Home namma chikmagalur ಕತ್ತಿಯಿಂದ ಕಡಿದ ಅಪರಾಧಿಗೆ 6 ವರ್ಷ ಕಠಿಣ ಸಜೆ
namma chikmagalurchikamagalurHomeLatest News

ಕತ್ತಿಯಿಂದ ಕಡಿದ ಅಪರಾಧಿಗೆ 6 ವರ್ಷ ಕಠಿಣ ಸಜೆ

Share
Share

ಚಿಕ್ಕಮಗಳೂರು: ಕೇವಲ ೩ ಸಾವಿರ ರೂ. ಸಾಲ ಮರಳಿಸದ ಸಿಟ್ಟಿನಲ್ಲಿ ವ್ಯಕ್ತಿಯೊಬ್ಬರನ್ನು ಕತ್ತಿಯಿಂದ ಕಡಿದು ತೀವ್ರವಾಗಿ ಗಾಯಗೊಳಿಸಿದ್ದ ಆಪಾದಿತನಿಗೆ ನಗರದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರು ವರ್ಷಗಳ ಸಜೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ.

ಚಿಕ್ಕಮಗಳೂರು ತಾಲ್ಲೂಕು ಆಲ್ದೂರು ಹೋಬಳಿ ಅಡ್ಡಮಕ್ಕಿಯ ಕಾಫಿ ತೋಟದ ಕೂಲಿ ಕಾರ್ಮಿಕ ಅಸ್ಸಾಂ ಮೂಲದ ಕೋರ್ನೋ ಬಹದ್ದೂರು ರೈ ಎಂಬಾತನೇ ಶಿಕ್ಷೆಗೆ ಒಳಗಾದವ. ಈತ ರಶೀದುಲ್ಲ ಎಂಬಾತನೊಂದಿಗೆ ವಾಸವಾಗಿದ್ದು, ರಶೀದುಲ್ಲ ಈತನಿಗೆ ೩ ಸಾವಿರ ರೂ.ಗಳ ಸಾಲ ಬಾಕಿ ಉಳಿಸಿಕೊಂಡಿದ್ದ ಎನ್ನಲಾಗಿದೆ. ೨೦೨೩ರ ಜೂನ್ ೨೦ ರಂದು ಸಂಜೆ ಈ ವಿಚಾರದ ಪ್ರಶ್ನಿಸಿದ ಬಹದ್ದೂರು ರೈ ಕತ್ತಿಯಿಂದ ರಶೀದುಲ್ಲನ ತಲೆಯ ಭಾಗಕ್ಕೆ ಕಡಿಯಲು ಯತ್ನಿಸಿದ್ದು, ಇದನ್ನು ತಡೆಯಲು ಯತ್ನಿಸಿದಾಗ ರಶೀದುಲ್ಲನ ಕೈ ತುಂಡಾಗಿತ್ತು ಎನ್ನಲಾಗಿದೆ.

ಈ ಬಗ್ಗೆ ಆಲ್ದೂರು ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯ ವಿರುದ್ಧ ಐಪಿಸಿ ಕಲಂ ೫೦೬, ೩೦೭, ೩೨೬, ೩೨೪ರ ಅನ್ವಯ ಪ್ರಕರಣ ದಾಖಲಿಸಿ ಆತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಸಿ.ಭಾನುಮತಿ ಅವರು ಸಾಕ್ಷಿದಾರರ ವಿಚಾರಣೆ ನಡೆಸಿದ ಸಂದರ್ಭ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆಪಾದಿತನಿಗೆ ಐಪಿಸಿ ೩೦೭ರ ಅನ್ವಯ ೬ ವರ್ಷಗಳ ಕಠಿಣ ಸಜೆ, ೧೦ ಸಾವಿರ ರೂ. ದಂಡ ವಿಧಿಸಿದ್ದು, ದಂಡ ಪಾವತಿಸಲು ತಪ್ಪಿದಲ್ಲಿ ೬ ತಿಂಗಳ ಸಾದಾ ಸಜೆ ಅನುಭವಿಸಲು ತೀರ್ಪಿನಲ್ಲಿ ತಿಳಿಸಿದ್ದಾರೆ.

ಕಲಂ ೩೨೬ ಐಪಿಸಿ ಅಡಿಯ ಅಪರಾಧಕ್ಕಾಗಿ ಆತನಿಗೆ ೫ ವರ್ಷ ಕಠಿಣ ಸಜೆ, ೫ ಸಾವಿರ ರೂ. ದಂಡ ವಿಧಿಸಿದ್ದು, ದಂಡ ತೆರಲು ತಪ್ಪಿದಲ್ಲಿ ಮತ್ತೆ ೬ ತಿಂಗಳ ಸಾದಾ ಸಜೆ, ಕಲಂ ೩೨೪ ರಡಿ ಅಪರಾಧಕ್ಕಾಗಿ ೨ ವರ್ಷ ಕಠಿಣ ಸಜೆ ಹಾಗೂ ೩ ಸಾವಿರ ರೂ. ದಂಡ ವಿಧಿಸಿದ್ದು, ದಂಡ ಪಾವತಿಸಲು ತಪ್ಪಿದಲ್ಲಿ ಒಂದು ತಿಂಗಳ ಸಾದಾ ಸಜೆ, ಕಲಂ ೫೦೬ರ ಐಪಿಸಿ ಅಡಿಯ ಅಪರಾಧಕ್ಕಾಗಿ ೧ ವರ್ಷ ಕಠಿಣ ಸಜೆ ಮತ್ತು ೨ ಸಾವಿರ ರೂ. ದಂಡ ವಿಧಿಸಿದ್ದು, ದಂಡ ತೆರಲು ತಪ್ಪಿದಲ್ಲಿ ೧೫ ದಿನಗಳ ಸಾದಾ ಶಿಕ್ಷೆ ಅನುಭವಿಸುವಂತೆ  ತೀರ್ಪಿನಲ್ಲಿ ತಿಳಿಸಿದ್ದಾರೆ. ಆಪಾದಿತ ಈ ಎಲ್ಲ ಶಿಕ್ಷೆಯನ್ನು ಏಕಕಾಲದಲ್ಲಿ ಅನುಭವಿಸಲಿದ್ದಾನೆ.

ಪ್ರಕರಣದಲ್ಲಿ ತನಿಖಾಧಿಕಾರಿಗಳಾದ ಆಲ್ದೂರು ಠಾಣೆಯ ಪಿಎಸ್‌ಐಗಳಾಗಿದ್ದ ಸಜಿತ್‌ಕುಮಾರ್ ಹಾಗೂ ಅಕ್ಷಿತಾ ತನಿಖೆ ಕೈಗೊಂಡು ಆರೋಪಿಯ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಆಲ್ದೂರು ಠಾಣೆಯ ಎಎಸ್‌ಐ ಬಸವರಾಜು ಅವರು ನ್ಯಾಯಾಲಯಕ್ಕೆ ಸಾಕ್ಷಿದಾರರನ್ನು ವಿಚಾರಣೆಗೆ ಸಮರ್ಪಕವಾಗಿ ಹಾಜರುಪಡಿಸಿದ್ದರು. ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಹೆಚ್.ಎಸ್.ಲೋಹಿತಾಶ್ವ ಆಚಾರ್ ವಾದ ಮಂಡಿಸಿದ್ದರು.

Criminal who stabbed with sword gets 6 years rigorous imprisonment

Share

Leave a comment

Leave a Reply

Your email address will not be published. Required fields are marked *

Don't Miss

ನೋಟರಿ ವಿ.ಕೆ.ರಘುಯಿಂದ ನೀರಿನ ಮೇಲೆ ತೇಲುತ್ತಾ ಯೋಗ ಭಂಗಿ ಪ್ರದರ್ಶನ

ಚಿಕ್ಕಮಗಳೂರು: ಯೋಗ ಸಾಧಕ ನಗರದ ವಕೀಲ ಹಾಗೂ ನೋಟರಿ ವಿ.ಕೆ.ರಘು ಅವರು  ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನೀರಿನ ಮೇಲೆ ತೇಲುತ್ತಾ ವಿವಿಧ ಯೋಗ ಭಂಗಿಗಳನ್ನು ಪ್ರದರ್ಶಿಸಿದರು. ಬೈಪಾಸ್ ರಸ್ತೆಯ ನರ್ಚರ್...

ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕ ಆತ್ಮಹತ್ಯೆಗೆ ಶರಣು

ಕಡೂರು: ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಡೂರು ತಾಲೂಕಿನ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಲ್ಲೂರು ಗ್ರಾಮದ 20 ವರ್ಷದ ಚಂದನ್ ಮೃತಪಟ್ಟ ದುರ್ದೈವಿ. ಇತ್ತೀಚೆಗೆ...

Related Articles

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...

ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ

ಚಿಕ್ಕಮಗಳೂರು: ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ. ಈ ಹಿಂದೆ ಒಬ್ಬರಿಗೆ ಮಾತ್ರ ಗುತ್ತಿಗೆ...

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು...