Home namma chikmagalur chikamagalur ಒಂದೇ ದಿನ ಅಧಿಕಾರ ಸ್ವೀಕರಿಸಿದ ಡಿಸಿ-ಎಸ್‌ಪಿ
chikamagalurHomeLatest Newsnamma chikmagalur

ಒಂದೇ ದಿನ ಅಧಿಕಾರ ಸ್ವೀಕರಿಸಿದ ಡಿಸಿ-ಎಸ್‌ಪಿ

Share
Share

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಡಿಸಿಯಾಗಿದ್ದ ಸಿ.ಎನ್.ಮೀನಾ ನಾಗರಾಜ್ ಅವರು ವರ್ಗಾವಣೆಯಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಡಿಸಿ ಹುದ್ದೆಗೆ ನಿಯುಕ್ತರಾದ ಎಂ.ಎನ್.ನಾಗರಾಜ್ ಅವರು ಗುರುವಾರ ಸಂಜೆ ಮೀನಾ ನಾಗರಾಜ್ ಅವರಿಂದ ಅಧಿಕಾರ ಸ್ವೀಕರಿಸಿದರು. ಇನ್ನು ಎಸ್‌ಪಿ ವಿಕ್ರಮ ಅಮಟೆ ಅವರ ವರ್ಗಾವಣೆಯಿಂದ ತೆರವಾಗಿದ್ದ ಚಿಕ್ಕಮಗಳೂರು ಎಸ್‌ಪಿಯಾಗಿ ಐಪಿಎಸ್ ಅಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅಧಿಕಾರ ವಹಿಸಿಕೊಂಡರು.

ಕಾಫಿನಾಡು ಚಿಕ್ಕಮಗಳೂರು ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಡಿಸಿ, ಎಸ್‌ಪಿ ಇಬ್ಬರು ಒಂದೇ ದಿನ ವರ್ಗಾವಣೆಯಾಗಿದ್ದಲ್ಲದೆ ಒಂದೇ ದಿನ ನೂತನ ಡಿಸಿ ಹಾಗೂ ಎಸ್‌ಪಿ ಅಧಿಕಾರ ವಹಿಸಿಕೊಂಡಿದ್ದು ಹಾಗೂ ಅದೂ ವರ್ಷದ ಮೊದಲ ದಿನವೇ ಆಗಿದ್ದು ವಿಶೇಷವಾಗಿತ್ತು.

ನಿಕಟಪೂರ್ವ ಎಸ್‌ಪಿ ವಿಕ್ರಮ ಅಮಟೆ ಅವರು ಮಧ್ಯಾಹ್ಮ ೧೨ ಗಂಟೆ ಒಳಗಾಗಿ ಚಿಕ್ಕಮಗಳೂರಿನ ಎಸ್‌ಪಿ ನಿವಾಸವನ್ನು ತೊರೆದು ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಚಿಕ್ಕಮಗಳೂರು ನೂತನ ಎಸ್‌ಪಿ ಜಿತೇಂದ್ರ ಕುಮಾರ್ ದಯಾಮ ಅವರು ಬರುವುದು ತಡವಾಗಲಿದೆ ಎಂಬ ಕಾರಣದಿಂದಾಗಿ ವಿಕ್ರಮ ಅಮಟೆ ಅವರು ಚಿಕ್ಕಮಗಳೂರಿನಿಂದ ನಿರ್ಗಮಿಸಿದರು.

ಚಿಕ್ಕಮಗಳೂರಿನಿಂದ ವಿಕ್ರಮ ಅಮಟೆ ವರ್ಗಾವಣೆಯಾಗಿದೆ ಎಂಬುದು ತಿಳಿಯುತ್ತಿದ್ದಂತೆ ನೂರಾರು ಜನ ಎಸ್‌ಪಿ ನಿವಾಸದ ಎದುರು ಜಮಾಯಿಸಿದ್ದರು. ಜೊತೆಗೆ ಚಿಕ್ಕಮಗಳೂರಿನಲ್ಲಿ ಮಾಡಿದ ಕೆಲಸದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿ ಭಾವನಾತ್ಮಕವಾಗಿ ಬೀಳ್ಕೋಡುಗೆ ನೀಡಿದರು.

ಇನ್ನು ಚಿಕ್ಕಮಗಳೂರು ಎಸ್‌ಪಿಯಾಗಿ ಮಧ್ಯಾಹ್ನ ಅಧಿಕಾರ ಸ್ವೀಕರಿಸಿದ ಜಿತೇಂದ್ರ ಕುಮಾರ್ ದಯಾಮ ಅವರು ಅಧಿಕಾರಿಗಳ ಬಳಿ ಜಿಲ್ಲೆಯ ಸಮಗ್ರ ಮಾಹಿತಿ ಪಡೆದರು. ಜಿತೇಂದ್ರ ಕುಮಾರ್ ದಯಾಮ ಅವರು ಚಿಕ್ಕಮಗಳೂರಿನಲ್ಲಿ ಮೂರು ತಿಂಗಳ ಕಾಲ ಪ್ರಭಾರ ಎಸ್‌ಪಿಯಾಗಿ ಕಾರ್ಯನಿರ್ವಹಿಸಿದ್ದು, ಜಿಲ್ಲೆಯ ಬಗ್ಗೆ ಇನ್ನಷ್ಟು ಮಾಹಿತಿ ಪಡೆದುಕೊಂಡಿದ್ದು ವಿಶೇಷವಾಗಿತ್ತು.

DC-SP takes charge on the same day

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...