವನ್ನು ಕಡ್ಡಾಯವಾಗಿ ತಂಬಾಕು ಮುಕ್ತ ವಲಯಗಳೆಂದು ಘೋಷಿಷಬೇಕು. ಯಾವುದೇ ರೀತಿಯ ತಂಬಾಕು ಬಳಕೆಗೆ ಅವಕಾಶ ನೀಡಬಾರದೆಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಜಿಲ್ಲೆಯ ಎಲ್ಲಾ ಮುಜರಾಯಿ ದೇವಸ್ಥಾನಗಳನ್ನು ತಂಬಾಕು ಮುಕ್ತ ಕ್ಷೇತ್ರಗಳನ್ನಾನಿ ಮಾಡಲು ಮೊದಲು ಸೂಕ್ತ ನಿರ್ದೇಶನ ನೀಡಿ ಬಳಿಕ ಅಧಿಕೃತವಾಗಿ ಘೋಷಿಸಬೇಕು. ಪ್ರತಿಯೊಂದು ಸರ್ಕಾರಿ ಕಚೇರಿಯು ತಂಬಾಕು ಮುಕ್ತವಾಗಿರಬೇಕು ಮತ್ತು ಕಚೇರಿಗಳಲ್ಲಿ ತಂಬಾಕು ನಿಷೇಧದ ಕುರಿತು ಫಲಕಗಳನ್ನು ಪ್ರದರ್ಶಿಸಬೇಕು. ಕಚೇರಿಗೆ ಭೇಟಿ ನೀಡುವ ಸಾರ್ವಜನಿಕರು ತಂಬಾಕು ಪದಾರ್ಥಗಳನ್ನು ಬಳಸುವುದು ಕಂಡುಬಂದರೆ ಕ್ರಮ ಕೈಗೊಳ್ಳಬೇಕು ಹಾಗೂ ನಿರಂತರ ಮಾನಿಟರಿಂಗ್ ಮೂಲಕ ಜಾಗೃತಿ ಮೂಡಿಸಬೇಕು.

ಕೋಟ್ಪಾ ಕಾಯ್ದೆಯಡಿ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದ್ದು, ವಿವಿಧ ಇಲಾಖೆಗಳ ಜಂಟಿ ಕಾರ್ಯಚರಣೆ ಮೂಲಕ ದಾಳಿ ನಡೆಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ನಿಯಮ ಬಾಹಿರವಾಗಿ ತಂಬಾಕು ಮಾರಾಟ ಮಾಡುವವರಿಗೆ ದಂಡ ವಿಧಿಸಬೇಕು. ತಂಬಾಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕರ ಪತ್ರಗಳು ಮತ್ತು ಪೋಸ್ಟರ್‌ಗಳ ಮೂಲಕ ವ್ಯಾಪಕ ಜಾಗೃತಿ ಮೂಡಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುನಾಥ್ ಸಭೆಗೆ ಮಾಹಿತಿ ನೀಡಿ ಕರ್ನಾಟಕ ಕೋಟ್ಪಾ ತಿದ್ದುಪಡಿ ಕಾಯ್ದೆ ಅನ್ವಯ ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ. ಸಾರ್ವಜನಿಕ ಪ್ರದೇಶಗಳಲ್ಲಿ ಧೂಮಪಾನ ಮಾಡಿದರೆ ವಿಧಿಸಲಾಗುತ್ತಿದ್ದ ದಂಡದ ಮೊತ್ತವನ್ನು ರೂ. ೨೦೦ ರಿಂದ ರೂ. ೧೦೦೦ ಕ್ಕೆ ಹೆಚ್ಚಿಸಲಾಗಿದೆ. ಅಲ್ಲದೆ, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾತ್ರವಲ್ಲದೇ ಯಾವುದೇ ತಂಬಾಕು ಉತ್ಪನ್ನಗಳ ಬಳಕೆಯನ್ನು ನಿಷೇಧಿಸಲಾಗಿದೆ.

ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ತಂಬಾಕು ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜರಿಗೊಳಿಸಲಾಗಿದೆ. ಬಾರ್ ಕೌಂಟರ್‍ಗಳ ಬಳಿ ಧೂಮಪಾನ ನಿಷೇಧದ ಫಲಕಗಳನ್ನು ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಜಿಲ್ಲೆಯಲ್ಲಿ ತಂಬಾಕು ಮುಕ್ತ ಗ್ರಾಮಗಳ ನಿರ್ಮಾಣಕ್ಕೆ ವಿಶೇಷ ಆಧ್ಯತೆ ನೀಡಲಾಗುತ್ತಿದೆ ಎಂದರು.

ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ತಿರುಮಲೇಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮಧುಸೂದನ್ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಜರಿದ್ದರು

Create awareness about the harmful effects of tobacco.

Share

Leave a comment

Leave a Reply

Your email address will not be published. Required fields are marked *

Don't Miss

ತೋರಣಕಾಡು ಗ್ರಾಮದಲ್ಲಿ 10 ಅಡಿ ಉದ್ದದ ಬೃಹತ್ ಹೆಬ್ಬಾವು

ಚಿಕ್ಕಮಗಳೂರು: ಸುಮಾರು ೧೦ ಅಡಿ ಉದ್ದದ ಬೃಹತ್ ಹೆಬ್ಬಾವೊಂದು ಕಾಫಿ ತೋಟದಲ್ಲಿ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ ಘಟನೆ ಕಳಸ ತಾಲೂಕಿನ ಸಂಸ್ಥೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋರಣಕಾಡು ಗ್ರಾಮದಲ್ಲಿ ನಡೆದಿದೆ....

ದಾವೂದ್ ಇಬ್ರಾಹಿಂ ವೈಭವೀಕರಿಸಿದ ಪ್ರವಾಸಿ ಬಸ್ ಪೊಲೀಸರ ವಶಕ್ಕೆ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬಂದಿದ್ದ ಕೇರಳ ಮೂಲದ ಪ್ರವಾಸಿ ಬಸ್ಸಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ವೈಭವೀಕರಿಸುವ ಬರಹ ಪತ್ತೆಯಾಗಿದ್ದು, ವಿವಾದಕ್ಕೆ ಕಾರಣವಾಗಿದೆ. ಬಸ್ಸಿನ ಮೇಲೆ ಇಂಗ್ಲಿಷ್‌ನಲ್ಲಿ ‘Dawood Rise...

Related Articles

ಆನೆ ಹೊಟ್ಟೆಗೆ ಅರೆ ಕಾಸಿನ ಮಜ್ಜಿಗೆ- ಜಿಲ್ಲೆಯ ಆರು ಜನರಿಗೆ ಕಾಟಚಾರಕ್ಕೆ ನೇಮಕ?

ಚಿಕ್ಕಮಗಳೂರು: ರಾಜ್ಯ ಸರ್ಕಾರ ವಿವಿಧ ನಿಗಮಗಳಿಗೆ ಆರು ಜನರ ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದೆ.ಅವುಗಳಲ್ಲಿ ಜಮಕ್ಕುಂಟು...

ನೂತನ ಸೌಲಭ್ಯಗಳೊಂದಿಗೆ ಚಿಕ್ಕಮಗಳೂರು ರೈಲು ನಿಲ್ದಾಣ ಲೋಕಾರ್ಪಣೆ

ಚಿಕ್ಕಮಗಳೂರು: ಪರಂಪರೆಯಿಂದ ಆಧುನಿಕತೆಯತ್ತ ಹೆಜ್ಜೆಯಿಟ್ಟಿರುವ ಚಿಕ್ಕಮಗಳೂರು ರೈಲು ನಿಲ್ದಾಣವು ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ 22.06...

ಬಲವಂತವಾಗಿ ರೈತರ ಸಾಲ ವಸೂಲಿ ಮಾಡಬಾರದು

ಚಿಕ್ಕಮಗಳೂರು: ಜಿಲ್ಲೆಯ ಬರಪೀಡಿತ ತಾಲ್ಲೂಕುಗಳಲ್ಲಿನ ರೈತರು ಬಾಂಕುಗಳಿಂದ ಕೃಷಿ ಉದ್ದೇಶಕ್ಕೆ ಪಡೆದಿರುವ ಸಾಲದ ಬಾಕಿಯನ್ನು ವಸೂಲಿಮಾಡಲು...

ಪರೀಕ್ಷೆಯಲ್ಲಿ ಅನುತ್ತೀರ್ಣದ ಭಯಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

ಚಿಕ್ಕಮಗಳೂರು: ಪರೀಕ್ಷೆಯಲ್ಲಿ ಅನುತ್ತೀರ್ಣವಾಗುವ ಭಯದಿಂದ ಮಾನಸಿಕವಾಗಿ ನೊಂದಿದ್ದ ಎನ್ನಲಾದ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ...