Home namma chikmagalur chikamagalur ಬಡವರಿಗೆ ಆಸರೆಯಾಗಿರುವ ದಂತಭಾಗ್ಯ ಯೋಜನೆ
chikamagalurHomeLatest Newsnamma chikmagalur

ಬಡವರಿಗೆ ಆಸರೆಯಾಗಿರುವ ದಂತಭಾಗ್ಯ ಯೋಜನೆ

Share
Share

ಚಿಕ್ಕಮಗಳೂರು: ಬಡವರಿಗಾಗಿ ೨೦೧೬ ರಲ್ಲಿ ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ದಂತಭಾಗ್ಯ ಯೋಜನೆ ಇಂದು ಅನೇಕ ಬಡವರಿಗೆ ಆಸರೆಯಾಗಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾಸ್ಪತ್ರೆ, ನಿಟ್ಟೆ ಎ.ಬಿ. ಶೆಟ್ಟಿ ಡೆಂಟಲ್ ಕಾಲೇಜು ಆಶ್ರಯದಲ್ಲಿ ಭಾನುವಾರ ಏರ್ಪಡಿಸಿದ್ದ ಉಚಿತ ದಂತಜೋಡಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ೬೦ ವರ್ಷ ಮೇಲ್ಪಟ್ಟ ವಯೊಮಾನದವರಿಗೆ ೨೦೧೬ ರಲ್ಲಿ ಸಿದ್ರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ದಂತಭಾಗ್ಯ ಯೋಜನೆ ತಂದಿದ್ದಾರೆ.

ಬಿಪಿಎಲ್ ಕಾರ್ಡ್ ಹೊಂದಿರುವ ೬೦ ವರ್ಷ ಮೇಲ್ಪಟ್ಟವರು ಈ ಯೋಜನೆ ಲಾಭ ಪಡೆಯಬಹುದಿತ್ತು. ಈಗ ವಯೋಮಾನದ ಮಿತಿಯನ್ನು ೪೫ ವರ್ಷಕ್ಕೆ ಇಳಿಸಿದ್ದು ಇದರಿಂದ ಸಾಕಷ್ಟು ಬಡವರಿಗೆ ಅನುಕೂಲ ಆಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ದಂತ ಜೋಡಣೆಗೆ ೬೦-೭೦ ಸಾವಿರ ರೂ. ಪಾವತಿಸಬೇಕು. ಇಲ್ಲಿ ಉಚಿತವಾಗಿ ಸೌಲಭ್ಯ ನೀಡುತ್ತಿದ್ದು ಇದನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಹೇಳಿದರು.

ಜಿಲ್ಲಾಸ್ಪತ್ರೆ ದಂತ ರೋಗ ವೈದ್ಯಾಕಾರಿ ಡಾ.ಪ್ರೇಂಕುಮಾರ್ ಪ್ರಾಸ್ತಾವಿಕ ಮಾತನಾಡಿ, ಉಚಿತ ಕೃತಕ ದಂತಪಂಕ್ತಿ ಜೋಡನಾ ಶಿಬಿರವನ್ನು ಕರ್ನಾಟಕ ಸರಕಾರ ದಂತಭಾಗ್ಯ ಯೋಜನೆ ಹೆಸರಲ್ಲಿ ಜಾರಿಗೆ ತಂದಿದೆ. ೩ ಹಲ್ಲುಗಳಿಗಿಂತ ಹೆಚ್ಚು ಹಲ್ಲುಗಳು ಹೋಗಿದ್ದರೆ ಅಂತವರು ಈ ಯೋಜನೆ ಲಾಭ ಪಡೆಯಬಹುದು ಎಂದು ಹೇಳಿದರು.

ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್ ಮಾತನಾಡಿ, ಹಲ್ಲುಗಳ ಜೋಡಣೆ ಹಾಕಿಸಿಕೊಳ್ಳಲು ಬಡಜನರಿಗೆ ಹೆಚ್ಚು ಹಣ ವ್ಯಯಿಸಲು ಸಾಧ್ಯವಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ದಂತಭಾಗ್ಯ ಯೋಜನೆ ಮೂಲಕ ಹಲ್ಲುಸೆಟ್ಟು ಕಟ್ಟಿಸಿಕೊಳ್ಳಲು ಅನುಕೂಲ ಕಲ್ಪಿಸಿರುವುದು ತುಂಬಾ ಜನರಿಗೆ ಪ್ರಯೋಜನವಾಗಲಿದೆ ಎಂದು ಹೇಳಿದರು.

ಜಿಲ್ಲಾಸರ್ಜನ್ ಡಾ. ಚಂದ್ರಶೇಖರ್ ಸ್ವಾಗತಿಸಿದರು. ಡಿಎಚ್‌ಒ ಡಾ.ಅಶ್ವತ್‌ಬಾಬು, ಡಿಎಸ್-೨ ಚಂದ್ರಶೇಖರಸಾಲಿಮಠ, ನಿಟ್ಟೆ ಎ.ಬಿ.ಶೆಟ್ಟಿ ಡೆಂಟಲ್ ಕಾಲೇಜಿನ ಡಾ.ಚೇತನ ಹೆಗ್ಡೆ, ವಿವಿಧ ತಾಲೂಕಿನಿಂದ ಆಗಮಿಸಿದ್ದ ದಂತವೈದ್ಯರು, ಅಧಕಾರಿ ಸಿಬ್ಬಂದಿ ಕಾರ್ಯಕ್ರಮದಲ್ಲಿದ್ದರು.

Danthabhagya Yojana a support for the poor

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು ತಾಲೂಕು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೆ ಆಗ್ರಹ

ಚಿಕ್ಕಮಗಳೂರು: ಈ ಬಾರಿಯ ಮುಂಗಾರು ಅವಧಿಯಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಕೃಷಿ, ತೋಟಗಾರಿಕೆ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗುವ ಆತಂಕವಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು...

ಕಡೂರು ಬಸ್ ನಿಲ್ದಾಣದಲ್ಲಿ 50 ಗ್ರಾಂ ತೂಕದ ಚಿನ್ನದ ಸರ ಕಳ್ಳತನ

ಕಡೂರು: ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡ ಕಳ್ಳರ ಗ್ಯಾಂಗ್ ಒಂದು, ಬಸ್ ಹತ್ತುವ ವೇಳೆ ಮಹಿಳೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಬರೋಬ್ಬರಿ 50 ಗ್ರಾಂ ತೂಕದ ಚಿನ್ನದ ಸರವನ್ನು ಕ್ಷಣಾರ್ಧದಲ್ಲಿ ಎಗರಿಸಿ...

Related Articles

ಕೋಟ್ಯಂತರ ರೂಪಾಯಿ ವಂಚಿಸಿದ ನಕಲಿ ಲೇಡಿ ಪಿಎಸ್‌ಐ ಬಂಧನ

ಚಿಕ್ಕಮಗಳೂರು: ತಾನು ಬೆಂಗಳೂರಿನ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಎಂದು ನಂಬಿಸಿ, ಚಿನ್ನ, ಹಣ, ಮೊಬೈಲ್ ಹಾಗೂ ಕಾರು...

ನಲಪಾಡ್ ಹೇಳಿಕೆ ಖಂಡಿಸಿ ಜೆಡಿಎಸ್ ಅಲ್ಪಸಂಖ್ಯಾತ ಘಟಕ ಆಕ್ರೋಶ

ಚಿಕ್ಕಮಗಳೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯ ಯುವ ಘಟಕದ...

ಮಳಲೂರು ಏತ ನೀರಾವರಿ ಯೋಜನೆ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಅನುಷ್ಠಾನ ಮತ್ತು ಅರಸನ ನಾಲೆ ಪುನಶ್ಚೇತನ ಯೋಜನೆಗಳ ಕಾಮಗಾರಿಗಳಿಗೆ ಉಂಟಾಗಿರುವ...

2ಬಿ ಮೀಸಲಾತಿ ಮರುಸ್ಥಾಪನೆಗೆ ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಚಿಕ್ಕಮಗಳೂರು: ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತಿದ್ದ ಶೇ.4ರಷ್ಟು 2ಬಿ ಮೀಸಲಾತಿಯನ್ನು ಮರುಸ್ಥಾಪಿಸಲು ರಾಜ್ಯ ಸರ್ಕಾರ ಕೂಡಲೇ...