Home Crime News ಸಿಲಿಂಡರ್ ಬ್ಲಾಸ್ಟ್ ಆಗಿ ಸಂಪೂರ್ಣ ಭಸ್ಮವಾದ ಗುಡಿಸಲು
Crime News

ಸಿಲಿಂಡರ್ ಬ್ಲಾಸ್ಟ್ ಆಗಿ ಸಂಪೂರ್ಣ ಭಸ್ಮವಾದ ಗುಡಿಸಲು

Share
Share

ಚಿಕ್ಕಮಗಳೂರು :  ಸಿಲಿಂಡರ್ ಸ್ಫೋಟದಿಂದ ಗುಡಿಸಲು ಸಂಪೂರ್ಣ ನೆಲಸಮವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗಬ್ಗಲ್ ಸಮೀಪದ ಕಂಬಳಿಹಾರ ಗ್ರಾಮದಲ್ಲಿ ನಡೆದಿದೆ‌. ಗುಡಿಸಲಿನಲ್ಲಿ ವಾಸಿಸುತ್ತಿದ್ದ ಬಸಯ್ಯ ಹಿರೇಮಠ್ ಕೂಲಿ ಕೆಲಸಕ್ಕೆ ಹೋಗಿದ್ರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಸಿಲಿಂಡರ್ ಸಿಡಿದು ಸ್ಫೋಟಗೊಂಡ ರಭಸಕ್ಕೆ ಗುಡಿಸಲಿನಲ್ಲಿದ್ದ ವಸ್ತುಗಳು ಸಟ್ಟು ಕರಕಲಾಗಿ ಇಡೀ ಗುಡಿಸಲೇ ಬೂದಿಮಯವಾಗಿದೆ. ಬಸಯ್ಯ ಹಿರೇಮಠ್ ಗೆ ಹೆಂಡತಿ-ಮಕ್ಕಳು ಯಾರೂ ಇಲ್ಲ. ಏಕಾಂಗಿಯಾಗಿ ಬದುಕುತ್ತಿರುವ ಹಿರೇಮಠ್ ಕೂಲಿ ಮಾಡಿಕೊಂಡು ಗುಡಿಸಲಿನಲ್ಲಿ ವಾಸ ಮಾಡುತ್ತಿದ್ದರು. ಸಿಲಿಂಡರ್ ಸ್ಫೋಟದ ವಿಷಯ ತಿಳಿದು ಕೂಲಿಯಿಂದ ವಾಪಸ್ ಬಂದ ಬಸಯ್ಯ ಹಿರೇಮಠ್ ಗುಡಿಸಲಿನ ಸ್ಥಿತಿ ಕಂಡು ಕಣ್ಣೀರಿಟ್ಟಿದ್ದಾರೆ. ಸ್ಥಳಕ್ಕೆ ಬಾಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕಳ್ಳತನ

ಕೊಪ್ಪ: ತಾಲೂಕಿನ ಕುಂಚೂರು ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಕಳ್ಳತನ ನಡೆದಿದ್ದು, ದೇವಿಗೆ ಅಲಂಕರಿಸಿದ್ದ ಚಿನ್ನಾಭರಣ, ಬೆಳ್ಳಿಯ ವಿಗ್ರಹಗಳು ಹಾಗೂ ಕಾಣಿಕೆ ಹುಂಡಿಯ ಹಣವನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿರುವ ಘಟನೆ...

ನೂತನ ಚಿಕ್ಕಮಗಳೂರು ಜಿಪಂ ಸಿಇಒ ಮೀನಾಕ್ಷಿ ಆರ್ಯ ನೇಮಕ

ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಎಚ್.ಎಸ್. ಕೀರ್ತನಾ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ 2023ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಮೀನಾಕ್ಷಿ ಆರ್ಯ ಅವರನ್ನು ನೇಮಿಸಿ ರಾಜ್ಯ ಸರ್ಕಾರ...

Related Articles

ಶಿಕಾರಿ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು: ಶಿಕಾರಿಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಜಿಲ್ಲೆಯ ಬಾಳೆಹೊನ್ನೂರು...

ನಕಲಿ ಪೊಲೀಸ್ ಇನ್ಸ್‌ಪೆಕ್ಟರ್‌ ಹೆಸರಿನಲ್ಲಿ ಚಿನ್ನದ ಸರ ಪಡೆದು ವಂಚನೆ

ಚಿಕ್ಕಮಗಳೂರು: ತಾನು ಪೊಲೀಸ್ ಇನ್ಸ್‌ಪೆಕ್ಟರ್ ಎಂದು ಪರಿಚಯಿಸಿಕೊಂಡು ಆಭರಣ ಮಳಿಗೆಯಿಂದ ₹1.82 ಲಕ್ಷ ಮೌಲ್ಯದ ಚಿನ್ನದ...

ಮನೆ ಬೀಗ ಮುರಿದು ₹7.06 ಲಕ್ಷ ಮೌಲ್ಯದ ನಗ-ನಗದು ಕಳವು

ಕಡೂರು: ಮನೆಯವರು ಕಣ್ಣಿನ ಚಿಕಿತ್ಸೆಗಾಗಿ ಹೊರಗಡೆ ತೆರಳಿದ್ದ ಸಂದರ್ಭದಲ್ಲಿ ಮನೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು...

ಫೇಸ್‌ಬುಕ್‌ನ ‘ಕೇರಳ ಲಾಟರಿ’ ಜಾಹೀರಾತು ನಂಬಿ ₹4.30 ಲಕ್ಷ ಕಳೆದುಕೊಂಡ ವ್ಯಕ್ತಿ

ಚಿಕ್ಕಮಗಳೂರು: ಫೇಸ್‌ಬುಕ್‌ನಲ್ಲಿ ಕಾಣಿಸಿಕೊಂಡ ‘ಕೇರಳ ಲಾಟರಿ’ ಜಾಹೀರಾತಿನ ಲಿಂಕ್ ಕ್ಲಿಕ್ ಮಾಡಿ, ಲಾಟರಿ ಗೆದ್ದಿರುವುದಾಗಿ ನಂಬಿ...