Home namma chikmagalur chikamagalur ಪ.ಜಾತಿ-ಪ.ಪಂಗಡದವರ ದೌರ್ಜನ್ಯ ಪ್ರಕರಣದಲ್ಲಿ ಪರಿಹಾರ ವಿತರಣೆ ವಿಳಂಬ ಸಲ್ಲದು
chikamagalurHomeLatest Newsnamma chikmagalur

ಪ.ಜಾತಿ-ಪ.ಪಂಗಡದವರ ದೌರ್ಜನ್ಯ ಪ್ರಕರಣದಲ್ಲಿ ಪರಿಹಾರ ವಿತರಣೆ ವಿಳಂಬ ಸಲ್ಲದು

Share
Share

ಚಿಕ್ಕಮಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಅಧಿನಿಯಮ ಅನ್ವಯ ದಾಖಲಾದ ಪ್ರತಿಯೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಹಾರಧನ ನೀಡುವಲ್ಲಿ ಯಾವುದೇ ರೀತಿಯ ವಿಳಂಬ ಮಾಡಬಾರದು ಎಂದು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ಜಿಲ್ಲಾಮಟ್ಟದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ಅಧಿನಿಯಮ ಅನ್ವಯ ದಾಖಲಾದ ಪ್ರತಿಯೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಹಾರ ಧನ ಮಂಜೂರು ಮಾಡಬೇಕಾಗಿರುವ ಪ್ರಕರಣಗಳಿಗೆ ವಿಳಂಬ ಮಾಡದೆ ಕ್ರಮ ವಹಿಸಬೇಕು ಎಂದರು.

ನರಸಿಂಹರಾಜಪುರ ತಾಲ್ಲೂಕು ಬನ್ನೂರು ಗ್ರಾಮದ ಶೆಟ್ಟಿಹಿತ್ಲು ಸರ್ವೇ ನಂ.೮೯ ಮತ್ತು ೯೫ ರಲ್ಲಿ ಅರಣ್ಯ ಹಕ್ಕು ಕಾಯ್ದೆಯಡಿ ತಿರಸ್ಕೃತವಾದ ಅರ್ಜಿಗಳ ಪುನರ್ಪರಿಶೀಲನೆಗೆ ಸಂಬಂಧಿಸಿದಂತೆ ೧೦೦ ವರ್ಷಗಳಿಂದ ವಾಸವಾಗಿರುವ ಸುಮಾರು ೩೦ ಆದಿವಾಸಿ ಕುಟುಂಬಗಳಿಗೆ ಅರಣ್ಯ ಹಕ್ಕು ಕಾಯ್ದೆಯಡಿ ಸ್ವೀಕೃತವಾದ ಅರ್ಜಿಗಳ ಪೈಕಿ ೧೮ ಅರ್ಜಿಗಳಿಗೆ ಕಂದಾಯ ಭೂಮಿ ೨೦೦೫ರ ಪೂರ್ವದ ದಾಖಲಾತಿಗಳು ಇಲ್ಲದ ಕಾರಣ ಹಿಂಬರಹ ನೀಡಿದ್ದು, ೧೯ ಫಲಾನುಭವಿಗಳು ಮಾತ್ರ ಬಾಕಿ ಇರುತ್ತಾರೆ. ಈ ಫಲಾನುಭವಿಗಳು ಪ್ರಸ್ತುತ ದಾಖಲಾತಿ ಒದಗಿಸುತ್ತಿದ್ದು,

ಮುಂದಿನ ಗ್ರಾಮಸಭೆಯಲ್ಲಿ ಮಂಡಿಸಿ ಅರ್ಹರಿದ್ದಲ್ಲಿ ಪ್ರಸ್ತಾವನೆ ಸಲ್ಲಿಸುವುದಾಗಿ ಬನ್ನೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಿಳಿಸಿದ ಕಾರಣ, ಅಧ್ಯಕ್ಷರು ಮಾತನಾಡಿ, ತುರ್ತಾಗಿ ಸಭೆ ನಡೆಸಿ ಮುಂದಿನ ಕ್ರಮ ವಹಿಸಲು ಸಮಗ್ರ ಗಿರಿಜನ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಲಾಗಿತ್ತು. ಸಮಗ್ರ ಗಿರಿಜನ ಅಭಿವೃದ್ಧಿ ಅಧಿಕಾರಿಗಳು ಬನ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು ೪೭೯ ಅರ್ಜಿಗಳು ಪರಿಶೀಲನೆಯಾಗಬೇಕಾಗಿದ್ದು, ಈಗಾಗಲೇ ೧೭೩ ಅರ್ಜಿಗಳು ಪರಿಶೀಲನೆಯಾಗಿದ್ದು, ಇತರೆ ಜಮೀನು ಮಂಜೂರಾಗಿರುವ, ಜಮೀನು ಹೊಂದಿರುವ ೩೦೬ ಅರ್ಜಿಗಳು ಗ್ರಾಮಾಡಳಿತ ಅಧಿಕಾರಿಗಳು ಮಾಡಿಕೊಡಲು ಬಾಕಿ ಇದ್ದು, ಹಂತ ಹಂತವಾಗಿ ಆದ್ಯತೆಯ ಮೇರೆಗೆ ೩೦೬ ಅರ್ಜಿಗಳ ಮಹಜರು ಪೂರ್ಣಗೊಂಡ ನಂತರ ಗ್ರಾಮಸಭೆಯಲ್ಲಿ ಮಂಡಿಸಿ ವರದಿಯನ್ನು ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾಧಿಕಾರಿಗಳು ಮಾತನಾಡಿ, ಈಗಾಗಲೇ ನಿರ್ದೇಶನ ನೀಡಿದ್ದರೂ ಕ್ರಮ ವಹಿಸಿರುವುದಿಲ್ಲ. ಕೂಡಲೇ ಕ್ರಮ ವಹಿಸಬೇಕೆಂದು ಸೂಚಿಸಿ ಲಕ್ಯಾ ಹೋಬಳಿ ದಾಸರಹಳ್ಳಿ ಗ್ರಾಮದ ಸರ್ವೇ ನಂ೬೧ ರಲ್ಲಿ ೫ ಎಕರೆ ಸರ್ಕಾರಿ ಜಮೀನನ್ನು ಪರಿಶಿಷ್ಟ ಜಾತಿಯ ನಿವೇಶನ ರಹಿತರಿಗೆ ಹಂಚಲು ಜಮೀನನ್ನು ನೀಡುವಂತೆ ಕೋರಿರುವ ಮಾಹಿತಿಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ತಹಸೀಲ್ದಾರರು ಲಕ್ಯಾ ಹೋಬಳಿ ದಾಸರಹಳ್ಳಿ ಗ್ರಾಮದ ಸರ್ವೇ ನಂ. ೬೧ ರಲ್ಲಿ ಐದು ಎಕರೆ ಜಮೀನನ್ನು ಕಾಯ್ದಿರಿಸಿ ಈಗಾಗಲೇ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ಚಿಕ್ಕಮಗಳೂರು ತಹಸೀಲ್ದಾರರು ತಿಳಿಸಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

ಸಭೆಯಲ್ಲಿ ಪುರುರಾಜ್ ಸಿಂಗ್ ಸೋಲಂಕಿ, ನಗರಸಭೆ ಪೌರಾಯುಕ್ತ ಬಿ.ಸಿ.ಬಸವರಾಜು, ಎಲ್ಲಾ ತಾಲ್ಲೂಕುಗಳ ತಹಸೀಲ್ದಾರರು ಹಾಗೂ ಸಮಿತಿಯ ಸದಸ್ಯರುಗಳು ಹಾಜರಿದ್ದರು.

Delay in the distribution of compensation in cases of atrocities against SC/STs is unacceptable.

Share

Leave a comment

Leave a Reply

Your email address will not be published. Required fields are marked *

Don't Miss

ಲಕ್ಯಾ-ಸಖರಾಯಪಟ್ಟಣ ಹೋಬಳಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಇಂಧನ ಸಚಿವ ಮನವಿ

ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಯಾ ಹಾಗೂ ಸಖರಾಯಪಟ್ಟಣ ಹೋಬಳಿಗಳಲ್ಲಿ ರೈತರು ಎದುರಿಸುತ್ತಿರುವ ತೀವ್ರ ವಿದ್ಯುತ್ ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ.ಟಿ ಅವರು...

ಬಿರಂಜಿ ಹೊಳೆಯಿಂದ ರೈತಾಪಿ ವರ್ಗದ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು:  ಜಾವಣಿಗೆ ನಾಡಿನ ರೈತರ ಜಮೀನುಗಳಿಗೆ ನೀರು ಹರಿಸುವಲ್ಲಿ ವಿಫಲಗೊ ಂಡಿರುವ ಸರ್ಕಾರದ ಆಡಳಿತ ವ್ಯವಸ್ಥೆ ವಿರುದ್ಧ ಮಂಗಳವಾರ ರೈತ ಸಂಘ- ಹಸಿರುಸೇನೆ ತಾಲ್ಲೂಕು ಘಟ ಕ ಕರೆ ನೀಡಿದ್ಧ ಪ್ರತಿಭಟನೆಯಲ್ಲಿ...

Related Articles

ದೊಣ್ಣೆಯಿಂದ ಹಲ್ಲೆಯಾದ ಭಿಕ್ಷುಕನ ಸಾವು

ತರೀಕೆರೆ: ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದ ಸುಮಾರು 65 ವರ್ಷದ ವ್ಯಕ್ತಿಯೊಬ್ಬರನ್ನು ದೊಣ್ಣೆಯಿಂದ ಹೊಡೆದು, ಕಾಲಿನಿಂದ...

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು...

ಜ್ಞಾನೇಶ್ ಕುಮಾರ್ ವಜಾಗೊಳಿಸಿ ಬಂಧಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ

ಚಿಕ್ಕಮಗಳೂರು: ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಜೊತೆಗೆ ಬಿಜೆಪಿ...