Home namma chikmagalur chikamagalur ಮಾನನಷ್ಟ ಮೊಕದ್ದಮೆ – ಸಿ.ಟಿ. ರವಿ ಹೇಳಿಕೆ ದಾಖಲು
chikamagalurHomeLatest Newsnamma chikmagalur

ಮಾನನಷ್ಟ ಮೊಕದ್ದಮೆ – ಸಿ.ಟಿ. ರವಿ ಹೇಳಿಕೆ ದಾಖಲು

Share
Share

ಚಿಕ್ಕಮಗಳೂರು: ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಅವರು ತಮ್ಮ ವಿರುದ್ಧ ನೀಡಿದ್ದ ವಿವಾದಾತ್ಮಕ ಹೇಳಿಕೆಗಳನ್ನು ಪ್ರಶ್ನಿಸಿ ಬಿಜೆಪಿ ನಾಯಕ ಹಾಗೂ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಹೂಡಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ, ಇಂದು ಅವರು ನಗರದ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ.

2022ರಲ್ಲಿ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಅವರು ಸಿ.ಟಿ.ರವಿ ಅವರ ವಿರುದ್ಧ ‘ಅಕ್ರಮ ಆಸ್ತಿ’ ಮತ್ತು ‘ಲೂಟಿ ರವಿ’ ಎಂಬ ಪದಗಳನ್ನು ಬಳಸುವ ಮೂಲಕ ಗಂಭೀರ ಆರೋಪಗಳನ್ನು ಮಾಡಿದ್ದರು. ಈ ಹೇಳಿಕೆಗಳು ತಮ್ಮ ಘನತೆಗೆ ಕುಂದು ತಂದಿವೆ ಎಂದು ಆರೋಪಿಸಿ ಸಿ.ಟಿ. ರವಿ ಅವರು ಚಿಕ್ಕಮಗಳೂರಿನ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ನಗರದ 2ನೇ ಜೆಎಂಎಫ್‌ಸಿ (JMFC) ನ್ಯಾಯಾಲಯಕ್ಕೆ ಇಂದು ಭೇಟಿ ನೀಡಿದ ಸಿ.ಟಿ. ರವಿ, ನ್ಯಾಯಾಧೀಶರಾದ ಅನುರಾಧ ಹೆಚ್.ಟಿ. ಅವರ ಮುಂದೆ ದೂರುದಾರರ ಹೇಳಿಕೆಯನ್ನು ಅಧಿಕೃತವಾಗಿ ದಾಖಲಿಸಿದರು. ಕೆಪಿಸಿಸಿ ವಕ್ತಾರರ ವಿರುದ್ಧ ಕಾನೂನು ಹೋರಾಟ ಮುಂದುವರಿಸುವುದಾಗಿ ಈ ಸಂದರ್ಭದಲ್ಲಿ ಅವರು ಸ್ಪಷ್ಟಪಡಿಸಿದರು.

ದೂರುದಾರರ ಹೇಳಿಕೆ ದಾಖಲಿಸಿಕೊಂಡ ನ್ಯಾಯಾಲಯವು ಪ್ರಕರಣದ ಮುಂದಿನ ವಿಚಾರಣೆಯನ್ನು ಜೂನ್ 6ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

Defamation case – CT Ravi’s statement recorded

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....