Home namma chikmagalur chikamagalur ಕಲ್ಲು ತೂರಾಟ ಪ್ರಕರಣದ ಎಸ್.ಐ.ಟಿ ತನಿಖೆಗೆ ಆಗ್ರಹ
chikamagalurHomeLatest Newsnamma chikmagalur

ಕಲ್ಲು ತೂರಾಟ ಪ್ರಕರಣದ ಎಸ್.ಐ.ಟಿ ತನಿಖೆಗೆ ಆಗ್ರಹ

Share
??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
Share

ಚಿಕ್ಕಮಗಳೂರು: ಕಾಫಿನಾಡಿನ ವಿಜಯಪುರ ಬಡಾವಣೆಯ ಹಿಂದೂ ಮನೆಯೊಂದರ ಮೇಲೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಗೌಸ್ ಮುನೀರ್ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಘಟನೆಯ ಹಿಂದೆ ಕಣ್ಣಿಗೆ ಕಾಣದ ಶಕ್ತಿಗಳು ಕೆಲಸ ಮಾಡುತ್ತಿವೆ ಎಂದು ದೂರಿದ್ದಾರೆ.

ಪೊಲೀಸರು ಭಜರಂಗದಳದಂತಹ ಸಂಘಟನೆಗಳಿಗೆ ಹೆದರುತ್ತಿರುವುದು ಈ ಪ್ರಕರಣದಲ್ಲಿ ಎದ್ದು ಕಾಣುತ್ತಿದ್ದು, ಈ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸರು ತನಿಖೆ ನಡೆಸುವ ಬದಲು ಪ್ರಕರಣವನ್ನು ಕೂಡಲೇ ಎಸ್‌ಐಟಿಗೆ ಒಪ್ಪಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ನೈಜತೆಯನ್ನು ಬಹಿರಂಗಪಡಿಸಬೇಕಿತ್ತು ಎಂದು ಅಭಿಪ್ರಾಯಪಟ್ಟಿರುವ ಅವರು, ಸಿ.ಟಿ. ರವಿ ಅವರು ಮುಸ್ಲಿಮರನ್ನು ಗುರಿಯಾಗಿಸಿ ಹೇಳಿಕೆ ನೀಡುವ ಮೂಲಕ ಪ್ರತಿಭಟನೆಗಳನ್ನು ಪ್ರಚೋದಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಮುಂದುವರಿದು ಮಾತನಾಡಿದ ಅವರು, ಮುಸ್ಲಿಂ ಸಮುದಾಯದ ಮತಗಳನ್ನು ಪಡೆದು ಆಯ್ಕೆಯಾದ ಶಾಸಕರು ಈಗ ಸಮುದಾಯದ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರು ಶಾಸಕ ತಮ್ಮಯ್ಯ ಅವರು ಇಂತಹ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಪರವಾಗಿ ನಿಲ್ಲಬೇಕಿತ್ತು,

ಆದರೆ ಶಾಸಕರು ಕುಟುಂಬದೊಂದಿಗೆ ಪ್ರವಾಸದಲ್ಲಿದ್ದರೆ ಇತ್ತ ಮುಸ್ಲಿಂ ಕುಟುಂಬಗಳು ಜೈಲು ಪಾಲಾಗಿ ಕಣ್ಣೀರು ಹಾಕುತ್ತಿವೆ ಎಂದು ಕಿಡಿಕಾರಿದ್ದಾರೆ. ಗೃಹ ಸಚಿವ ಪರಮೇಶ್ವ‌ರ್ ಅವರು ಅಧಿಕಾರಿಗಳಿಂದ ತಪ್ಪು ಮಾಹಿತಿ ಪಡೆಯುತ್ತಿದ್ದು, ತಮಗೆ ಏನೂ ತಿಳಿದಿಲ್ಲ ಎಂಬಂತೆ ವರ್ತಿಸುತ್ತಿದ್ದಾರೆ.

ಹೀಗಾಗಿ ತಪ್ಪು ಮಾಹಿತಿ ನೀಡಿದ ಅಧಿಕಾರಿಯನ್ನು ಅಮಾನತುಗೊಳಿಸಿ ಸಚಿವರು ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ಮುಸ್ಲಿಮರ ಬಗ್ಗೆ ಮಾತನಾಡಿದರೆ ಡ್ಯಾಮೇಜ್ ಆಗುತ್ತದೆ ಎಂದು ಭಾವಿಸಿರುವ ಪಕ್ಷಗಳಿಗೆ ಮುಂದಿನ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಗೌಸ್ ಮುನೀರ್ ಎಚ್ಚರಿಸಿದ್ದಾರೆ.

Demand for SIT investigation into stone pelting case

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...