Home namma chikmagalur chikamagalur ಸಂಸ್ಕೃತಿ, ಸಾಹಿತ್ಯ, ಕಲೆಯಿಂದ ಸುಸಂಸ್ಕೃತ ಸಮುದಾಯ ಕಟ್ಟಲು ಸಾಧ್ಯ
chikamagalurHomeLatest Newsnamma chikmagalur

ಸಂಸ್ಕೃತಿ, ಸಾಹಿತ್ಯ, ಕಲೆಯಿಂದ ಸುಸಂಸ್ಕೃತ ಸಮುದಾಯ ಕಟ್ಟಲು ಸಾಧ್ಯ

Share
Share

ಚಿಕ್ಕಮಗಳೂರು: ಸಂಸ್ಕೃತಿ, ಸಾಹಿತ್ಯ, ಕಲೆಯ ಮೂಲಕ ಮಾತ್ರ ಸುಸಂಸ್ಕೃತ ಸಮುದಾಯವನ್ನು ಕಟ್ಟಬಹುದು ಎಂದು ಬಸವತತ್ವ ಪೀಠಾಧ್ಯಕ್ಷರಾದ ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ತಿಳಿಸಿದರು.

ದೊಡ್ಡ ಕುರುಬರಹಳ್ಳಿಯ ಬಸವತತ್ವ ಪೀಠದ ಆವರಣದಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಹಾಗೂ ಬಸವತತ್ವ ಪೀಠದ ನೇತೃತ್ವದಲ್ಲಿ ಆಯೋಜಿಸಿದ್ದ ಮೈಸೂರು ವಿಭಾಗ ಮಟ್ಟದ ನಾಟಕೋತ್ಸವ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ದೂರದರ್ಶನ ಮನುಷ್ಯನನ್ನು ಇರುವುದಕ್ಕಿಂತ ಬಹಳ ಚಿಕ್ಕದಾಗಿ ತೋರಿಸುತ್ತದೆ. ಸಿನಿಮಾ ಬಹಳ ದೊಡ್ಡವನನ್ನಾಗಿ ತೋರಿಸುತ್ತದೆ. ಆದರೆ, ರಂಗಕರ್ಮಿಯಾಗಿ, ಮನುಷ್ಯನನ್ನು ಮನುಷ್ಯನನ್ನಾಗಿ ತೋರಿಸುವ ಒಂದು ಕಲೆ ನಾಟಕ ಮಾತ್ರ ಎಂದರು.

ಇವತ್ತು ಕೆಲ ಧಾರಾವಾಹಿಗಳು ಮನುಷ್ಯನ ವ್ಯಕ್ತಿತ್ವವನ್ನು ಬಹಳ ಸಣ್ಣತನದಲ್ಲಿ ತೋರ್ಪಡಿಸುವ ಕೆಲಸ ಮಾಡುತ್ತಿವೆ. ಮನುಷ್ಯನ ಉದಾತ್ತತೆಯನ್ನು ಮರೆಸಿ ಅವನ ಸಣ್ಣತನಗಳು ವಿಜೃಂಭಿಸುವಾಗೆ ಮಾಡುವ ಕೆಟ್ಟ ಕೆಲಸಗಳು ದೂರದರ್ಶನದ ಮೂಲಕ ಅಲ್ಲಲ್ಲಿ ನಡೆಯುತ್ತಿವೆ. ಕೆಟ್ಟ ಧಾರಾವಾಹಿಗಳನ್ನು ನೋಡುವ ಬದಲು ಒಂದು ಒಳ್ಳೆಯ ಪುಸ್ತಕ ಓದಿದರೆ ಮನೆತನಗಳು ಉದ್ಧಾರವಾಗುತ್ತವೆ ಎಂದು ಕಿವಿಮಾತು ಹೇಳಿದರು.

ದೂರದರ್ಶನ, ಸಿನಿಮಾಗಳು ಮನುಷ್ಯನಲ್ಲಿ ಇಲ್ಲದ ಭ್ರಮೆಗಳನ್ನು ನಿರ್ಮಿಸಿದ ಪರಿಣಾಮ ಯುವಕರನ್ನು ದಾರಿ ತಪ್ಪಿಸುತ್ತಿವೆ. ಇಂತಹ ಸಂದರ್ಭದಲ್ಲಿ ರಂಗಕರ್ಮಿ ಭರವಸೆ ಹುಟ್ಟಿಸುವ ಕೆಲಸ ಮಾಡುತ್ತಿರುವುದು ಸಂತಸ ವಿಷಯ ಎಂದರು.

ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ ಹುಲ್ಲಹಳ್ಳಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆದಿ ಮಾನವನ ಕಾಲದಿಂದಲೇ ನಾಟಕದ ಸ್ವರೂಪಗಳು ಹುಟ್ಟಿಕೊಂಡಿವೆ. ನಾಟಕ ಜಗತ್ತಿಗೆ ಒಳ್ಳೆಯ ಆಯಾಮಗಳನ್ನು ನೀಡಿದೆ. ನಾಟಕ ಅಥವಾ ಆಂಗಿಕ ಅಭಿನಯಗಳು ಜನರಲ್ಲಿ ಸಾಂಸ್ಕೃತಿಕ ಹಾಗೂ ಸಾಹಿತ್ಯಿಕ ಸಮನ್ವಯಗಳನ್ನು ನೀಡುತ್ತಿದ್ದವು ಎಂಬುದು ಇತಿಹಾಸದಿಂದ ತಿಳಿಯುತ್ತದೆ ಎಂದರು.

ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಬಯಲಾಟ ಮತ್ತು ನಾಟಕ ಸ್ವರೂಪಗಳು ಜನರಿಗೆ ಸ್ವಾತಂತ್ರ್ಯದ ಬಗೆಗಿನ ಕಾಳಜಿಯನ್ನು ಹುಟ್ಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದವು ಎಂದ ಅವರು, ಚಿಕ್ಕಮಗಳೂರಿನಲ್ಲಿ ಈ ರೀತಿ ಕಾರ್ಯಕ್ರಮ ಆಯೋಜಿಸಿದ ಬಸವತತ್ವ ಪೀಠದ ಬಸವ ಮರುಳಸಿದ್ಧ ಸ್ವಾಮೀಜಿ ಸಾಂಸ್ಕೃತಿಕವಾಗಿ, ಧಾರ್ಮಿಕವಾಗಿ, ಶೈಕ್ಷಣಿಕವಾಗಿ ಜನರನ್ನು ಮುಟ್ಟಲು ಪ್ರಯತ್ನಿಸುತ್ತಿರುವುದು ಶ್ಲಾಘನೀಯ ಎಂದರು

ಕರ್ನಾಟಕ ನಾಟಕ ಅಕಾಡೆಮಿ ಮಾಜಿ ಸದಸ್ಯ ನಾಗರಾಜ್ ರಾವ್ ಕಲ್ಕಟ್ಟೆ ಮಾತನಾಡಿ, ಶತಮಾನದ ಹಿಂದೆಯೇ ಕಾಳಿದಾದ ವಿಶ್ವ ಪರಂಪರೆಯ ನಾಟಕ ರಂಗದಲ್ಲಿ ಅತ್ಯಂತ ಶ್ರೇಷ್ಠ ವ್ಯಕ್ತಿ ಎಂದರು.
ರಂಗಕರ್ಮಿ ಒಬ್ಬ ವ್ಯಕ್ತಿಯನ್ನು ಸರ್ವೋತೋಮುಖ ಕಲಾವಿದನಾಗಿ ಸೃಷ್ಟಿಸುತ್ತದೆ. ರಂಗಕರ್ಮಿಯು ಕಲಾವಿದ ಗಾಯಕ, ನಟ, ಸಂಘಟಕ, ಸಂಗೀತಗಾರನಾಗಿರುತ್ತಾನೆ. ರಂಗಪೂಜೆ ಮಾಡಿದರೆ ಸರ್ವತೋಮುಖ ವ್ಯಕ್ತಿತ್ವ ರೂಢಿಸಿಕೊಳ್ಳಲು ಸಾಧ್ಯ ಎಂದು ಪ್ರತಿಪಾದಿಸಿದರು.

ಮತೀಯ ವ್ಯವಸ್ಥೆಯ ನಡುವೆ ಸಾಂಸ್ಕೃತಿಕತೆಯನ್ನು ಜತೆ ಜತೆಯಲ್ಲಿ ರೂಪಿಸಿದಾಗ ಮಾತ್ರ ಮನುಷ್ಯ ನಿಜವಾದ ಸುಸಂಸ್ಕೃತನಾಗುತ್ತಾನೆ. ಆ ನಿಟ್ಟಿನಲ್ಲಿ ಬಸವತತ್ವ ಪೀಠ ಪೂಜ್ಯರ ನೇತೃತ್ವದಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದರು.

ಕರ್ನಾಟಕ ನಾಟಕ ಅಕಾಡೆಮಿ ಸದಸ್ಯೆ ಹಾಗೂ ಮೈಸೂರು ವಿಭಾಗವಾರು ನಾಟಕೋತ್ಸವದ ಸಂಚಾಲಕಿ ಮಮತಾ ಅರಸೀಕೆರೆ ಮಾತನಾಡಿ, ಕರ್ನಾಟಕ ನಾಟಕ ಅಕಾಡೆಮಿಯ ಮಹತ್ವಾಕಾಂಕ್ಷೆಯ sssಕಾರ್ಯಕ್ರಮವಿದು. ರಾಜ್ಯದ ನಾಲ್ಕು ವಿಭಾಗಗಳಲ್ಲಿ ಅಕಾಡೆಮಿ ಮೂರು ದಿನಗಳ ನಾಟಕೋತ್ಸವವನ್ನು ಆಯೋಜಿಸುತ್ತಿದೆ.

ಈ ಸಂದರ್ಭದಲ್ಲಿ ಈ ವಿಭಾಗದ ೮ ಜಿಲ್ಲೆಗಳಲ್ಲಿ ಒಂದು ಜಿಲ್ಲೆಯಾದ ಚಿಕ್ಕಮಗಳೂರಿನಲ್ಲಿ ಆಯೋಜನೆ ಮಾಡುವ ಸಂದರ್ಭ ಬಂದಾಗ ಈ ಬಸವ ತತ್ವ ಪೀಠ ಸಹಕಾರಿಯಾಯಿತು. ರಂಗಭೂಮಿಯು ಮನುಷ್ಯರಲ್ಲಿ ಮಹತ್ವದ ಮಾರ್ಪಾಡನ್ನು ಮಾಡುತ್ತದೆ. ಈ ನೆಲ ಹೆಚ್ಚು ಹೆಚ್ಚು ರಂಗಭೂಮಿಯೆಡೆ ತೊಡಗಿಸಿಕೊಳ್ಳಬೇಕು ಎಂದರು.

ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಲೋಕೇಶಪ್ಪ, ಬಸವತತ್ವ ಸಮಾವೇಶದ ಸ್ವಾಗತ ಸಮಿತಿ ಅಧ್ಯಕ್ಷ ಮಹಡಿಮನೆ ಸತೀಶ್ ಸೇರಿದಂತೆ ನೂರಾರು ಜನರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Culture, literature, and art can build a civilized community.

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು ತಾಲೂಕು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೆ ಆಗ್ರಹ

ಚಿಕ್ಕಮಗಳೂರು: ಈ ಬಾರಿಯ ಮುಂಗಾರು ಅವಧಿಯಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಕೃಷಿ, ತೋಟಗಾರಿಕೆ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗುವ ಆತಂಕವಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು...

ಕಡೂರು ಬಸ್ ನಿಲ್ದಾಣದಲ್ಲಿ 50 ಗ್ರಾಂ ತೂಕದ ಚಿನ್ನದ ಸರ ಕಳ್ಳತನ

ಕಡೂರು: ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡ ಕಳ್ಳರ ಗ್ಯಾಂಗ್ ಒಂದು, ಬಸ್ ಹತ್ತುವ ವೇಳೆ ಮಹಿಳೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಬರೋಬ್ಬರಿ 50 ಗ್ರಾಂ ತೂಕದ ಚಿನ್ನದ ಸರವನ್ನು ಕ್ಷಣಾರ್ಧದಲ್ಲಿ ಎಗರಿಸಿ...

Related Articles

ಕೋಟ್ಯಂತರ ರೂಪಾಯಿ ವಂಚಿಸಿದ ನಕಲಿ ಲೇಡಿ ಪಿಎಸ್‌ಐ ಬಂಧನ

ಚಿಕ್ಕಮಗಳೂರು: ತಾನು ಬೆಂಗಳೂರಿನ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಎಂದು ನಂಬಿಸಿ, ಚಿನ್ನ, ಹಣ, ಮೊಬೈಲ್ ಹಾಗೂ ಕಾರು...

ನಲಪಾಡ್ ಹೇಳಿಕೆ ಖಂಡಿಸಿ ಜೆಡಿಎಸ್ ಅಲ್ಪಸಂಖ್ಯಾತ ಘಟಕ ಆಕ್ರೋಶ

ಚಿಕ್ಕಮಗಳೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯ ಯುವ ಘಟಕದ...

ಮಳಲೂರು ಏತ ನೀರಾವರಿ ಯೋಜನೆ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಅನುಷ್ಠಾನ ಮತ್ತು ಅರಸನ ನಾಲೆ ಪುನಶ್ಚೇತನ ಯೋಜನೆಗಳ ಕಾಮಗಾರಿಗಳಿಗೆ ಉಂಟಾಗಿರುವ...

2ಬಿ ಮೀಸಲಾತಿ ಮರುಸ್ಥಾಪನೆಗೆ ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಚಿಕ್ಕಮಗಳೂರು: ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತಿದ್ದ ಶೇ.4ರಷ್ಟು 2ಬಿ ಮೀಸಲಾತಿಯನ್ನು ಮರುಸ್ಥಾಪಿಸಲು ರಾಜ್ಯ ಸರ್ಕಾರ ಕೂಡಲೇ...