Home namma chikmagalur ನಾಪತ್ತೆಯಾಗಿದ್ದ ಗಾರ್ಡ್ ಮೃತ ದೇಹ ಪತ್ತೆ
namma chikmagalurHomeLatest News

ನಾಪತ್ತೆಯಾಗಿದ್ದ ಗಾರ್ಡ್ ಮೃತ ದೇಹ ಪತ್ತೆ

Share
Share

ಚಿಕ್ಕಮಗಳೂರು: ಅರಣ್ಯ ಇಲಾಖೆಯ ಗಾರ್ಡ್ ಶರತ್ ನ ಮೃತದೇಹ ಪತ್ತೆ. ಸಖರಾಯ ಪಟ್ಟಣದ ಸಮೀಪ ಹೊಸದಾಗಿ ನಿರ್ಮಾಣವಾಗುತ್ತಿರುವ ಟೋಲ್ ಗೇಟ್ ಸಮೀಪವಿರುವ ನೀಲಗಿರಿ ಫಾರೆಸ್ಟ್ ಒಳಗಡೆ ಮೃತದೇಹ ಪತ್ತೆಯಾಗಿದೆ.ಶರತ್ ನ ಮೃತದೇಹ ಸಂಪೂರ್ಣ ಕೊಳೆತು ಹೋಗಿದೆ ಎಂದು ತಿಳಿದು ಬಂದಿದೆ.

ಹತ್ತು ದಿನಗಳ ಹಿಂದೆ ನಾಪತ್ತೆಯಾಗಿದ್ದವನ ಪತ್ತೆಗಾಗಿ ಪೊಲೀಸ್ ರು ಮತ್ತು ಅರಣ್ಯ ಇಲಾಖೆಯವರು ತೀವ್ರ ಪ್ರಯತ್ನ ನಡೆಸಿದ್ದು ದ್ರೋಣ ಕ್ಯಾಮರಾ ಕೂಡ ಬಳಸಿದರೂ ಸುಳಿವು ಸಿಕ್ಕಿರಲಿಲ್ಲ. ಪೊಲೀಸ್ ಇಲಾಖೆ ಮತ್ತು ಅರಣ್ಯ ಇಲಾಖೆಯವರು ಇಂದು ಹೆಚ್ಚು ಸಿಬ್ಬಂದಿಯೊಂದಿಗೆ ತಪಾಸಣೆ ನಡೆಸುತ್ತಿದ್ದಾಗ ದುರ್ವಾಸನೆ ಬಂದ ಕಡೆ ಹೋಗಿ ತಪಾಸಣೆ ಮಾಡಿದಾಗ ಶರತ್ ನ ಮೃತದೇಹ ಪತ್ತೆಯಾಗಿದೆ.

ಪೊಲೀಸ್ ರಿಗೆ ಮತ್ತು ಅರಣ್ಯ ಇಲಾಖೆಯವರಿಗೆ ದೊಡ್ಡ ತಲೆನೋವು ತಂದಿದ್ದ ಈ ಪ್ರಕರಣದ ಬಗ್ಗೆ ತನಿಖೆ ನಡೆಯಬೇಕಾಗಿದೆ. ಕೂರ್ಗ್ ಮೂಲದ ಶರತ್ ಕಳೆದ ಆರು ತಿಂಗಳ ಹಿಂದೆ ಕೂರ್ಗ್ ನಿಂದ ಚಿಕ್ಕಮಗಳೂರು ಅರಣ್ಯ ವಿಭಾಗಕ್ಕೆ ವರ್ಗಾವಣೆಯಾಗಿ ಬಂದಿದ್ದು ಸದಾ ಕುಡಿತದ ಅಮಲಿನಲ್ಲಿ ಇರುತ್ತಿದ್ದ ಎಂದು ಸಾರ್ವಜನಿಕರು ತಿಳಿಸಿದ್ದಾರೆ.

Dead body of missing guard found

Share

Leave a comment

Leave a Reply

Your email address will not be published. Required fields are marked *

Don't Miss

ಗುಡುಗು-ಸಿಡಿಲಿನ ಭಾರಿ ಮಳೆಗೆ ಇಡೀ ನಗರ ತಲ್ಲಣ

ಚಿಕ್ಕಮಗಳೂರು: ಶುಕ್ರವಾರ ಮಧ್ಯರಾತ್ರಿ ಗುಡುಗು-ಸಿಡಿಲಿನ ಅಬ್ಬರದೊಂದಿಗೆ ಸುರಿದ ಭಾರಿ ಮಳೆಗೆ ಇಡೀ ನಗರ ತಲ್ಲಣಗೊಂಡಿದೆ. ಮರಗಳು ವಿದ್ಯುತ್ ಕಂಬಗಳ ಸಹಿತ ರಸ್ತೆಗೆ ಉರಳಿದವು. ಹಲವು ಕಟ್ಟಡಗಳ ಚಾವಣಿ ಹಾರಿ ಹೋಗಿವೆ. ಮಧ್ಯರಾತ್ರಿ...

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನೇಮಕ ನಿಯಮ ಬಾಹಿರ

ಚಿಕ್ಕಮಗಳೂರು: ಇತ್ತೀಚೆಗೆ ಡಿ. ರಾಮೇಗೌಡರವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕಮಗಳೂರು ತಾಲ್ಲೂಕು ಘಟಕದ ಅಧ್ಯಕ್ಷನಾಗಿ ನೇಮಕ ಮಾಡಿರುವುದು ನಿಯಮ ಬಾಹಿರವಾಗಿದ್ದು, ಈ ಆಯ್ಕೆ ಅಮಾನ್ಯ ಎಂದು ಜಿಲ್ಲಾಧ್ಯಕ್ಷ ಮಹೇಶ್ ಹೇಳಿದರು....

Related Articles

‘ನಮ್ಮೂರಿಗೆ ರಸ್ತೆ ಅಭಿವೃದ್ಧಿ ಬೇಡ’ ಎಂದು ಗ್ರಾಮಸ್ಥರು….?

ಚಿಕ್ಕಮಗಳೂರು: ಸಾಮಾನ್ಯವಾಗಿ ಗ್ರಾಮಗಳಿಗೆ ರಸ್ತೆ ಬೇಕು, ಕುಡಿಯುವ ನೀರು ಬೇಕು, ವಿದ್ಯುತ್ ಬೇಕು ಎಂದು ಜನ...

ಜಿಲ್ಲೆಯಲ್ಲಿ ಅಧಿಕಗೊಂಡ ನಾಪತ್ತೆ ಪ್ರಕರಣಗಳು

ಚಿಕ್ಕಮಗಳೂರು: ಬೀರೂರು ಮತ್ತು ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಪ್ರತ್ಯೇಕ ನಾಪತ್ತೆ ಪ್ರಕರಣಗಳು ದಾಖಲಾಗಿದ್ದು,...

ಮಲೆನಾಡಿನಲ್ಲಿ ಮತ್ತೆ ಅಪಾಯಕಾರಿ ಕಾಲುಸಂಕಗಳನ್ನೇ ಆಶ್ರಯ ಪಡೆದ ಗ್ರಾಮಸ್ಥರು

ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ನಕ್ಸಲ್ ಚಟುವಟಿಕೆಗಳು ಸ್ತಬ್ಧವಾಗುತ್ತಿದ್ದಂತೆ ಸರ್ಕಾರ ಅಲ್ಲಿನ ಕುಗ್ರಾಮಗಳನ್ನು ಸಂಪೂರ್ಣವಾಗಿ ಕೈಬಿಟ್ಟಿದೆ...

ಜೆಜೆಎಂನಲ್ಲಿ ನಕಲಿ ಛಾಪಾ ಕಾಗದ ಬಳಸಿ ಸರ್ಕಾರಕ್ಕೆ ವಂಚನೆ

ಶೃಂಗೇರಿ:  ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜೆಜೆಎಂ (ಜಲ ಜೀವನ್ ಮಿಷನ್) ಹಾಗೂ ಟಾಸ್ಕ್ ಫೋರ್ಸ್...