Home namma chikmagalur ಹೆಚ್ಚು ಕಾಲ ವಾಹನ ನಿಲುಗಡೆ ವಿರುದ್ಧ ಕ್ರಮಕ್ಕೆ ಆಗ್ರಹ
namma chikmagalurchikamagalurHomeLatest News

ಹೆಚ್ಚು ಕಾಲ ವಾಹನ ನಿಲುಗಡೆ ವಿರುದ್ಧ ಕ್ರಮಕ್ಕೆ ಆಗ್ರಹ

Share
Share

ಚಿಕ್ಕಮಗಳೂರು:  ನಗರದ ರಸ್ತೆಗಳಲ್ಲಿ ನಿಗದಿತ ಅವಧಿಗಿಂತ ಹೆಚ್ಚು ಕಾಲ ವಾಹನಗಳನ್ನು ನಿಲುಗಡೆ ಮಾಡುತ್ತಿರುವ ಕ್ರಮಕ್ಕೆ ಕಡಿವಾಣ ಹಾಕುವಂತೆ ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆ ನಗರಸಭೆಯನ್ನು ಒತ್ತಾಯಿಸಿದೆ.

ಸಂಘಟನೆಯ ರಾಜ್ಯಾಧ್ಯಕ್ಷ ಸೋಮು ನಾಯಕ್ ಅವರ ನೇತೃತ್ವದಲ್ಲಿ ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್ ಮತ್ತು ಉಪಾಧ್ಯಕ್ಷೆ ಲಲಿತಾ ರವಿನಾಯ್ಕ್ ಅವರನ್ನು ಶನಿವಾರ ಭೇಟಿ ಮಾಡಿದ ಪದಾಧಿಕಾರಿಗಳು ಈ ಸಂಬಂಧ ಮನವಿ ಸಲ್ಲಿಸಿದರು.

ಇತ್ತೀಚಿನ ವರ್ಷಗಳಲ್ಲಿ ದಿನೇ ದಿನೇ ಜಿಲ್ಲೆಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದ್ದು ನಗರದ ರಸ್ತೆಗಳು ಸದಾಕಾಲ ಪ್ರವಾಸಿಗರ ವಾಹನಗಳಿಂದ ತುಂಬಿರುತ್ತವೆ, ಇದರ ನಡುವೆ ಆ ರಸ್ತೆಗಳ ಕೆಲ ಸ್ಥಳೀಯರು ತಮ್ಮ ವಾಹನಗಳನ್ನು ರಸ್ತೆ ಬದಿಯಲ್ಲಿ ಖಾಯಂ ಆಗಿ ನಿಲ್ಲಿಸುವುದರಿಂದ ಉಳಿದ ವಾಹನಗಳಿಗೆ ನಿಲುಗಡೆಗೆ ಸ್ಥಳ ಸಿಗದೇ ಪರದಾಡುವಂತಾಗಿದೆ ಎಂದು ಆರೋಪಿಸಿದರು.

ಸ್ಥಳೀಯರು ತಮ್ಮ ವಾಹನಗಳನ್ನು ತಮ್ಮ ಖಾಸಗೀ ಜಾಗದಲ್ಲಿ ನಿಲ್ಲಿಸಿದರೆ ನಗರದ ಮುಖ್ಯ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಹಾಗೂ ನಿಲುಗಡೆಗೆ ಸ್ಥಳ ದೊರೆಯುತ್ತದೆ ಎಂದ ಪದಾಧಿಕಾರಿಗಳು ಈ ಹಿನ್ನೆಲೆಯಲ್ಲಿ ಯಾವುದೇ ವ್ಯಕ್ತಿ ಏಳು ದಿನಗಳ ಕಾಲ ರಸ್ತೆಯಲ್ಲಿ ವಾಹನವನ್ನು ನಿಲ್ಲಿಸಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಆಗ್ರಹಿಸಿದರು.

ನಗರದ ರಸ್ತೆ ಬದಿಗಳಲ್ಲಿ ಮತ್ತು ಪಾದಾಚಾರಿಗಳಿಗೆ ಮೀಸಲಿಟ್ಟ ರಸ್ತೆಗಳ ಮೇಲೆ ವ್ಯಾಪಾರಿಗಳು ವ್ಯಾಪಾರ ಮಾಡುತ್ತಿರುವುದನ್ನು ತಡೆಗಟ್ಟುವಂತೆ ಒತ್ತಾಯಿಸಿದರು. ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆಯ ಪದಾಧಿಕಾರಿಗಳಾದ ಒ ಆ ಓ ಭಾಷಾ, ಮಾಕೇನಹಳ್ಳಿಸುಕೇಶ್, ಖಲಂದರ್, ರೂಪೇಶ್ ಹಾಜರಿದ್ದರು.

Demand for action against long-term parking

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...