Home namma chikmagalur chikamagalur ದೊಣ್ಣೆಯಿಂದ ಹಲ್ಲೆಯಾದ ಭಿಕ್ಷುಕನ ಸಾವು
chikamagalurCrime NewsHomeLatest Newsnamma chikmagalur

ದೊಣ್ಣೆಯಿಂದ ಹಲ್ಲೆಯಾದ ಭಿಕ್ಷುಕನ ಸಾವು

Share
Share

ತರೀಕೆರೆ: ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದ ಸುಮಾರು 65 ವರ್ಷದ ವ್ಯಕ್ತಿಯೊಬ್ಬರನ್ನು ದೊಣ್ಣೆಯಿಂದ ಹೊಡೆದು, ಕಾಲಿನಿಂದ ತುಳಿದು ಕೊಲೆ ಮಾಡಿರುವ ಆರೋಪದಡಿ ದಂಪತಿ ವಿರುದ್ಧ ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರನ್ನು ರಂಗಪ್ಪ ಎಂದು ಗುರುತಿಸಲಾಗಿದೆ. ಬಳ್ಳಾವರ ಗ್ರಾಮದ ಸಂತೆ ಮೈದಾನದ ಸಮೀಪದ ಶೆಡ್‌ನಲ್ಲಿ ವಾಸವಾಗಿದ್ದ ಅವರು, ಹಗಲಿನಲ್ಲಿ ಬಳ್ಳಾವರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಿಕ್ಷೆ ಬೇಡುತ್ತಿದ್ದರು ಎನ್ನಲಾಗಿದೆ.

ಸೆ.26ರ ರಾತ್ರಿ ಸುಮಾರು 10.30ರ ವೇಳೆಯಲ್ಲಿ ಬಳ್ಳಾವರ ಗ್ರಾಮದ ರೇಂಜರ್ಸ್ ಕ್ಯಾಂಪ್ ಹೋಮ್‌ಸ್ಟೇ ಗೇಟ್ ಎದುರು ರಿಪೇರಿ ನಡೆಯುತ್ತಿದ್ದ ಟಾರು ರಸ್ತೆಯ ಬಳಿ ಗಲಾಟೆ ಹಾಗೂ ಕೂಗಾಟದ ಶಬ್ದ ಕೇಳಿಬಂದಿದೆ. ಈ ವೇಳೆ ಹೂವಣ್ಣ ಮತ್ತು ಆತನ ಪತ್ನಿ ರತ್ನಮ್ಮ ರಂಗಪ್ಪನೊಂದಿಗೆ ಜಗಳವಾಡುತ್ತಿದ್ದರು ಎನ್ನಲಾಗಿದೆ.

ದೂರಿನಲ್ಲಿ ಉಲ್ಲೇಖಿಸಿರುವಂತೆ, ರಂಗಪ್ಪ ತನ್ನ ಪತ್ನಿಯ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾನೆ ಎಂದು ಆರೋಪಿಸಿ ಹೂವಣ್ಣ ದೊಣ್ಣೆಯಿಂದ ರಂಗಪ್ಪನ ತಲೆ, ಕೈ-ಕಾಲು ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಹೊಡೆದಿದ್ದಾನೆ. ಇದೇ ವೇಳೆ ರತ್ನಮ್ಮ ಕೂಡ ರಂಗಪ್ಪನನ್ನು ಕಾಲಿನಿಂದ ತುಳಿದಿದ್ದಾರೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡ ರಂಗಪ್ಪ ರಕ್ತಸಿಕ್ತ ಸ್ಥಿತಿಯಲ್ಲಿ ರಸ್ತೆಯಲ್ಲಿ ಬಿದ್ದಿದ್ದರು. ಸ್ಥಳೀಯರು ಹಾಗೂ ಪೊಲೀಸರು ಸೇರಿ ಅವರನ್ನು ಆಂಬ್ಯುಲೆನ್ಸ್ ಮೂಲಕ ತರೀಕೆರೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು, ಪರೀಕ್ಷಿಸಿದ ವೈದ್ಯರು ರಂಗಪ್ಪ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ನಂದಿಬಟ್ಟಲು ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್ ರಾಜೇಶ್ ಆರ್. ಅವರು ಸೆ.27ರಂದು ಲಿಂಗದಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಹೂವಣ್ಣ ಮತ್ತು ರತ್ನಮ್ಮ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Death of a beggar attacked with a club

Share

Leave a comment

Leave a Reply

Your email address will not be published. Required fields are marked *

Don't Miss

ಲಕ್ಯಾ-ಸಖರಾಯಪಟ್ಟಣ ಹೋಬಳಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಇಂಧನ ಸಚಿವ ಮನವಿ

ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಯಾ ಹಾಗೂ ಸಖರಾಯಪಟ್ಟಣ ಹೋಬಳಿಗಳಲ್ಲಿ ರೈತರು ಎದುರಿಸುತ್ತಿರುವ ತೀವ್ರ ವಿದ್ಯುತ್ ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ.ಟಿ ಅವರು...

ಬಿರಂಜಿ ಹೊಳೆಯಿಂದ ರೈತಾಪಿ ವರ್ಗದ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು:  ಜಾವಣಿಗೆ ನಾಡಿನ ರೈತರ ಜಮೀನುಗಳಿಗೆ ನೀರು ಹರಿಸುವಲ್ಲಿ ವಿಫಲಗೊ ಂಡಿರುವ ಸರ್ಕಾರದ ಆಡಳಿತ ವ್ಯವಸ್ಥೆ ವಿರುದ್ಧ ಮಂಗಳವಾರ ರೈತ ಸಂಘ- ಹಸಿರುಸೇನೆ ತಾಲ್ಲೂಕು ಘಟ ಕ ಕರೆ ನೀಡಿದ್ಧ ಪ್ರತಿಭಟನೆಯಲ್ಲಿ...

Related Articles

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು...

ಜ್ಞಾನೇಶ್ ಕುಮಾರ್ ವಜಾಗೊಳಿಸಿ ಬಂಧಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ

ಚಿಕ್ಕಮಗಳೂರು: ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಜೊತೆಗೆ ಬಿಜೆಪಿ...

ಪ.ಜಾತಿ-ಪ.ಪಂಗಡದವರ ದೌರ್ಜನ್ಯ ಪ್ರಕರಣದಲ್ಲಿ ಪರಿಹಾರ ವಿತರಣೆ ವಿಳಂಬ ಸಲ್ಲದು

ಚಿಕ್ಕಮಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಅಧಿನಿಯಮ ಅನ್ವಯ ದಾಖಲಾದ ಪ್ರತಿಯೊಂದು ಪ್ರಕರಣಕ್ಕೆ...