Home namma chikmagalur chikamagalur ನಕಲಿ ಪೊಲೀಸರ ಸೋಗಿನಲ್ಲಿ ಮಾಂಗಲ್ಯ ಸರ ದೋಚಿದ ಖದೀಮರು
chikamagalurCrime NewsHomeLatest Newsnamma chikmagalur

ನಕಲಿ ಪೊಲೀಸರ ಸೋಗಿನಲ್ಲಿ ಮಾಂಗಲ್ಯ ಸರ ದೋಚಿದ ಖದೀಮರು

Share
Share

ಚಿಕ್ಕಮಗಳೂರು: ಪೊಲೀಸರ ಸೋಗಿನಲ್ಲಿ ಬಂದು ಸರಗಳ್ಳರ ಬಗ್ಗೆ ಎಚ್ಚರಿಕೆ ನೀಡುವ ನೆಪದಲ್ಲಿ ಮಹಿಳೆಯೊಬ್ಬರಿಂದ ಬರೋಬ್ಬರಿ ₹7 ಲಕ್ಷ ಮೌಲ್ಯದ ಮಾಂಗಲ್ಯ ಸರವನ್ನು ದೋಚಿರುವ ಘಟನೆ ಚಿಕ್ಕಮಗಳೂರು ನಗರದ ವಿಜಯಪುರದ ಉರ್ದು ಶಾಲೆ ಬಳಿ ನಡೆದಿದೆ.

ನಗರದಲ್ಲಿ ನಕಲಿ ಪೊಲೀಸರ ವೇಷದಲ್ಲಿ ಸಾರ್ವಜನಿಕರನ್ನು ವಂಚಿಸುವ ಖದೀಮರ ಜಾಲ ಸಕ್ರಿಯವಾಗಿದ್ದು, ಒಂಟಿಯಾಗಿ ನಡೆದುಕೊಂಡು ಹೋಗುವ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಕೃತ್ಯ ಎಸಗುತ್ತಿದ್ದಾರೆ.

‘ನಾವು ಮಫ್ತಿಯಲ್ಲಿರುವ ಪೊಲೀಸರು, ಈ ಭಾಗದಲ್ಲಿ ಸರಗಳ್ಳರು ಓಡಾಡುತ್ತಿದ್ದಾರೆ. ನಿಮ್ಮ ಕುತ್ತಿಗೆಯಲ್ಲಿರುವ ಮಾಂಗಲ್ಯ ಸರವನ್ನು ಬಿಚ್ಚಿ ಬ್ಯಾಗ್‌ನಲ್ಲಿ ಸುರಕ್ಷಿತವಾಗಿ ಇಟ್ಟುಕೊಳ್ಳಿ’ ಎಂದು ಮಹಿಳೆಯರನ್ನು ನಂಬಿಸುವ ಖದೀಮರು, ಬಳಿಕ ಅವರಿಂದಲೇ ಚಿನ್ನಾಭರಣ ಪಡೆದು ಪರಾರಿಯಾಗುತ್ತಿದ್ದಾರೆ.

ಇದೇ ತಂತ್ರಕ್ಕೆ ಬಲಿಯಾದ ರಾಧಮ್ಮ ಎಂಬುವರು ತಮ್ಮ ಸುಮಾರು ₹7 ಲಕ್ಷ ಮೌಲ್ಯದ ಚಿನ್ನದ ಮಾಂಗಲ್ಯ ಸರವನ್ನು ಕಳೆದುಕೊಂಡಿದ್ದಾರೆ. ಪೊಲೀಸರ ಸೋಗಿನಲ್ಲಿ ಬಂದ ಅಪರಿಚಿತರು ಸರಗಳ್ಳರ ಬಗ್ಗೆ ಎಚ್ಚರಿಕೆ ನೀಡಿ, ಸರವನ್ನು ಸುರಕ್ಷಿತವಾಗಿ ಪ್ಯಾಕ್ ಮಾಡಿಕೊಡುವುದಾಗಿ ನಂಬಿಸಿ ಚಿನ್ನಾಭರಣವನ್ನು ಪಡೆದು ಪರಾರಿಯಾಗಿದ್ದಾರೆ. ಘಟನೆಯಿಂದ ರಾಧಮ್ಮ ಅವರು ಕಂಗಾಲಾಗಿದ್ದಾರೆ.

ಇನ್ನು ಇತ್ತೀಚಿನ ದಿನಗಳಲ್ಲಿ ಚಿಕ್ಕಮಗಳೂರು ನಗರದಲ್ಲಿ ಸರಗಳ್ಳರ ಹಾವಳಿ ಹೆಚ್ಚಾಗಿದ್ದು, ಬೈಕ್‌ಗಳಲ್ಲಿ ಬರುವ ದುಷ್ಕರ್ಮಿಗಳು ಒಂಟಿಯಾಗಿ ಸಂಚರಿಸುವ ಮಹಿಳೆಯರ ಕುತ್ತಿಗೆಯಿಂದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಒಂದೇ ತಿಂಗಳ ಅವಧಿಯಲ್ಲಿ ಐದಕ್ಕೂ ಹೆಚ್ಚು ಸರಗಳ್ಳತನ ಪ್ರಕರಣಗಳು ದಾಖಲಾಗಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ರಾಧಮ್ಮ ಅವರಿಗೆ ವಂಚಿಸಿ ಚಿನ್ನದ ಸರ ದೋಚಿದ ಖದೀಮರ ಚಲನವಲನಗಳು ಸಮೀಪದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿವೆ ಎನ್ನಲಾಗಿದೆ. ಈ ಸಂಬಂಧ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Crooks posing as police officers steal a *mangalya sara* (wedding necklace) worth ₹7 lakh.

Share

Leave a comment

Leave a Reply

Your email address will not be published. Required fields are marked *

Don't Miss

ಅನಂತ್ ಅಗಲಿಕೆ ವೈಯಕ್ತಿಕವಾಗಿ ಅಪಾರ ನೋವು ತಂದಿದೆ

ಮೂಡಿಗೆರೆ: ತಾವು ಸಚಿವೆಯಾಗಿದ್ದ ಸಂದರ್ಭದಲ್ಲಿ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಿದ್ದ ಎಂ.ಎಸ್. ಅನಂತ್ ಅವರು ಅತಿ ಚಿಕ್ಕ ವಯಸ್ಸಿನಲ್ಲೇ ಅಗಲಿರುವುದು ವೈಯಕ್ತಿಕವಾಗಿ ಅಪಾರ ನೋವು ತಂದಿದೆ ಎಂದು ಮಾಜಿ ಸಚಿವೆ...

ಅಡಿಕೆ ತೋಟದ ನೀರಿನ ತೊಟ್ಟಿಯಲ್ಲಿ ಇಬ್ಬರು ಕಾರ್ಮಿಕರ ಶವ ಪತ್ತೆ

ತರೀಕೆರೆ: ಅಡಿಕೆ ತೋಟದ ಮನೆಯ ನೀರಿನ ತೊಟ್ಟಿಯಲ್ಲಿ ಇಬ್ಬರು ಕಾರ್ಮಿಕರ ಮೃತದೇಹಗಳು ಪತ್ತೆಯಾಗಿರುವ ಘಟನೆ ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಆನಂದ್ (48) ಹಾಗೂ ಜುಂಜಾನಾಯ್ (65) ಎಂದು ಗುರುತಿಸಲಾಗಿದೆ....

Related Articles

ಭದ್ರ ಮಾಫಿಯಾ : ಪೈಪ್ ನುಂಗಿ ನೀರು ಕುಡಿಯುವ ಶಾಸಕರುಗಳು ಮತ್ತು ಇಂಜಿನಿಯರ್ ಗಳು?

ಚಿಕ್ಕಮಗಳೂರು: ಜಿಲ್ಲೆಯಿಂದ ಚಿತ್ರದುರ್ಗ, ತುಮಕೂರು ಮತ್ತು ಕೋಲಾರ ಜಿಲ್ಲೆಗಳ ಕುಡಿಯುವ ನೀರಿಗಾಗಿ ಅಂತರ್ ಜಲ ಹೆಚ್ಚಳ...

ನ.18ರಂದು ಗೌಡನಹಳ್ಳಿ ಜನಾಂದೋಲನ ಅಂಬಳೆದಿಂದ ಚಲೋ

ಚಿಕ್ಕಮಗಳೂರು:ಕೈಗಾರಿಕಾ ಮಾಲಿನ್ಯ, ರಾಸಾಯನಿಕ ತ್ಯಾಜ್ಯದಿಂದ ಜಲಮೂಲಗಳ ಮಾಲಿನ್ಯ ಹಾಗೂ ಸಾರ್ವಜನಿಕ ಆಸ್ತಿಗಳ ಅತಿಕ್ರಮಣ ಸೇರಿದಂತೆ ವಿವಿಧ...

ಚಿಕ್ಕಮಗಳೂರಿನಲ್ಲಿ ಇಂದಿರಾಗಾಂಧಿ 110ನೇ ಜನ್ಮದಿನಾಚರಣೆ ಅದ್ದೂರಿ ಸಿದ್ಧತೆ

ಚಿಕ್ಕಮಗಳೂರು: ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿಯವರಿಗೆ ರಾಜಕೀಯ ಮರುಜನ್ಮ ನೀಡಿದ ಐತಿಹಾಸಿಕ ನೆಲವಾದ ಚಿಕ್ಕಮಗಳೂರಿನಲ್ಲಿ ಅವರ...

ಚಿಕ್ಕಮಗಳೂರು ಪ್ರೀಮಿಯರ್ ಲೀಗ್‌ಗೆ ಶಾಸಕ ತಮ್ಮಯ್ಯ ಚಾಲನೆ

ಚಿಕ್ಕಮಗಳೂರು: ಕ್ರೀಡಾ ಚಟುವಟಿಕೆಗಳಲ್ಲಿ ಯುವಕರು ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ದೈಹಿಕ ಸಾಮರ್ಥ್ಯದ ಜೊತೆಗೆ ಮಾನಸಿಕ ಸದೃಢತೆಯೂ ವೃದ್ಧಿಯಾಗುತ್ತದೆ....