Home ಡಿ.ಸಿ.ಸಿ ಬ್ಯಾಂಕ್ ಚುನಾವಣೆ ಇತರೆ ಸಹಕಾರ ಸಂಘಗಳ ಸ್ಥಾನಕ್ಕೆ ಫೈಟ್
HomechikamagalurLatest Newsnamma chikmagalur

ಡಿ.ಸಿ.ಸಿ ಬ್ಯಾಂಕ್ ಚುನಾವಣೆ ಇತರೆ ಸಹಕಾರ ಸಂಘಗಳ ಸ್ಥಾನಕ್ಕೆ ಫೈಟ್

Share
Share

ಚಿಕ್ಕಮಗಳೂರು: ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ಚುನಾವಣೆ ಸೆಪ್ಟೆಂಬರ್13 ರಂದು ನಡೆಯಲಿದ್ದು ಬಹುತೇಕ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗುವ ವಾತಾವರಣ ಇದೆ.ಆದರೆ ಇತರೆ ಸಹಕಾರ ಸಂಘಗಳ ನಿರ್ದೇಶಕ ಸ್ಥಾನ ಮತ್ತು ಹಾಲು ಉತ್ಪಾದಕರ ಸಹಕಾರ ಸಂಘಗಳ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆಯುವ ಸಾಧ್ಯತೆ ಹೆಚ್ಚಾಗಿದೆ.

ಕಳೆದ ಹತ್ತು ವರ್ಷಗಳಿಂದ ನಿರ್ದೇಶಕರಾಗಿರುವ ಟಿ.ಎಲ್.ರಮೇಶ್‌ ಮತ್ತೊಮ್ಮೆ ನಿರ್ದೇಶಕರಾಗಲು ಪ್ರಯತ್ನ ನಡೆಸಿದ್ದಾರೆ.ಆದರೆ ಬಿಜೆಪಿಯಲ್ಲಿ ಅಪಸ್ವರ ಮತ್ತು ಗೊಂದಲ ಇರುವುದು ನೋಡಿದರೆ ರಮೇಶ್‌ ಗೆ ಕಷ್ಟ ಅದರೆ ರಮೇಶ್‌ ಎಲ್ಲಾ ಮುಖಂಡರ ಮನವೊಲಿಸಲು ಪ್ರಯತ್ನ ಮಾಡುತ್ತಿದ್ದಾರೆ.

ರಮೇಶ್‌, ಲೋಕಪ್ಪಗೌಡ,ಈಶ್ವರಹಳ್ಳಿ ಮಹೇಶ್ ,ಮಂಜುನಾಥ್ ಜೋಷಿ,ಕಡೂರು ರವಿ,ತರೀಕೆರೆ ಶಶಾಂಕ್ ಮತ್ತಿತರರು ಸ್ಪರ್ಧೆ ಮಾಡುವ ಲೆಕ್ಕಾಚಾರದಲ್ಲಿ ಇದ್ದಾರೆ. ಕ್ಯೂ ನಿಂತಿರುವವರಲ್ಲಿ ಬಹುತೇಕ ಬಿಜೆಪಿಯವರಾಗಿರುವುದು ಮುಖಂಡರಿಗೆ ತಲೆ ಬಿಸಿಯಾಗಿದೆ.ಬಹುತೇಕ ಬಿಜೆಪಿಯವರು ಹೊಸಬರಿಗೆ ಅವಕಾಶ ನೀಡ ಬೇಕು ಅದರಲ್ಲೂ ಚಿಕ್ಕಮಗಳೂರು ತಾಲ್ಲೂಕಿನಲ್ಲಿ ಹೆಚ್ಚು ಸಂಘಗಳು ಇರುವುದರಿಂದ ಚಿಕ್ಕಮಗಳೂರು ಅಭ್ಯರ್ಥಿಗೆ ಅವಕಾಶ ಹೆಚ್ಚಾಗಿದೆ. ಈ ಬಗ್ಗೆ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಮತ್ತು ಎಸ್.ಎಲ್.ಬೋಜೇಗೌಡ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಹೆಚ್ಚು.

ಹಾಲು ಉತ್ಪಾದಕರ ಸಹಕಾರ ಸಂಘಗಳ ಪ್ರತಿನಿಧಿಸುವ ನಿರ್ದೇಶಕ ಸ್ಥಾನಕ್ಕೆ ಸೋನಾಲ್ ಮತ್ತು ಕಡೂರು ತಾಲ್ಲೂಕು ಬಿದರೆಯ ಜಗದೀಶ್ ಮಧ್ಯೆ ಭಾರಿ ಪೈಪೋಟಿ ನಡೆಯುವ ಸಾಧ್ಯತೆ ಹೆಚ್ಚಾಗಿದೆ.ಜಗದೀಶ್ ಮನವೊಲಿಸುವ ಪ್ರಯತ್ನದ ಜೊತೆಗೆ ಒತ್ತಡ ತರುತ್ತಿದ್ದಾರೆ.ಹೆಚ್.ಡಿ.ರೇವಣ್ಣ ಸೂಪರ್ ವೈಜರ್ ಗಳ ಮೂಲಕ ತಂತ್ರಗಳನ್ನು ಬಳಸುತ್ತಿದ್ದಾರೆ ಎನ್ನಲಾಗಿದೆ. ಜಗದೀಶ್ ಇದಕ್ಕೆ ಬಗ್ಗದೆ ಹಟ ಹಿಡಿದಿದ್ದಾರೆ.

ಚಿಕ್ಕಮಗಳೂರು ತಾಲ್ಲೂಕಿನ ಸಹಕಾರ ಸಂಘಗಳ ಕ್ಷೇತ್ರದಿಂದ ಎರಡು ಸ್ಥಾನಗಳಿಗೆ ಹಾಲಿ ನಿರ್ದೇಶಕರಾಗಿರುವ ನಿರಂಜನ್ ಮತ್ತು ಸತೀಶ್ ಬದಲಿಗೆ ಸಿ.ಟಿ.ರವಿ ಮತ್ತು ಎಸ್.ಎಲ್.ಬೋಜೇಗೌಡ ಸ್ಪರ್ಧೆ ಮಾಡಿದರೆ ಗೊಂದಲ ಸೃಷ್ಟಿಯಾಗುವ ಸಾಧ್ಯತೆ ಹೆಚ್ಚಾಗಿದೆ.ಇದರ ಬಗ್ಗೆ ಸಿ.ಟಿ.ರವಿಯವರ ತೀರ್ಮಾನ ದ ಮೇಲೆ ನಿಂತಿದೆ.ಚುನಾವಣೆ ವಿಚಾರವಾಗಿ ಕಾಂಗ್ರೆಸ್ ಮೌನವಾಗಿರುವುದು ನೋಡಿದರೆ ಅನುಮಾನ ಉಂಟಾಗುತ್ತಿದೆ .

DCC Bank Election Fight for the seats of other cooperative societies

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...