Home Latest News ಒಳ ಮೀಸಲಾತಿ ಘೋಷಣೆ ಸರ್ಕಾರಕ್ಕೆ ದಸಂಸ ಅಭಿನಂದನೆ
Latest NewschikamagalurHomenamma chikmagalur

ಒಳ ಮೀಸಲಾತಿ ಘೋಷಣೆ ಸರ್ಕಾರಕ್ಕೆ ದಸಂಸ ಅಭಿನಂದನೆ

Share
Share

ಚಿಕ್ಕಮಗಳೂರು:  ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುವ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್ ದಾಸ್ ಏಕ ಸದಸ್ಯ ಆಯೋಗ ನೀಡಿರುವ ವರದಿಗೆ ಸ್ಪಂದಿಸಿರುವ ಸರ್ಕಾರ ಒಳ ಮೀಸಲಾತಿ ಘೋಷಿಸಿರುವುದನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಲ್.ಎನ್ ಶ್ರೀಕಾಂತ್ ಸ್ವಾತಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆಯೋಗದ ವರದಿ ಸಾಮಾಜಿಕ ನ್ಯಾಯ ಒದಗಿಸುವಲ್ಲಿ ಸಮಗ್ರವಾಗಿದ್ದು, ನ್ಯಾಯಬದ್ಧವಾಗಿದೆ. ಸಂವಿಧಾನ ಬದ್ಧವಾಗಿ ವೈಜ್ಞಾನಿಕವಾಗಿದೆ. ಈ ಮೂಲಕ ಸರ್ಕಾರ ಒಳಮೀಸಲಾತಿ ಘೋಷಿಸಿರುವುದು ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳಿಗೂ ಸಾಮಾಜಿಕ ಪರಿಕಲ್ಪನೆಯಡಿ ನ್ಯಾಯ ಒದಗಿಸಿದೆ. ಇದಕ್ಕಾಗಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಅವಕಾಶ ವಂಚಿತ ಸಮುದಾಯಗಳಿಗೆ ಎಲ್ಲಾ ಕ್ಷೇತ್ರಗಳಲ್ಲಿ ಸೂಕ್ತ ಪ್ರಾತಿನಿಧ್ಯ ಕಲ್ಪಿಸಿಕೊಡುವ ಮೂಲಕ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯ ಸಬಲೀಕರಣಗೊಳಿಸುವ ಪರಿಣಾಮಕಾರಿ ಯೋಜನೆ ಇದಾಗಿದೆ ಎಂದರು.

ಪರಿಶಿಷ್ಟ ಜಾತಿ ಸಮುದಾಯಗಳು ಮತ್ತು ದಸಂಸ ಕಳೆದ ೩೫ ವರ್ಷಗಳ ಈ ಬೇಡಿಕೆಯನ್ನು ಮುಂದಿಟ್ಟು ಹೋರಾಟ ನಡೆಸಿದ ಪರಿಣಾಮ ಇಂದು ಗೆಲುವು ಸಾಧಿಸಲು ಪೂರಕವಾಗಿದೆ ಎಂದು ತಿಳಿಸಿದರು.

ಪರಿಶಿಷ್ಟ ಜಾತಿಗಳನ್ನು ಮೂರು ವಿಭಾಗಗಳನ್ನಾಗಿ ವರ್ಗೀಕರಿಸಿ ಶೇ.೧೭ ರಷ್ಟು ಎಸ್‌ಸಿ ಮೀಸಲು ಪ್ರಮಾಣವನ್ನು ಎಡಗೈ ಮಾದಿಗ ಶೇ.೬. ಬಲಗೈ ಛಲವಾದಿ ಶೇ.೬, ಹಾಗೂ ಭೋವಿ, ಲಂಬಾಣಿ, ಕೊರಚ, ಕೊರಮ ಇತರೆ ಜಾತಿಗಳಿಗೆ ಶೇ.೫ ಒಳಮೀಸಲಾತಿ ಹಂಚಿಕೆ ಮಾಡಲಾಗಿದೆ ಎಂದು ವಿವರಿಸಿದರು.

ಇಂತಹ ಐತಿಹಾಸಿಕ ನಿರ್ಣಯ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಹೆಚ್ ಮುನಿಯಪ್ಪ, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಹಾಗೂ ಎಲ್ಲ ಸಚಿವ ಸಚಿವ ಸಂಪುಟದ ಸದಸ್ಯರಿಗೆ ಮತ್ತು ಸಹಕರಿಸಿದ ಶಾಸಕರುಗಳಿಗೆ ಕೃತಜ್ಞತೆ ಸಲ್ಲಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಸಂಘಟನಾ ಸಂಚಾಲಕರಾದ ಎಸ್.ಎನ್. ಮಹೇಂದ್ರಸ್ವಾಮಿ ಶಿವನಿ, ರಾಮು ಎನ್.ಆರ್ ಪುರ, ರವಿಶಂಕರ್ ಯಳ್ಳಂಬಳಸೆ, ಲೋಕೇಶ್ ಮೇಲನಹಳ್ಳಿ, ಸಂಜೀವ್ ಕಳಸ, ಜಿಲ್ಲಾ ಮಹಿಳಾ ಒಕ್ಕೂಟದ ಸಂಚಾಲಕಿ ಪವಿತ್ರ ಎನ್.ಆರ್ ಉಪಸ್ಥಿತರಿದ್ದರು.

Dasams congratulates government on internal reservation announcement

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...