Home namma chikmagalur chikamagalur ಅಪ್ರಾಪ್ತೆ ಕೊಲೆ ಆರೋಪಿ ವಿರುದ್ಧ ಕ್ರಮಕ್ಕೆ ಒತ್ತಾಯ
chikamagalurHomeLatest Newsnamma chikmagalur

ಅಪ್ರಾಪ್ತೆ ಕೊಲೆ ಆರೋಪಿ ವಿರುದ್ಧ ಕ್ರಮಕ್ಕೆ ಒತ್ತಾಯ

Share
Share

ಚಿಕ್ಕಮಗಳೂರು: ಬೀದರ್ ಜಿಲ್ಲೆಯ ಬೆಳಕುಣಿ ಗ್ರಾಮದ ದಲಿತ ಸಮುದಾಯದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಮುಖಂಡರು ಎಡಿಸಿ ನಂಜುಂಡೇಗೌಡ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ಕೊಲೆಯಾಗಿರುವ ಅಪ್ರಾಪ್ತ ಬಾಲಕಿ ಕುಸ್ತಿ ಮತ್ತು ಕಬಡ್ಡಿ ಕ್ರೀಡಾಪಟುವಾಗಿದ್ದು, ಆಕೆಯ ಕುಸ್ತಿ ತರಬೇತುದಾರನಾದ ಲಖನ್ ಬಬ್ರು ಪವಾರ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಕೊಲೆ‌ ಮಾಡಿದ್ದಾನೆ. ಕೂಡಲೇ ಆರೋಪಿಯನ್ನು ಪೊಲೀಸರು ಎನ್ಕೌಂಟರ್ ಮಾಡಬೇಕು ಜೊತೆಗೆ ಸಂತ್ರಸ್ತ ಕುಟುಂಬಕ್ಕೆ ಸೂಕ್ತ ಭದ್ರತೆ ಹಾಗೂ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ನೊಂದ ಕುಟುಂಬಕ್ಕೆ ಸರ್ಕಾರ ಕನಿಷ್ಠ 5 ಎಕರೆ ಜಮೀನು ಮಂಜೂರು ಮಾಡಬೇಕು. ಅಲ್ಲದೆ ಕುಟುಂಬದ ಓರ್ವ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಬೇಕು. ಲಖನ್ ಬಬ್ರು ಪವಾರ್ ಗೆ ಆಶ್ರಯ ನೀಡಿದವರ ಮೇಲೆಯೂ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಡಿಎಸ್ಎಸ್ ಮುಖಂಡರಾದ ಎಂ.ವಿ.ಭವಾನಿ, ಭೀಮಯ್ಯ, ತರಿಕೆರೆ ವೆಂಕಟೇಶ್, ಯು.ಸಿ.ರಮೇಶ್, ಜಗದೀಶ್, ಶಿವಕುಮಾರ್ ಮತ್ತಿತರರಿದ್ದರು.

Demand for action against juvenile murder accused

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...