Home namma chikmagalur ರಸ್ತೆ ಅಪಘಾತದಲ್ಲಿ ದಾವಣಗೆರೆಯ ಉದ್ಯಮಿ ಸಾವು
namma chikmagalurCrime NewsHomeKadurLatest News

ರಸ್ತೆ ಅಪಘಾತದಲ್ಲಿ ದಾವಣಗೆರೆಯ ಉದ್ಯಮಿ ಸಾವು

Share
Share

ಕಡೂರು: ತಾಲ್ಲೂಕಿನ ಕನಕರಾಯನಗುಡ್ಡದ ಬಳಿ ಕಾರು ಮತ್ತು ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ದಾವಣಗೆರೆಯ ಉದ್ಯಮಿ ಪ್ರತಾಪ್‌ ರಾವ್ (52) ಮೃತಪಟ್ಟವರು. ದಾವಣಗೆರೆ ಎಸ್‌.ಎಸ್ ಲೇಔಟ್‌ನ ನಿವಾಸಿ ಪ್ರತಾಪ್‌ರಾವ್ ಅವರು ಬುಧವಾರ ಬೆಳಿಗ್ಗೆ ಪತ್ನಿ ಮತ್ತು ಮಗುವಿನೊಡನೆ ಕಡೂರು ಹೊರವಲಯದ ರಾಷ್ಟ್ರೀಯ ಹೆದ್ದಾರಿಯ ಬೈಪಾಸ್ ಮೂಲಕ ಮೈಸೂರಿನ ಚಾಮುಂಡಿಬೆಟ್ಟಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಕಾರು ನಿಯಂತ್ರಣ ತಪ್ಪಿ ಹಾಸನದಿಂದ ಬೀರೂರು ಕಡೆ ತೆರಳುತ್ತಿದ್ದ ಟ್ಯಾಂಕರ್‌ಗೆ ಡಿಕ್ಕಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ರಭಸಕ್ಕೆ ಕಾರು ಹಾಗೂ ಟ್ಯಾಂಕರ್ ಎರಡೂ ಪಲ್ಟಿಯಾಗಿದ್ದು, ಟ್ಯಾಂಕರ್‌ನಲ್ಲಿದ್ದ ಡೀಸೆಲ್ ಸೋರಿಕೆಯಾಗಿದೆ. ಹೆಚ್ಚಿನ ಅನಾಹುತ ನಡೆಯದಂತೆ ಅಗ್ನಿಶಾಮಕ ಠಾಣೆಯ ಎಎಫ್‌ಎಫ್‌ಎಫ್ ವಾಹನ ಮತ್ತು ಹೆದ್ದಾರಿ ಆಂಬುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿದವು. ಫೋಮ್ ಸಿಂಪಡಿಸಿ, ಬೆಂಕಿ ತಗುಲದಂತೆ ಎಚ್ಚರಿಕೆ ವಹಿಸಿ, ಕ್ರೇನ್ ಮೂಲಕ ಟ್ಯಾಂಕರ್‌ ಅನ್ನು ಎತ್ತಿ ನಿಲ್ಲಿಸಲಾಯಿತು.

ಕಾರಿನಲ್ಲಿದ್ದ ಸೋಫಿ ಮತ್ತು ಪುತ್ರ, ಟ್ಯಾಂಕರ್ ಚಾಲಕ ವಿಜಯಕುಮಾರ್‌ ಅವರನ್ನು ಕಡೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ, ಟ್ಯಾಂಕರ್ ಚಾಲಕನನ್ನು ಅರಸೀಕೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಚಾರ ನಿಯಂತ್ರಣ ಮತ್ತು ಪರಿಹಾರ ಕಾರ್ಯಗಳಲ್ಲಿ ಕಡೂರು ಠಾಣೆಯ ಪಿಎಸ್‌ಐಗಳಾದ ಸಜಿತ್‌ಕುಮಾರ್ ಜಿ.ಆರ್., ಧನಂಜಯ್ ಮತ್ತು ಲೀಲಾವತಿ ಆರ್. ಹಾಗೂ ಅಗ್ನಿಶಾಮಕ ಸಿಬ್ಬಂದಿ ಶ್ರಮಿಸಿದರು. ಪ್ರತಾಪ್‌ರಾವ್ ಅವರ ಪತ್ನಿ ಸೋಫಿ ಅವರು ನೀಡಿದ ದೂರಿನನ್ವಯ ಕಡೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Davangere businessman dies in road accident

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...