Home namma chikmagalur ಜಾತಿ ಗಣತಿಯಲ್ಲಿ ನೇಕಾರ ಸಮುದಾಯಕ್ಕೆ ನ್ಯಾಯ ಒದಗಿಸಲು ಆಗ್ರಹ
namma chikmagalurchikamagalurHomeLatest News

ಜಾತಿ ಗಣತಿಯಲ್ಲಿ ನೇಕಾರ ಸಮುದಾಯಕ್ಕೆ ನ್ಯಾಯ ಒದಗಿಸಲು ಆಗ್ರಹ

Share
Share

ಚಿಕ್ಕಮಗಳೂರು:  ರಾಜ್ಯದ ೩೧ ಜಿಲ್ಲೆಯಲ್ಲಿ ನೇಕಾರ ಸಮುದಾಯದ ಜನಸಂಖ್ಯೆಯನ್ನು ದಾಖಲಿಸುವಲ್ಲಿ ಆಯೋಗವು ಕೈಗೊಂಡಿರುವ ಕ್ರಮ ಅವೈಜ್ಞಾನಿಕವಾಗಿದ್ದು, ೫೦ ಲಕ್ಷ ಜನಸಂಖ್ಯೆಯುಳ್ಳ ಸಮುದಾಯಕ್ಕೆ ಕೇವಲ ೯೨೮೦೦೦ ಸದಸ್ಯರನ್ನು ಘೋಷಣೆ ಮಾಡಿದ್ದಾರೆ ಎಂದು ರಾಜ್ಯ ನೇಕಾರರ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಬಿ.ಎಸ್. ಸೋಮಶೇಖರ್ ಆರೋಪಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ೨೦೧೪ ರ ಜಾತಿಗಣತಿಯನ್ನು ವಿರೋಧಿಸಿದ ಅವರು, ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿನ ಅಂಕಿಅಂಶಗಳು ಸಮುದಾಯಕ್ಕೆ ದೊಡ್ಡ ಆಘಾತ ನೀಡಿದೆ ಎಂದರು.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ಸಿದ್ದಪಡಿಸಿ ರಾಜ್ಯಸರ್ಕಾರಕ್ಕೆ ಸಲ್ಲಿಸಿರುವ ಜಾತಿಗಣತಿ ವರದಿಯನ್ನು ಸ್ವಾಗತಿಸುವುದಾಗಿ ಹೇಳಿದರು.

ಈ ಸಂಬಂಧ ನೇಕಾರ ಸಮುದಾಯಗಳ ಮಠಾಧೀಶರು, ರಾಜಕೀಯ ಮುಖಂಡರು, ಸಮಾಜದ ಗಣ್ಯರು ಸಭೆಗಳನ್ನು ನಡೆಸಿ, ಮರು ಸಮೀಕ್ಷೆ ನಡೆಸುವಂತೆ ನಿರ್ಣಯ ಕೈಗೊಂಡು ಇದರಲ್ಲಿ ಸಮುದಾಯಕ್ಕೆ ನ್ಯಾಯ ದೊರಕಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.
ಹಿಂದುಳಿದ ವರ್ಗಕ್ಕೆ ಸೇರಿದ ನೇಕಾರ ಸಮುದಾಯದ ನಿಖರ ಜನಸಂಖ್ಯೆಯನ್ನು ಸರ್ಕಾರದ ಗಮನಕ್ಕೆ ತರುವಲ್ಲಿ ತನ್ನದೇ ಆದ ಆಪ್‌ನ್ನು ಸಿದ್ದಪಡಿಸಿದೆ. ಈ ಮೂಲಕ ರಾಜ್ಯದಲ್ಲಿರುವ ನೇಕಾರರು ತಮ್ಮ ಕುಟುಂಬ ಸದಸ್ಯರುಗಳ ಅಗತ್ಯ ಮಾಹಿತಿಯನ್ನು ಒದಗಿಸುವಂತೆ ಮಾಹಿತಿ ನೀಡಬೇಕೆಂದು ಮನವಿ ಮಾಡಿದರು.

ಒಕ್ಕೂಟವು ರಾಜ್ಯಾದ್ಯಂತ, ಜಿಲ್ಲಾವಾರ, ಎಲ್ಲಾ ೨೨೪ ವಿಧಾನಸಭಾ ಕ್ಷೇತ್ರಗಳಲ್ಲಿ ನೇಕಾರ ಸಮುದಾಯದ ಜಾತಿಗಣತಿ ಸಮೀಕ್ಷೆಯನ್ನು ನಡೆಸಲಿದ್ದು, ಸ್ಥಳೀಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಮೂಲಕ ನೇಕಾರರನ್ನು ಸಂಪರ್ಕಿಸಿ ಕುಟುಂಬ ಸದಸ್ಯರುಗಳ ಅಂಕಿಅಂಶಗಳನ್ನು ಸಂಗ್ರಹಿಸಿ ಆಪ್‌ನಲ್ಲಿ ದಾಖಲಿಸಲಾಗುವುದು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಹೆಚ್.ಎಂ. ನಾರಾಯಣ್, ಉಪಾಧ್ಯಕ್ಷ ಜಗದೀಶ್, ವಿನೋದ್ ಬೊಗಸೆ, ಶಿವರಾಮ್, ಇಂದುಕುಮಾರ್, ಪುಷ್ಪರಾಜೇಂದ್ರ, ಹೇಮಲತಾ, ತನೂಜಶಿವಶಂಕರ್, ಶಿವಪ್ಪಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Demand for justice for the weaver community in the caste census

Share

Leave a comment

Leave a Reply

Your email address will not be published. Required fields are marked *

Don't Miss

ಭದ್ರಾ ಹುಲಿ ಸಂರಕ್ಷಿತ ಸಿಬ್ಬಂದಿಗಳಿಂದಲೇ ಮದ್ಯಪಾನ ಮೋಜು ಮಸ್ತಿ

ಚಿಕ್ಕಮಗಳೂರು: ಭದ್ರಾ ಹುಲಿ ಸಂರಕ್ಷಿತ ವ್ಯಾಪ್ತಿಯ ತಣಿಗೆಬೈಲು ವಲಯದ, ವಿರೂಪಾಕ್ಷ ಖಾನ್ ಚೆಕ್ ಪೋಸ್ಟ್ ನಲ್ಲಿ ಸಿಬ್ಬಂದಿಗಳು ಆಗಲು ರಾತ್ರಿ ಎನ್ನದೆ ಮದ್ಯಪಾನ ಮಾಡಿ ಮೋಜು ಮಸ್ತಿಯಲ್ಲಿ ತೊಡಗಿರುವುದು ಕಂಡುಬಂದಿದೆ , ಚೆಕ್...

ತೋಟಕ್ಕೆ ನೀರು ಬಿಡಲು ಹೋದ ಯುವತಿ ಅಪಹರಣ

ಅಜ್ಜಂಪುರ : ಯುವತಿಯೊಬ್ಬಳನ್ನು ಕಾರಿನಲ್ಲಿ ಬಲವಂತವಾಗಿ ಅಪಹರಿಸಿಕೊಂಡು ಹೋಗಿರುವ ಗಂಭೀರ ಆರೋಪ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯ ತ್ಯಾಗದಕಟ್ಟೆ ಗ್ರಾಮದಲ್ಲಿ ಕೇಳಿ ಬಂದಿದೆ. ಬೈರಪ್ಪ ಎಂಬುವವರ ಮಗಳು ಗಾಯತ್ರಿ...

Related Articles

ಮೇಡಿಕಲ್ ಅಂಗಡಿಯಲ್ಲಿ ನಗದು ಕಳವು ಆರೋಪಿ ಬಂದನ

ಶೃಂಗೇರಿ: ಪಟ್ಟಣದ ಭಾರತೀ ಬೀದಿಯಲ್ಲಿರುವ ಭಗವಾನ್ ಮೇಡಿಕಲ್ ಅಂಗಡಿಯಲ್ಲಿ ಜು.೭ರಂದು ಬೀಗ ಒಡೆದು ಬಾಗಿಲು ತೆರೆದು...

ನೀಟ್ ವಿದ್ಯಾರ್ಥಿಗಳ ಹಲ್ಲೆ ಖಂಡಿಸಿ ಸಿಪಿಐನಿಂದ ಪ್ರತಿಭಟನೆ

ಚಿಕ್ಕಮಗಳೂರು:  ನೀಟ್ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ ಸಿಪಿಐ ತಾಲ್ಲೂಕು...

ಮಳೆಗಾಗಿ ಅಯ್ಯನಕೆರೆ, ಮದಗದಕೆರೆ ತಪ್ಪಲಿನಲ್ಲಿ ವಿಶೇಷ ಪೂಜೆ

ಚಿಕ್ಕಮಗಳೂರು: ಮಳೆ ಕೊರತೆಯಿಂದ ಆತಂಕಗೊಂಡಿರುವ ಕಡೂರು ತಾಲೂಕಿನ ಅಯ್ಯನಕೆರೆ ಹಾಗೂ ಮದಗದಕೆರೆ ತಪ್ಪಲಿನ ಗ್ರಾಮಸ್ಥರು ಉತ್ತಮ...

ತೆಂಗಿನಕಾಯಿ ಕದ್ದ ಆರೋಪ: ಮಹಿಳೆ ಮೇಲೆ ಮೂವರಿಂದ ಹಲ್ಲೆ

ಕಡೂರು: ತೆಂಗಿನಕಾಯಿ ಕದ್ದ ಆರೋಪದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರ ಮೇಲೆ ಮೂವರು ಪುರುಷರು ಹಲ್ಲೆ ನಡೆಸಿದ ಘಟನೆ...