Home namma chikmagalur chikamagalur ಸಿಲಿಂಡರ್ ಸೋರಿಕೆ: ಗಾಯಾಳುವಿಗೆ ಪರಿಹಾರ ನೀಡಲು ಆದೇಶ
chikamagalurHomeLatest Newsnamma chikmagalur

ಸಿಲಿಂಡರ್ ಸೋರಿಕೆ: ಗಾಯಾಳುವಿಗೆ ಪರಿಹಾರ ನೀಡಲು ಆದೇಶ

Share
Share

ಚಿಕ್ಕಮಗಳೂರು:  ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಸುಟ್ಟ ಗಾಯಗಳಿಗೀಡಾದ ಪ್ರಕರಣದಲ್ಲಿ ಪರಿಹಾರ ನೀಡದೆ ಸೇವಾ ನ್ಯೂನತೆ ಎಸಗಿರುವ ಆರೋಪದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಇಂಡಿಯನ್ ಆಯಿಲ್ ಕಾರ್ಪೋರೇಶನ್ ಹಾಗೂ ಎಸ್‌ಬಿಐ ಜನರಲ್ ಇನ್ಶೂರೆನ್ಸ್ ಕಂಪನಿ ವಿರುದ್ಧ ತೀರ್ಪು ನೀಡಿದ್ದು, ೧.೨೦ ಲಕ್ಷ ರೂ. ಪರಿಹಾರ ನೀಡುವಂತೆ ಆದೇಶ ನೀಡಿದೆ.

ಹಾಸನ ಜಿಲ್ಲೆ ಬೇಲೂರು ತಾಲ್ಲೂಕು ಗೆಂಡೆಹಳ್ಳಿ ಗ್ರಾಮದ ಜೆ.ಆರ್.ರವೀಶ್ ಎಂಬುವವರ ಭಾವ ಮಂಜುನಾಥ ಎಂಬುವವರ ಮನೆಯಲ್ಲಿ ೨೦೨೩ರ ಸೆಪ್ಟಂಬರ್ ೨೦ ರಂದು ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿದ್ದು, ಈ ಅನಾಹುತದ ವೇಳೆ ಮಂಜುನಾಥ ಅವರು ಸುಟ್ಟ ಗಾಯಗಳಿಗೀಡಾಗಿದ್ದು, ಅವರನ್ನು ರಕ್ಷಿಸುವ ಸಂದರ್ಭದಲ್ಲಿ ರವೀಶ್ ಅವರ ಕಾಲುಗಳಿಗೂ ಸುಟ್ಟ ಗಾಯಗಳಾಗಿದ್ದವೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರವೀಶ್ ಅವರು ತಮ್ಮ ಅಕ್ಕ, ಭಾವ ಗ್ರಾಹಕರಾಗಿರುವ ಚಿಕ್ಕಮಗಳೂರಿನ ಮೆ| ಶಿವನೀಲ್ ಗ್ಯಾಸ್ ಸೇಲ್ಸ್‌ನ ಮಾಲೀಕ ರಜಿತ್ ರುದ್ರ, ಇಂಡಿಯನ್ ಆಯಿಲ್ ಕಾಪೋರೇಶನ್ ಲಿಮಿಟೆಡ್, ನ್ಯೂ ಇಂಡಿಯಾ ಅಶೂರೆನ್ಸ್ ಕಂಪನಿ ಲಿಮಿಟೆಡ್‌ನ ಚಿಕ್ಕಮಗಳೂರು ಶಾಖಾ ವ್ಯವಸ್ಥಾಪಕರು ಹಾಗೂ ಎಸ್‌ಬಿಐ ಜನರಲ್ ಇನ್‌ಶೂರೆನ್ಸ್ ಕಂಪನಿ ಲಿಮಿಟೆಡ್‌ನ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿ ಪರಿಹಾರವನ್ನು ಕೋರಿದ್ದರೆನ್ನಲಾಗಿದೆ. ಆದರೆ ಅವರ ಮನವಿಗೆ ಯಾವುದೇ ಸಂಸ್ಥೆಗಳು ಸ್ಪಂದಿಸಲಿಲ್ಲ. ಈ ಹಿನ್ನೆಲೆಯಲ್ಲಿ ರವೀಶ್ ಅವರು ಈ ಸಂಸ್ಥೆಗಳು ಸೇವಾ ನ್ಯೂನತೆ ಎಸಗಿರುವುದಾಗಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ೨೦೨೪ರ ಆಗಸ್ಟ್ ೧೪ ರಂದು ದೂರು ನೀಡಿದ್ದರು.

ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ ಆಯೋಗವು ಕಳೆದ ನವೆಂಬರ್ ೨೦ ರಂದು ಇಂಡಿಯನ್ ಆಯಿಲ್ ಕಾರ್ಪೋರೇಶನ್ ಹಾಗೂ ಎಸ್‌ಬಿಐ ಜನರಲ್ ಇನ್ಶೂರೆನ್ಸ್ ಕಂಪನಿ ವಿರುದ್ಧ ತೀರ್ಪು ನೀಡಿದ್ದು, ಸುಟ್ಟ ಗಾಯಾಳುಗಳ ಚಿಕಿತ್ಸಾ ವೆಚ್ಚದ ಬಾಬ್ತು ೧,೨೦,೦೦೦ ರೂ., ಪರಿಹಾರವಾಗಿ ೩೦,೦೦೦ ರೂ. ಹಾಗೂ ಪ್ರಕರಣದ ಖರ್ಚು-ವೆಚ್ಚಕ್ಕಾಗಿ ೧೦,೦೦೦ ರೂ.ಗಳನ್ನು ನೀಡುವಂತೆ ಆದೇಶ ನೀಡಿದೆ. ಪ್ರಕರಣದಲ್ಲಿ ಶಿವನೀಲ್ ಗ್ಯಾಸ್ ಸೇಲ್ಸ್ ಹಾಗೂ ನ್ಯೂ ಇಂಡಿಯಾ ಅಶೂರೆನ್ಸ್ ಕಂಪನಿಯ ಚಿರುದ್ಧದ ದೂರನ್ನು ವಜಾಗೊಳಿಸಲಾಗಿದೆ.

ಆಯೋಗದ ಅಧ್ಯಕ್ಷರಾದ ಎನ್.ಆರ್.ಚೆನ್ನಕೇಶವ, ಸದಸ್ಯರಾದ ಈ.ಪ್ರೇಮಾ ಮತ್ತು ಡಾ.ಮಂಜುನಾಥ ಬಮ್ಮನಕಟ್ಟಿ ಇವರುಗಳು ಗ್ರಾಹಕರ ಹಿತರಕ್ಷಣೆಗೆ ಪೂರಕವಾಗಿ ಈ ತೀರ್ಪು ನೀಡಿದ್ದಾರೆ. ದೂರುದಾರರ ಪರವಾಗಿ ವಕೀಲರಾದ ಹೆಚ್.ಜೆ.ದೇವತ್ ಅವರು ವಾದ ಮಂಡಿಸಿದ್ದರು.

Cylinder leak: Order to provide compensation to injured

Share

Leave a comment

Leave a Reply

Your email address will not be published. Required fields are marked *

Don't Miss

ಹಿರಿಯ ನಾಗರಿಕರಿಗೆ 3.12 ಲಕ್ಷ ರೂ ವಂಚನೆ

ಚಿಕ್ಕಮಗಳೂರು: ಸೈಬರ್ ಕ್ರಿಮಿನಲ್‌ಗಳ ಜಾಲಕ್ಕೆ ಸಿಲುಕಿ ಹಿರಿಯ ನಾಗರಿಕರೊಬ್ಬರು ಬರೋಬ್ಬರಿ 3.12 ಲಕ್ಷ ಕಳೆದುಕೊಂಡಿದ್ದಾರೆ. ನಗರದಲ್ಲಿ ವಾಸವಾಗಿರುವ 62 ವರ್ಷದ ವೆಂಕಟೇಶ್ ಇತ್ತೀಚೆಗೆ ಅವರ ಮೊಬೈಲ್‌ಗೆ ಬಂದಿದ್ದ ಒಂದು ಅಪರಿಚಿತ ಎಪಿಕೆ...

ಜಿಲ್ಲೆಯ ಒಟ್ಟು 15 ಮಂದಿಯ ಗಡಿಪಾರಿಗೆ ಶಿಫಾರಸ್ ಪತ್ರ

ಚಿಕ್ಕಮಗಳೂರು: ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್, ಭಜರಂಗದಳದ ಮುಖಂಡ ಶ್ಯಾಮ್ ವಿ ಗೌಡ, ಮುಸ್ಲಿಂ ಸಮುದಾಯದ 10 ಮಂದಿ ಸೇರಿ ಜಿಲ್ಲೆಯ ಒಟ್ಟು 15 ಮಂದಿಯ ಗಡಿಪಾರಿಗೆ ಜಿಲ್ಲಾ...

Related Articles

ಎಸ್.ಬಿದರೆಯ ಬೆಂಕಿ ಲಕ್ಷ್ಮೀ ರಂಗನಾಥಸ್ವಾಮಿ ಬ್ರಹ್ಮ ರಥೋತ್ಸವ

ಕಡೂರು: ತಾಲ್ಲೂಕಿನ ಸಖರಾಯಪಟ್ಟಣ ಹೋಬಳಿ ಎಸ್.ಬಿದರೆಯ ಬೆಂಕಿ ಲಕ್ಷ್ಮೀ ರಂಗನಾಥಸ್ವಾಮಿ ಬ್ರಹ್ಮ ರಥೋತ್ಸವವು ಮಂಗಳವಾರ ಶ್ರದ್ಧಾ...

ಚಿಕ್ಕಮಗಳೂರು ನಗರದ ಐ.ಜಿ. ರಸ್ತೆಯಲ್ಲಿದ್ದ ಇಂದಿರಾ ಕ್ಯಾಂಟೀನ್ ಸ್ಥಳಾಂತರ

ಚಿಕ್ಕಮಗಳೂರು : ನಗರದ ಐ.ಜಿ. ರಸ್ತೆಯ ಬಸ್ ನಿಲ್ದಾಣದ ಸಮೀಪವಿರುವ ಇಂದಿರಾ ಕ್ಯಾಂಟೀನ್ ಅನ್ನು ಸ್ಥಳಾಂತರ...

ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳು ಮನೆ ಬಾಗಿಲಿಗೆ

ಚಿಕ್ಕಮಗಳೂರು: ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ...

ಶಾಸಕ ಜಿ.ಹೆಚ್. ಶ್ರೀನಿವಾಸ್ ವಿರುದ್ಧ ಪ್ರತಿಭಟನೆ

ಅಜ್ಜಂಪುರ : ಶಾಸಕ ಜಿ.ಹೆಚ್. ಶ್ರೀನಿವಾಸ್ ದಲಿತ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು...