Home ಡಿಸಿಸಿ ಬ್ಯಾಂಕ್ ನೇಮಕಾತಿ ಪ್ರಕ್ರಿಯೆ ತಡೆಗೆ ದಸಂಸ ಆಗ್ರಹ
HomechikamagalurLatest Newsnamma chikmagalur

ಡಿಸಿಸಿ ಬ್ಯಾಂಕ್ ನೇಮಕಾತಿ ಪ್ರಕ್ರಿಯೆ ತಡೆಗೆ ದಸಂಸ ಆಗ್ರಹ

Share
Share

ಚಿಕ್ಕಮಗಳೂರು: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಲ್ಲಿ ಕಾನೂನು ಬಾಹಿರವಾಗಿ ನಡೆಯುತ್ತಿರುವ ನೇಮಕಾತಿ ಪ್ರಕ್ರಿಯೆಯನ್ನು ತಡೆಹಿಡಿಯಬೇಕು. ಇಲ್ಲದಿದ್ದಲ್ಲಿ ತೀವ್ರ ಹೋರಾಟ ಹಮ್ಮಿಕೊಳ್ಳುವುದರ ಜೊತೆಗೆ ಕಾನೂನು ಹೋರಾಟ ರೂಪಿಸುವುದಾಗಿ ದಲಿತ ಸಂಘರ್ಷ ಸಮಿತಿ ಮುಖಂಡ ಮರ್ಲೆ ಅಣ್ಣಯ್ಯ ಎಚ್ಚರಿಸಿದ್ದಾರೆ.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪರಿಶಿಷ್ಟ ಜಾತಿಗಳಿಗೆ ಒಳಮೀಸಲು ನೀಡುವತನಕ ಯಾವುದೇ ನೇಮಕಾತಿ ಅಧಿಸೂಚನೆ ಹೊರಡಿಸಬಾರದು ಎಂದು ರಾಜ್ಯಸರಕಾರ ಆದೇಶಿಸಿದೆ. ಈ ಆದೇಶವನ್ನು ಉಲ್ಲಂಘಿಸಿ ನೇಮಕಾತಿ ಅಧಿಸೂಚನೆ ಹೊರಡಿಸುವ ಮೂಲಕ ಎಸ್ಸಿ ವಿದ್ಯಾವಂತ ಯುವಜನತೆಯನ್ನು ವಂಚಿಸುವ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಬ್ಯಾಂಕಿನ ಮುಂಬಡ್ತಿಗಳಲ್ಲಿ ರೋಸ್ಟರ್ ನಿಯಮ ಪಾಲನೆ ಮಾಡುವಂತೆ ಹಲವು ಬಾರಿ ಮನವಿ ಮಾಡಿದ್ದರೂ, ಈ ಬಗ್ಗೆ ಹೈಕೋರ್ಟ್ ಆದೇಶ ನೀಡಿದ್ದರೂ ಸಹ ಸೂಕ್ತ ಕ್ರಮ ಜರುಗಿಸದೆ ಪರಿಶಿಷ್ಟ ನೌಕರರನ್ನು ದ್ವಿತೀಯ ದರ್ಜೆ ಪ್ರಜೆಗಳಂತೆ ಕಾಣಲಾಗುತ್ತಿದೆ. ಮೇ.೨೫ ರಂದು ಯುಪಿಎಸ್‌ಸಿ, ಕೆಪಿಎಸ್‌ಸಿ ಪರೀಕ್ಷೆ ನಡೆಯುತ್ತಿದೆ. ಅಂದು ಯಾವುದೇ ಇತರೆ ಪರೀಕ್ಷೆಗಳನ್ನು ನಡೆಸಬಾರದು ಎಂಬ ನಿಯಮವಿದ್ದರೂ ಅದೇ ದಿನ ಡಿಸಿಸಿ ಬ್ಯಾಂಕಿನ ನೇಮಕಾತಿ ಪರೀಕ್ಷೆ ದಿನ ನಿಗದಿ ಮಾಡಿದ್ದಾರೆ. ಬೇರೆ ದಿನ ನಡೆಸುವಂತೆ ಸರಕಾರದ ಕಾರ್ಯದರ್ಶಿಗಳು ಆದೇಶಿಸಿದ್ದರೂ ಅದನ್ನು ಉಲ್ಲಂಘಿಸಲಾಗಿದೆ ಎಂದು ದೂರಿದರು.

ಬ್ಯಾಂಕಿನ ಆಡಳಿತ ಮಂಡಳಿ ಅವಧಿಯು ಇನ್ನೂ ೬ ತಿಂಗಳು ಬಾಕಿ ಇದ್ದು ಈ ಸಂದರ್ಭದಲ್ಲಿ ತರಾತುರಿಯಲ್ಲಿ ನೇಮಕಾತಿಯನ್ನು ಪೂರ್ಣಗೊಳಿಸಲು ಯತ್ನಿಸುತ್ತಿರುವುದು ಇವರ ದುರುದ್ದೇಶದ ಕ್ರಮವಾಗಿದೆ. ಜಿಲ್ಲಾಧಿಕಾರಿಗಳು ಈ ಬಗ್ಗೆ ಗಮನಹರಿಸಿ ಸರಕಾರದ ಆದೇಶಗಳನ್ನು ಕಡ್ಡಾಯವಾಗಿ ಪಾಲಿಸಲು ನಿರ್ದೇಶನ ನೀಡಬೇಕು. ಅಲ್ಲಿಯತನಕ ಪರೀಕ್ಷೆಯನ್ನು ಮುಂದೂಡುವಂತೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.

ಡಿಸಿಸಿ ಬ್ಯಾಂಕಿನಲ್ಲಿ ಮೀಸಲಾತಿ ಪಾಲಿಸುವಂತೆ ಹೈಕೋರ್ಟ್ ೨೦೧೭ ರಲ್ಲಿ ನೀಡಿರುವ ಆದೇಶವನ್ನು ಪಾಲಿಸಿದ ನಂತರವೇ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸಬೇಕು ಎಂದು ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಬಾಚಿಗನಹಳ್ಳಿಮಂಜಯ್ಯ ಉಪಸ್ಥಿತರಿದ್ದರು.

Demand to stop DCC Bank recruitment process

Share

Leave a comment

Leave a Reply

Your email address will not be published. Required fields are marked *

Don't Miss

ತರೀಕೆರೆ-ಕಡೂರು-ಚಿಕ್ಕಮಗಳೂರು: ಅದಲು-ಬದಲು ಕಾಂಗ್ರೆಸ್, ಬಿಜೆಪಿ ಕಿತ್ತಾಟ !

ಚಿಕ್ಕಮಗಳೂರು: ರಸ್ತೆ ಕಾಮಗಾರಿಗಳು, ಭದ್ರ ಉಪಕಣಿವೆ ಯೋಜನೆಗಳಿಗೆ ಕಾಂಗ್ರೆಸ್ ಶಾಸಕರುಗಳಲ್ಲಿ “ಸಿಟ್ಟು” ಮಡಿಗಟ್ಟಿದೆ. ಇದಕ್ಕೆ ಪ್ರತಿಯಾಗಿ ವಿಧಾನ ಪರಿಷತ್ ಸದಸ್ಯಮತ್ತು ಬಿಜೆಪಿ ಮುಖಂಡ ಸಿ.ಟಿ.ರವಿ ಹಾದಿ ರಂಪ,ಬೀದಿ ರಂಪ ಮಾಡಿಕೊಂಡು ದೂರುಪ್ರತಿದೂರು...

ಸ್ಥಳೀಯ ಶಾಸಕರ ಪ್ರಚೋದನಾಕಾರಿ ಹೇಳಿಕೆಯಿಂದ ಶಾಸಕ ಸಿ.ಟಿ ರವಿ ಹಲ್ಲೆಗೆ ಯತ್ನ

ಚಿಕ್ಕಮಗಳೂರು: ರಾಂಪುರ ರಸ್ತೆ ಕಾಮಗಾರಿ ವೀಕ್ಷಣೆ ಸಂದರ್ಭದಲ್ಲಿ ಸ್ಥಳೀಯ ಶಾಸಕರ ಪ್ರಚೋದನಾಕಾರಿ ಹೇಳಿಕೆ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದ ಮುಖಂಡರು ಹಾಗೂ ವಿಧಾನಪರಿಷತ್ ಶಾಸಕ ಸಿ.ಟಿ ರವಿ ರವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು...

Related Articles

ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಜನಪ್ರತಿನಿಧಿಗಳಿಂದ ಸ್ವಾಗತ

ಚಿಕ್ಕಮಗಳೂರು:  ಬೇಸಿಗೆ ರಜೆ ಮುಗಿದು ಇಂದಿನಿಂದ ಶಾಲೆಗಳು ಪ್ರಾರಂಭಗೊಂಡಿದ್ದು, ಅತ್ಯಂತ ಹುರುಪಿನಿಂದ ಶಾಲೆಗಳಿಗೆ ಆಗಮಿಸಿದ ಮಕ್ಕಳಿಗೆ...

ಮತದಾರರ ಪಟ್ಟಿ ಶುದ್ಧೀಕರಣಕ್ಕೆ ಆದ್ಯತೆ ನೀಡಿ

ಚಿಕ್ಕಮಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳು ಸುಸೂತ್ರ ಹಾಗೂ ಪಾರದರ್ಶಕವಾಗಿ ನಡೆಯಬೇಕಾದರೆ ದೋಷಮುಕ್ತ ಮತದಾರರ ಪಟ್ಟಿ ಅತ್ಯಗತ್ಯ....

 ಮಕ್ಕಳ ಶಾಲಾ ಹಾಜರಾತಿ ಬಗ್ಗೆ ಪೋಷಕರು ನಿಗಾ ವಹಿಸಬೇಕು

ಚಿಕ್ಕಮಗಳೂರು: ಮಕ್ಕಳು ಪ್ರತಿದಿನ ತಪ್ಪದೆ ಶಾಲೆಗೆ ಹಾಜರಾಗಬೇಕು. ಶಿಕ್ಷಣದಲ್ಲಿ ನಿರಂತರತೆ ಅತ್ಯಂತ ಮುಖ್ಯವಾಗಿದ್ದು, ಪೋಷಕರು ಈ...

ನಿವೇಶನಕ್ಕಾಗಿ ಒತ್ತಾಯಿಸಿ 4ನೇ ದಿನಕ್ಕೆ ಮುಂದುವರೆದ ಧರಣಿ

ಮೂಡಿಗೆರೆ: ತಾಲೂಕಿನ ಮಣ್ಣಿಕೆರೆ ಗ್ರಾಮದಲ್ಲಿ ಟಿಯುಸಿಐ ಮತ್ತು ವಸತಿಗಾಗಿ ಹೋರಾಟ ವೇದಿಕೆ ವತಿಯಿಂದ ನಿವೇಶನ ರಹಿತರು...