Home namma chikmagalur chikamagalur ಶಾಸಕನಾಗಿ ಡಿ.ಎನ್. ಜೀವರಾಜ್ ಪ್ರಮಾಣವಚನ
chikamagalurHomeLatest Newsnamma chikmagalur

ಶಾಸಕನಾಗಿ ಡಿ.ಎನ್. ಜೀವರಾಜ್ ಪ್ರಮಾಣವಚನ

Share
Share

ಬೆಂಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ತೀವ್ರ ರಾಜಕೀಯ ಹೋರಾಟದ ಬಳಿಕ ಬಿಜೆಪಿ ನಾಯಕ ಡಿ.ಎನ್. ಜೀವರಾಜ್ ಅವರು ಬುಧವಾರ ನೂತನ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು. ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ವಿಧಾನಸೌಧದಲ್ಲಿ ನಡೆದ ಸರಳ ಸಮಾರಂಭದಲ್ಲಿ ಜೀವರಾಜ್ ಅವರಿಗೆ ಪ್ರಮಾಣವಚನ ಬೋಧಿಸಿದರು.

ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಶಾಸಕ ಮುನಿರಾಜು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಶೃಂಗೇರಿ ಶಾರದಾಂಬೆ ಹಾಗೂ ಭಗವಂತನ ಹೆಸರಿನಲ್ಲಿ ಜೀವರಾಜ್ ಪ್ರಮಾಣವಚನ ಸ್ವೀಕರಿಸಿದ್ದು, ಬಳಿಕ ಸ್ಪೀಕರ್ ಖಾದರ್ ಅವರು ಅಭಿನಂದಿಸಿ ವಿಧಾನಸಭಾ ನಡಾವಳಿಗಳ ಪುಸ್ತಕ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಆರ್. ಅಶೋಕ್ ಅವರು ಹಾರ ಹಾಗೂ ಪೇಟೆ ಹಾಕಿ ಜೀವರಾಜ್ ಅವರನ್ನು ಸನ್ಮಾನಿಸಿದರು.

ಇದರ ಮಧ್ಯೆ ಪ್ರಮಾಣವಚನ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತಿರುವ ಕುರಿತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಸಂವಿಧಾನದ ಪ್ರಕಾರ ಸ್ಪೀಕರ್ ಪ್ರಮಾಣವಚನ ಬೋಧಿಸದಿದ್ದರೆ ರಾಜ್ಯಪಾಲರನ್ನು ಸಂಪರ್ಕಿಸುವುದಾಗಿ ಎಚ್ಚರಿಕೆ ನೀಡಿದ್ದರು. ಅಗತ್ಯವಿದ್ದರೆ ಹೋರಾಟ ನಡೆಸುವುದಾಗಿ ಅವರು ಹೇಳಿದ್ದರು.

ಶೃಂಗೇರಿ ಕ್ಷೇತ್ರದ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ಈ ಬೆಳವಣಿಗೆಗಳು ನಡೆದಿವೆ. ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರ ಆಯ್ಕೆಯನ್ನು ಪ್ರಶ್ನಿಸಿ ಜೀವರಾಜ್ ನ್ಯಾಯಾಲಯದ ಮೊರೆ ಹೋಗಿದ್ದರು. ಅಂಚೆ ಮತಗಳ ಮರು ಎಣಿಕೆ ನಡೆಸುವಂತೆ ನ್ಯಾಯಾಲಯ ಆದೇಶ ನೀಡಿದ ನಂತರ ನಡೆದ ಮರು ಎಣಿಕೆಯಲ್ಲಿ ಜೀವರಾಜ್ ಅವರಿಗೆ ಬಹುಮತ ಲಭಿಸಿತು. ಇದರ ಆಧಾರದ ಮೇಲೆ ಚುನಾವಣಾಧಿಕಾರಿಗಳು ಜೀವರಾಜ್ ಅವರಿಗೆ ವಿಜಯ ಪ್ರಮಾಣಪತ್ರ ನೀಡಿದರು.

ಈ ಮೂಲಕ ಶೃಂಗೇರಿ ಕ್ಷೇತ್ರದಲ್ಲಿ ರಾಜಕೀಯ ತಿರುವು ಕಂಡಿದ್ದು, ಬಿಜೆಪಿ ತನ್ನ ಸ್ಥಾನವನ್ನು ಮರುಪಡೆಯಲು ಯಶಸ್ವಿಯಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲೂ ಚರ್ಚೆಗೆ ಕಾರಣವಾಗಿದೆ.

D.N. Jeevaraj takes oath as MLA

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...