Home namma chikmagalur chikamagalur ಬಿಜೆಪಿ ಶಾಸಕ ಯಶಪಾಲ್ ಸುವರ್ಣ ವಿರುದ್ಧ ಕ್ರಮಕ್ಕೆ ಒತ್ತಾಯ
chikamagalurHomeLatest Newsnamma chikmagalur

ಬಿಜೆಪಿ ಶಾಸಕ ಯಶಪಾಲ್ ಸುವರ್ಣ ವಿರುದ್ಧ ಕ್ರಮಕ್ಕೆ ಒತ್ತಾಯ

Share
Share

ಚಿಕ್ಕಮಗಳೂರು: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಯಶಪಾಲ್ ಸುವರ್ಣ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಪ್ರಮುಖರು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ನಿರೀಕ್ಷಕ ಅಭಯ ಪ್ರಕಾಶ ಸೋಮನಾಳ ಅವರಿಗೆ ದೂರು ನೀಡಿದರು.

ಯಶಪಾಲ್ ಸುವರ್ಣ ಅವರು ಉಡುಪಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡುವಾಗ, ರಾಹುಲ್ ಗಾಂಧಿ ಅವರನ್ನು ಡ್ರಗ್ ಅಡಿಕ್ಟ್ ಎಂದು ಸುಳ್ಳು ಅಪಪ್ರಚಾರ ಮಾಡಿ ಜನರಲ್ಲಿ ತಪ್ಪು ಭಾವನೆ ಬರುವಂತೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದಲ್ಲದೆ ಮುಸ್ಲಿಮರ ಬಾಬರಿ ಮಸೀದಿಯನ್ನು ಧ್ವಂಸ ಮಾಡಿ ಸಂಭ್ರಮಿಸಿದ್ದೇವೆ. ಈಗ ರಾಹುಲ್ ಗಾಂಧಿ ಅವರ ವಂಶವನ್ನು ಬಾಬರಿ ಮಸೀದಿ ಧ್ವಂಸ ಮಾಡಿದ ರೀತಿಯಲ್ಲೇ ಧ್ವಂಸ ಮಾಡುತ್ತೇವೆ ಎನ್ನುವ ಮೂಲಕ ಇಡೀ ಕುಟುಂಬಕ್ಕೆ ಬೆದರಿಕೆ ಒಡ್ಡಿದ್ದಾರೆ. ಈ ಮೂಲಕ ದೇಶದಲ್ಲಿ ಗಲಭೆಗೆ ಪ್ರಚೋದನೆ ನೀಡುವ ಕೆಲಸ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಧರ್ಮ ಧರ್ಮಗಳ ಮಧ್ಯೆ ಅಶಾಂತಿ ಸೃಷ್ಟಿ ಮಾಡಿ ಸಾರ್ವಜನಿಕರನ್ನು ಪ್ರಚೋದಿಸುವ ಜೊತೆಗೆ, ನೀಟ್ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳನ್ನು ಅವಾಚ್ಯ ಶಬ್ದಗಳಿಂದ ನಿಂಧಿಸಿದ್ದಾರೆ. ಹೀಗಾಗಿ ಯಶಪಾಲ್ ಸುವರ್ಣ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.

ದೂರು ಸಲ್ಲಿಸುವ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾ ಉಪಾಧ್ಯಕ್ಷ ಆರ್ ಚಂದ್ರು, ಪ್ರಮುಖರಾದ ಪ್ರವೀಣ್ ಬೆಟಗೆರೆ, ಹನೀಫ್ ಮತ್ತಿತರರಿದ್ದರು.

Demand for action against BJP MLA Yashpal Suvarna

 

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

Related Articles

ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ

ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...