Home Latest News ಆರೋಗ್ಯ ವಿಮೆ- ಭವಿಷ್ಯ ನಿಧಿ ಸೌಲಭ್ಯ ನೀಡುವಂತೆ ಒತ್ತಾಯ
Latest NewschikamagalurHomenamma chikmagalur

ಆರೋಗ್ಯ ವಿಮೆ- ಭವಿಷ್ಯ ನಿಧಿ ಸೌಲಭ್ಯ ನೀಡುವಂತೆ ಒತ್ತಾಯ

Share
Share

ತರೀಕೆರೆ: ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತರೀಕೆರೆ, ಅಜ್ಜಂಪುರ ತಾಲ್ಲೂಕಿನ ಪರವಾನಗಿ ಭೂಮಾಪಕರ ಸಂಘದ ಪದಾಧಿಕಾರಿಗಳು ಭೂದಾಖಲೆಗಳ ಸಹಾಯಕ ನಿರ್ದೇಶಕ ಮಂಜುನಾಥ್‌ ಸಿಂಗ್ ಅವರಿಗೆ ಮನವಿ ಸಲ್ಲಿಸಿದರು.

ಸರ್ಕಾರಿ ಭೂಮಾಪಕರಿಗೂ, ಪರವಾನಗಿ ಭೂಮಾಪಕರಿಗೂ ವೇತನದಲ್ಲಿ ಬಹಳ ತಾರತಮ್ಯವಿದೆ. ದರ್ಖಾಸ್ತು, ಕೆರೆ, ದೇವಸ್ಥಾನ, ಕೋರ್ಟ್ ಪ್ರಕರಣ ಇತ್ಯಾದಿ ಅಳತೆ ಕೆಲಸಗಳನ್ನು ಪರವಾನಗಿ ಭೂಮಾಪಕರು ನಿರ್ವಹಿಸುತ್ತಿದ್ದಾರೆ. ಆಕಾರ್‌ಬಂದು ಗಣಕೀಕರಣ, ನಕ್ಷಾ ಯೋಜನೆ ಸೇರಿದಂತೆ ವಿವಿಧ ರೀತಿಯಲ್ಲಿ ಭೂಮಾಪನ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ನಮಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುತ್ತಿಲ್ಲ. ಕನಿಷ್ಠ ಸವಲತ್ತುಗಳಿಂದಲೂ ವಂಚಿತರಾಗಿದ್ದೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಅಳತೆ ಕೆಲಸಕ್ಕೆ, ನೋಟಿಸ್ ಮಾಡುವುದಕ್ಕೆ ಅಗತ್ಯವಿರುವ ಬಾಂದು ಜವಾನರನ್ನು ನೀಡಿರುವುದಿಲ್ಲ. ಆದರೆ ಸಂಬಳ ನಿಗದಿ ಮಾಡಿರುವುದಿಲ್ಲ. ಆರೋಗ್ಯ ವಿಮೆ, ಭವಿಷ್ಯ ನಿಧಿ ಸೌಲಭ್ಯ ನೀಡಬೇಕು. ತಾಂತ್ರಿಕ ದೋಷಗಳಿಂದ ಆಗುವ ಸಮಸ್ಯೆಗಳಿಗೆ ಮೇಲಧಿಕಾರಿಗಳಿಂದ ನೋಟಿಸ್ ಪಡೆದುಕೊಳ್ಳುವ ಪರಿಸ್ಥಿತಿ ಎದುರಾಗುತ್ತಿದೆ. ಸರ್ಕಾರಿ ಭೂಮಾಪಕರಿಗೆ ನೀಡುವ ವೇತನ ಮತ್ತಿತರೆ ಸೌಲಭ್ಯಗಳನ್ನು ನಮಗೂ ಒದಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಭೂದಾಖಲೆಗಳ ಕಚೇರಿ ಅಧೀಕ್ಷಕ ಮಹೇಶ್, ಪರವಾನಗಿ ಭೂಮಾಪಕರ ಸಂಘದ ಅಧ್ಯಕ್ಷ ಮಂಜುನಾಥ್, ಶ್ರೀನಿವಾಸ್, ದರ್ಶನ್ ಜೊತೆಗಿದ್ದರು.

Demand for health insurance-provident fund facility

Share

Leave a comment

Leave a Reply

Your email address will not be published. Required fields are marked *

Don't Miss

ಪೊಲೀಸರ ದಾಳಿಗೆ ಹೆದರಿ ಓಡುವಾಗ ಜಾರಿ ಬಿದ್ದು ಯವಕ ಸಾವು

ಚಿಕ್ಕಮಗಳೂರು: ಪೊಲೀಸರ ದಾಳಿಗೆ ಹೆದರಿ ಓಡುವಾಗ ಜಾರಿ ಬಿದ್ದು ತಲೆ ಬಂಡೆಗೆ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ದುರಂತ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ನಡೆದಿದೆ. ಎನ್.ಆರ್.ಪುರ ತಾಲೂಕಿನ ಗುಡ್ಡೆಕೊಪ್ಪ ಗ್ರಾಮದ...

ಮನ್ ಕಿ ಬಾತ್‌ನಲ್ಲಿ ಚಿಕ್ಕಮಗಳೂರು ರೈತರ ಕೃಷಿ ವೈವಿಧ್ಯತೆಗೆ ಪ್ರಧಾನಿ ಮೋದಿ ಮೆಚ್ಚುಗೆ

ಚಿಕ್ಕಮಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ 137ನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರಿನ ರೈತರ ಕೃಷಿ ವೈವಿಧ್ಯತೆ ಹಾಗೂ ನಾವೀನ್ಯತೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಚಿಕ್ಕಮಗಳೂರಿನ ಕಾಫಿ ಬೆಳೆಗಾರರು ಸಾಂಪ್ರದಾಯಿಕ ಕಾಫಿ...

Related Articles

ನೂತನ ಪಶ್ಚಿಮ ವಲಯ ಡಿಐಜಿ ಆರ್. ಚೇತನ್ ಭೇಟಿ

ಚಿಕ್ಕಮಗಳೂರು: ನೂತನ ಪಶ್ಚಿಮ ವಲಯದ ಪೊಲೀಸ್ ಉಪ ಮಹಾ ನಿರೀಕ್ಷಕರಾಗಿ (ಡಿಐಜಿ) ಅಧಿಕಾರ ವಹಿಸಿಕೊಂಡಿರುವ ಆರ್....

ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತ

ಚಿಕ್ಕಮಗಳೂರು: ಹಾಫ್ ಹೆಲ್ಮೆಟ್ ಹಾಕುವವರೇ ಎಚ್ಚರ.. ಎಚ್ಚರ.. ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ...

ಕರ್ವಾಲೊ ಚಿತ್ರಕಲಾ ಸ್ಪರ್ಧೆಯಲ್ಲಿ ಹರ್ಷ ಕಾವೇರಿಪುರ ಪ್ರಥಮ

ಕೊಟ್ಟಿಗೆಹಾರ: ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಿಂದ ತೇಜಸ್ವಿ ಅವರ ೮೮ನೇ ಹುಟ್ಟುಹಬ್ಬದ ಪ್ರಯುಕ್ತ ಆಯೋಜಿಸಿದ್ದ ಕರ್ವಾಲೊ ಕೃತಿ...

₹1,281.80 ಕೋಟಿ ರೂ. ವೆಚ್ಚದ ನೀರಾವರಿ ಯೋಜನೆ ತ್ವರಿತವಾಗಿ ಪೂರ್ಣಗೊಳಿಸಿ

ಚಿಕ್ಕಮಗಳೂರು: ಜಿಲ್ಲೆಯ ಬಯಲುಸೀಮೆ ಭಾಗದ ರೈತರ ಬಹುದಿನಗಳ ನಿರೀಕ್ಷೆಯಾಗಿರುವ ₹1,281.80 ಕೋಟಿ ಅಂದಾಜು ವೆಚ್ಚದ ಮಹತ್ವಾಕಾಂಕ್ಷಿ...