Home namma chikmagalur ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ
namma chikmagalurchikamagalurHomeLatest News

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

Share
Share

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು ಮಾಂಸವನ್ನು ಸ್ವಚ್ಛ ಮಾಡುತ್ತಿ ದ್ದಾಗ ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ ದಾಳಿ ಮಾಡಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಖಚಿತ ಮಾಹಿತಿ ಆಧರಿಸಿ ನರಸಿಂಹರಾಜಪುರ ವಲಯ ಅರಣ್ಯಾಧಿಕಾರಿ ಪ್ರವೀಣ್ ಕುಮಾರ್ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿಯ ಕುಸುಬೂರು ಗ್ರಾಮದ ದೊಡ್ಡಿನತಲೆ ಮೇಲ್ಭಾಗದ ಆರಂಬಳ್ಳಿ ಅರಣ್ಯದಲ್ಲಿ ದಾಳಿ ಮಾಡಿದ್ದಾರೆ.

ಐವರು ಆರೋಪಿಗಳು ಜಿಂಕೆ ಮಾಂಸವನ್ನು ಸ್ವಚ್ಛ ಮಾಡುತ್ತಿದ್ದು, ಅವರನ್ನು ಹಿಡಿಯಲು ಹೋದಾಗ ಆರೋಪಿಗಳಾದ ಮಹಮ್ಮದ್ ಆರೀಫ್ ಮತ್ತು ಸೈಯ್ಯದ್ ಓಡಿ ಹೋಗಿ ತಲೆ ಮರೆಸಿಕೊಂಡಿದ್ದಾರೆ. ಸೈಯ್ಯದ್ ಮನ್ಸೂರ್, ಅಜಿತ್, ಗಿರೀಶ್ ಅವರನ್ನು ಬಂಧಿಸಲಾಗಿದೆ ಎಂದು  ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳು ಮುತ್ತಿನಕೊಪ್ಪ ಭಾಗದವರಾಗಿದ್ದು, ಜಿಂಕೆ ಕೊಲ್ಲಲು ಬಳಸಿದ್ದ ನಾಡ ಬಂದೂಕು ಹಾಗೂ ಜಿಂಕೆ ಮಾಂಸವನ್ನು ವಶಪಡಿಸಿಕೊಳ್ಳಲಾಯಿತು. ಆರೋಪಿಗಳನ್ನು ಗುರುವಾರ ಚಿಕ್ಕಮಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಉಳಿದ ಇಬ್ಬರು ಆರೋಪಿಗಳಿಗಾಗಿ ಅರಣ್ಯ ಇಲಾಖೆಯವರು ಶೋಧ ನಡೆಸಿದ್ದಾರೆ.

ಕೊಪ್ಪ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್, ಸಹಾಯಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಾಬು ರಾಜೇಂದ್ರ ಪ್ರಸಾದ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನರಸಿಂಹರಾಜಪುರ ವಲಯ ಅರಣ್ಯಾಧಿಕಾರಿ ಪ್ರವೀಣ್ ನೇತೃತ್ವದಲ್ಲಿ ಉಪ ವಲಯ ಅರಣ್ಯಾಧಿಕಾರಿ ಅರುಣ ಬಾರಂಗಿ, ಗಸ್ತು ಅರಣ್ಯ ಪಾಲಕರಾದ ನವೀನ್ ಕುಮಾರ್, ಬಲರಾಮೇಗೌಡ, ರಾಘವೇಂದ್ರ ಹಾಗೂ ವಾಹನ ಚಾಲಕ ಸುದೀಪ್ ಭಾಗವಹಿಸಿದ್ದರು.

Deer meat seized – three accused arrested

Share

Leave a comment

Leave a Reply

Your email address will not be published. Required fields are marked *

Don't Miss

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಹಲವು ಅವಾಂತರಗಳು ಸೃಷ್ಟಿಯಾಗಿವೆ. ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಸುರಿಯುತ್ತಿರುವ ಮಳೆಗೆ ಹಲವು...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್ ಎಂಬುವವರ ಮನೆ ಮುಂದೆ ನಿಲ್ಲಿಸಲಾಗಿದ್ದ ಆಟೋರಿಕ್ಷಾ ಹಾಗೂ ಅವರ ಮನೆಯ ಮೇಲೆ ಬೃಹತ್ ಮರವೊಂದು...

Related Articles

ವೀರಶೈವ ಲಿಂಗಾಯತ ಸಮಾರಂಭದಲ್ಲಿ “ಕುರ್ಚಿ” ತಿಕ್ಕಾಟ ಹಲವು ಸ್ವಾಮಿಜೀಗಳ ವಿರೋದ

ಚಿಕ್ಕಮಗಳೂರು: ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಸ್ವಾಮಿಗಳ ಮಧ್ಯೆ ಕುರ್ಚಿಗಾಗಿ ಪ್ರತಿರೋಧ ಪ್ಯಕ್ತಪಡಿಸಿ ಹೊರ ನಡೆದ ಘಟನೆ...

ಕಡೂರು ತಾಲ್ಲೂಕಿನಲ್ಲಿ ಬರದ ಆತಂಕ

ಕಡೂರು: ಮುಂಗಾರು ಮಳೆಯ ಕೊರತೆಯಿಂದ ಕಡೂರು ತಾಲ್ಲೂಕಿನಲ್ಲಿ ಬರದ ಆತಂಕ ಎದುರಾಗಿದ್ದು, ಕುಡಿಯುವ ನೀರು, ಜಾನುವಾರುಗಳ...

ಜು.21ಕ್ಕೆ ಕೊಪ್ಪಳದಲ್ಲಿ ಬೃಹತ್ ರೈತ ಸಮಾವೇಶ

ಚಿಕ್ಕಮಗಳೂರು : ೪೬ನೇ ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಕೊಪ್ಪಳದಲ್ಲಿ ಬೃಹತ್ ರೈತ ಸಮಾವೇಶವನ್ನು ಜು.೨೧...

ಅಕ್ರಮವಾಗಿ ಸಾಗಿಸುತ್ತಿ ಕಾಡುಜಾತಿಯ ಮರಗಳ ದಿಮ್ಮಿಗಳ ವಶ

ಮೂಡಿಗೆರೆ: ಕಾಡುಜಾತಿಯ ಮರಗಳ ದಿಮ್ಮಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದುದನ್ನು ತಾಲ್ಲೂಕಿನ ಹಂಡುಗುಳಿ ಗ್ರಾಮದ ಸಮೀಪ ಅರಣ್ಯ ಇಲಾಖೆ...