Home Latest News ಕಾಡಾನೆಗಳ ಹಾವಳಿ ತಪ್ಪಿಸಲು ಒತ್ತಾಯಿಸಿ ನಾಳೆ ಅರಣ್ಯ ಇಲಾಖೆ ಮುತ್ತಿಗೆ
Latest News

ಕಾಡಾನೆಗಳ ಹಾವಳಿ ತಪ್ಪಿಸಲು ಒತ್ತಾಯಿಸಿ ನಾಳೆ ಅರಣ್ಯ ಇಲಾಖೆ ಮುತ್ತಿಗೆ

Share
Share

ಚಿಕ್ಕಮಗಳೂರು : ಬೀಟಮ್ಮ ಕಾಡಾನೆಗಳ ಗ್ಯಾಂಗ್ ಅನ್ನು ಕೂಡಲೇ ಸ್ಥಳಾಂತರ ಮಾಡುವಂತೆ ಒತ್ತಾಯಿಸಿ ನಾಳೆ ಅರಣ್ಯ ಇಲಾಖೆಗೆ ಮುತ್ತಿಗೆ ಹಾಕಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ತಿಳಿಸಿದ್ದಾರೆ. ನಾಳೆ ಬೆಳಿಗ್ಗೆ 11 ಗಂಟೆಗೆ ನಗರದ ತಾಲೂಕು ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ಮುತ್ತಿಗೆ ಹಾಕಲಾಗುವುದು ಎಂದು ಅವರು ತಿಳಿಸಿದ್ದಾರೆ. ‌

ಕಾಡಾನೆಗಳಿಂದ ಇಷ್ಟೊಂದು ಹಾನಿ ಸಂಭವಿಸಿದ್ದರೂ ಇದುವರೆಗೂ ಜಿಲ್ಲಾಧಿಕಾರಿ ರೈತರ ಜೊತೆಯಾಗಲಿ ಸಂತ್ರಸ್ತರ ಜೊತೆಯಾಗಲಿ ಯಾವುದೇ ಸಭೆಯನ್ನು ಕರೆದಿಲ್ಲ ಕನಿಷ್ಟ ಸಮಸ್ಯೆ ಕೇಳಿಲ್ಲ ಎಂದು ಆರೋಪಿಸಿರುವ ಗುರುಶಾಂತಪ್ಪ ಇದುವರೆಗೂ ಆನೆ ದಾಳಿಯಿಂದ ನಷ್ಟ ಉಂಟಾದವರೆಗೆ 9 ಕೋಟಿ ಪರಿಹಾರ ನೀಡಲಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ ಆದರೆ ಇದು ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತಾಗಿದೆ ಎಂದರು.

ಇದೇ ವೇಳೆ ಮಾತನಾಡಿದ ಅವರು ಮಳಲೂರು, ದಂಬದಹಳ್ಳಿ ಬಿಗ್ಗನಹಳ್ಳಿ ತಗಡೂರು ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ಕಾಫಿ ಭತ್ತ ಶುಂಠಿ ಜೋಳದ ಬೆಳೆಗಳು ನಾಶ ವಾಗಿದ್ದು ಕೇವಲ ದಯಾ ಪರಿಹಾರ ಕೊಟ್ಟರೆ ಸಾಲದು ಬದಲಾಗಿ ಈಗ ಕೊಡುತ್ತಿರುವುದಕ್ಕೆ ದುಪ್ಪಟ್ಟು ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದರು.

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...