Home Crime News ಸೈಬ‌ರ್ ವಂಚನೆಯಿಂದ ಲಕ್ಷಾಂತರ ರೂಪಾಯಿ ವಂಚಕರ ಪಾಲು
Crime NewsHomeKadurLatest Newsnamma chikmagalur

ಸೈಬ‌ರ್ ವಂಚನೆಯಿಂದ ಲಕ್ಷಾಂತರ ರೂಪಾಯಿ ವಂಚಕರ ಪಾಲು

Share
Share

ಕಡೂರು: ಸೈಬ‌ರ್ ವಂಚನೆ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು ಲಕ್ಷಾಂತರ ರೂಪಾಯಿ ವಂಚಕರ ಪಾಲಾಗುತ್ತಿದೆ.

ಕಡೂರಿನ ದರ್ಶನ್ ಎನ್.ಎಂ. ಎಂಬುವವರ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ ಒಟ್ಟು 4,02,000 ರೂಪಾಯಿ ಹಣವನ್ನು ಸೈಬರ್ ಕಳ್ಳರು ಲೂಟಿ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ದರ್ಶನ್ ಅವರಿಗೆ ಜನವರಿ 29ರಂದು ಬೆಳಿಗ್ಗೆ ಮೊಬೈಲ್‌ಗೆ ವಂಚಕರಿಂದ ಸಂದೇಶವೊಂದು ಬಂದಿದ್ದು, ಅದನ್ನು ಓಪನ್ ಮಾಡಿದ ಕೆಲವೇ ಸಮಯದಲ್ಲಿ ಅವರ ಕೆನರಾ ಬ್ಯಾಂಕ್ ಖಾತೆಯಿಂದ ಹಣ ಕಡಿತಗೊಂಡಿರುವ ಬಗ್ಗೆ ಸರಣಿ ಸಂದೇಶಗಳು ಬರಲಾರಂಭಿಸಿವೆ.

ತಕ್ಷಣವೇ ಅವರು ಕಡೂರಿನ ಕೆನರಾ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ವಿಚಾರಿಸಿದಾಗ, ಅವರ ಗಮನಕ್ಕೆ ಬಾರದಂತೆ ಅಪರಿಚಿತರು ಹಂತ ಹಂತವಾಗಿ ಒಟ್ಟು 4.02 ಲಕ್ಷ ರೂಪಾಯಿಗಳನ್ನು ವರ್ಗಾವಣೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಈ ಸಂಬಂಧ ದರ್ಶನ್ ಅವರು ಜನವರಿ 31ರಂದು ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ತನ್ನ ಖಾತೆಯಿಂದ ಹಣ ವರ್ಗಾವಣೆ ಮಾಡಿಕೊಂಡು ಮೋಸ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಮತ್ತು ಕಳೆದುಹೋದ ಹಣವನ್ನು ವಾಪಸ್ ಕೊಡಿಸಬೇಕು ಎಂದು ಮನವಿ ಮಾಡಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Cyber ​​fraud costs fraudsters millions of rupees

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...