Home namma chikmagalur chikamagalur ಪರಿಶಿಷ್ಠ ಪಂಗಡ ಒಳ ಮೀಸಲಾತಿ ಆಯೋಗ ರಚನೆ ಆಗ್ರಹ
chikamagalurHomeLatest Newsnamma chikmagalur

ಪರಿಶಿಷ್ಠ ಪಂಗಡ ಒಳ ಮೀಸಲಾತಿ ಆಯೋಗ ರಚನೆ ಆಗ್ರಹ

Share
Oplus_153223168
Share

ಚಿಕ್ಕಮಗಳೂರು: ರಾಜ್ಯದ ಪರಿಶಿಷ್ಠ ಜಾತಿ ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸಿದಂತೆ ಪರಿಶಿಷ್ಠ ಪಂಗಡದ ಸಮುದಾಯಕ್ಕೂ ಒಳ ಮೀಸಲಾತಿ ಕಲ್ಪಿಸಲು ಪರಿಶಿಷ್ಠ ಪಂಗಡ ಒಳ ಮೀಸಲಾತಿ ಆಯೋಗ ರಚನೆ ಮಾಡಬೇಕೆಂದು ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್‌ನ ಜಂಟಿ ಕಾರ್ಯದರ್ಶಿ ಶ್ರೀನಿವಾಸಗೌಡ್ಲು ಆಗ್ರಹಿಸಿದ್ದಾರೆ.

ಶುಕ್ರವಾರ ಜಿಲ್ಲಾಧಿಕಾರಿ ನಾಗರಾಜ್‌ ಅವರಿಗೆ ಮನವಿ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಅವರು, 49 ಮೂಲ ಬುಡಕಟ್ಟು ಸಮುದಾಯಕ್ಕೆ ರಾಜ್ಯ ಸರ್ಕಾರವು 2026-27ನೇ ಸಾಲಿನ ಬಜೆಟ್‌ನಲ್ಲಿ ವಿಶೇಷ ಅನುದಾನ ಕಲ್ಪಿಸಬೇಕು.

ಬುಡಕಟ್ಟು ಸಮುದಾಯದಲ್ಲಿ ಸಾಕಷ್ಟು ಪ್ರಬಲ ಸಮುದಾಯಗಳಿ, ಆ ಸಮುದಾಯಗಳು ಸಾಮಾಜಿಕ, ಆರ್ಥಿಕ ರಾಜಕೀಯವಾಗಿ ಸ್ಥಾನಮಾನ ಪಡೆದುಕೊಂಡಿದ್ದು, ಅತಿ ಕಡಿಮೆ ಇರುವ ಸಮುದಾಯಗಳಿಗೆ ಯಾವುದೇ ಸೌಲಭ್ಯ ದೊರೆಯುತ್ತಿಲ್ಲ. ಹೀಗಾಗಿ, ಪರಿಶಿಷ್ಠ ಜಾತಿಗಳಿಗೆ ಕಲ್ಪಿಸಿದಂತೆ ಪರಿಶಿಷ್ಠ ಪಂಗಡದ ಸಮುದಾಯಗಳಿಗೂ ಒಳ ಮೀಸಲಾತಿ ಕಲ್ಪಿಸುವುದಕ್ಕೆ ಪ್ರತ್ಯೇಕ ಆಯೋಗ ರಚನೆ ಮಾಡಬೇಕು ಎಂದು ಆಗ್ರಹಿಸಿದರು.

ಇನ್ನು ಬುಡಕಟ್ಟ ಸಮುದಾಯ ಹೆಚ್ಚಿಸುವ ಪಶ್ಚಿಮಘಟ್ಟದ ಜಿಲ್ಲೆಯಲ್ಲಿ ಬುಡಕಟ್ಟು ವಿಶ್ವವಿದ್ಯಾಲಯ ಸ್ಥಾಪಿಸಬೇಕು. ಕರ್ನಾಟಕ ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ಸರ್ಕಾರವು ನೀಡುವ ಸೌಲಭ್ಯಗಳ ಭೌತಿಕ ಗುರಿ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಸಮುದಾಯದ ಮುಖಂಡ ಪಿ.ರಾಜೇಶ್‌ ಮಾತನಾಡಿ, ಅಂಬೇಡ್ಕರ್‌ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದಡಿ ನೀಡುವ ಸೌಲಭ್ಯಗಳು ಕೆಲವರಿಗೆ ಸೀಮಿತವಾಗಿವೆ. ಹತ್ತಾರು ವರ್ಷದಿಂದ ಅವರಿಗೆ ಮಾತ್ರ ಸೌಲಭ್ಯಗಳು ದೊರೆಯುತ್ತಿವೆ. ಈ ಸೌಲಭ್ಯಗಳಿಗೆ ಅರ್ಜಿ ಸಲ್ಲಿಸಿಯಿಂದ ಮಂಜೂರು ಮಾಡಿಸುವುದಕ್ಕೆ ದಲ್ಲಾಳಿಗಳು ಸೃಷ್ಟಿಯಾಗಿದ್ದಾರೆ. ಜಿಲ್ಲಾಡಳಿತ ಹಾಗೂ ಸಮಾಜಕಲ್ಯಾಣ ಇಲಾಖೆಯ ಅಧಿಕಾರಿಗಳು ದಲ್ಲಾಳಿಗಳಿಗೆ ಕಡಿವಾಣ ಹಾಕಿ ನಿಜವಾದ ಫಲಾನುಭವಿಗಳ ಆಯ್ಕೆ ಮಾಡಬೇಕು ಎಂದು ಆಗ್ರಹಿಸಿದರು.

ಈ ವೇಳೆ ಜಿಲ್ಲಾ ಕಾರ್ಯದರ್ಶಿ ಮಡೆನೆರಳು ಶಂಕರ್‌, ಸಹ ಕಾರ್ಯದರ್ಶಿ ರಮೇಶ್‌, ಹಕ್ಕಿ-ಪಿಕ್ಕಿ ಮುಖಂಡ ದಿವಾಕರ್‌ ಮೊದಲಾದವರಿದ್ದರು.

Demand for formation of Scheduled Caste Internal Reservation Commission

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...