ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಕ್ಷೀಣಿಸಿದ್ದು, ಆಗಾಗ್ಗೆ ಸಾಧಾರಣ ಮಳೆಯಾಗುತ್ತಿದೆ. ಬಿಟ್ಟು ಬಿಟ್ಟು ಮಳೆಯಾಗುತ್ತಿದ್ದು ಚಾರ್ಮಾಡಿಘಾಟಿ ಪ್ರದೇಶದಲ್ಲಿ ಮಂಜು ಆವರಿಸಿದ್ದು, ವಾಹನ ಸವಾರರು ಸಂಚರಿಸುವುದು ದುಸ್ತರವಾಗಿದೆ.
ಕೊಪ್ಪ, ಶೃಂಗೇರಿ, ನರಸಿಂಹರಾಜಪುರ, ಮೂಡಿಗೆರೆ, ಕಳಸ, ಚಿಕ್ಕಮಗಳೂರು ಭಾಗದಲ್ಲಿ ಸಾಧಾರಣ ಮಳೆಯಾಗುತ್ತಿದೆ. ಕಡೂರು, ತರೀಕೆರೆ, ಅಜ್ಜಂಪುರ ಭಾಗದಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಅನೇಕ ದಿನಗಳಿಂದ ಮಲೆ ನಾಡು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆ ಅಲ್ಪವಿರಾಮ ನೀಡಿದ್ದು, ಮಲೆನಾಡಿನ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
ಮೂಡಿಗೆರೆ ತಾಲೂಕು ಚಾರ್ಮಾಡಿಘಾಟಿ ಪ್ರದೇಶದಲ್ಲಿ ಭಾರೀ ಪ್ರಮಾಣದ ಮಂಜು ಆವರಿಸಿದ್ದು, ರಸ್ತೆ ಕಾಣದಂತಾಗಿದ್ದು, ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಲಾಯಿಸುವಂತಾಗಿದೆ. ಸ್ವಲ್ಪ ಎಚ್ಚರತಪ್ಪಿದರು ದೊಡ್ಡ ಅನಾಹುತ ಸಂಭ ವಿಸುವ ಸಾಧ್ಯತೆಗಳಿವೆ.
ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಜಿಲ್ಲೆಯ ಗಿರಿಶ್ರೇಣಿ ಪ್ರದೇಶಲ್ಲಿ ಜಲಪಾತಗಳು ನಿರ್ಮಾಣ ವಾಸಗಿದ್ದು, ದುಮ್ಮುಕ್ಕುತ್ತಿರುವ ಜಲಪಾತಗಳು ಪ್ರವಾಸಿಗರನ್ನು ಕೈಬಿಸಿ ಕರೆಯುತ್ತಿವೆ. ಒಟ್ಟಾರೆ ಜಿಲ್ಲೆಯಲ್ಲಿ ಮಳೆ ಕ್ಷೀಣಿಸಿದ್ದು, ಜನರು ನಿಟ್ಟುಸಿರು ಬಿಡುವಂತೆ ಮಾಡಿದೆ.
Dense fog in Charmadi Ghat area
Leave a comment