Home namma chikmagalur chikamagalur ಕಾಫಿನಾಡಿನ ಗಿರಿಭಾಗದಲ್ಲಿ ದಟ್ಟ ಮಂಜು
chikamagalurHomeLatest Newsnamma chikmagalur

ಕಾಫಿನಾಡಿನ ಗಿರಿಭಾಗದಲ್ಲಿ ದಟ್ಟ ಮಂಜು

Share
Share

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸೂರ್ಯನ ದರ್ಶನವೇ ಇಲ್ಲದಂತಾಗಿದ್ದು, ಥಂಡಿ ವಾತಾವರಣ ಉಂಟಾಗಿದ್ದು, ಶೀತಗಾಳಿ ಬೀಳಲಾರಂಭಿಸಿದೆ.

ಮಲೆನಾಡು ಮತ್ತು ಬಯಲು ಭಾಗದಲ್ಲಿ ದಟ್ಟವಾದ ಮಂಜಿನಿಂದ ಆವೃತವಾಗಿದೆ. ಜಿಲ್ಲೆಯ ಮುಳ್ಳಯ್ಯನಗಿರಿ, ದತ್ತಪೀಠ, ಕಳಸ ಹಾಗೂ ಚಾರ್ಮಾಡಿ ಘಾಟಿ ಪ್ರದೇಶಗಳಲ್ಲಿ ಮಂಜು ಎಷ್ಟು ದಟ್ಟವಾಗಿದೆ ಎಂದರೆ ಎದುರಿಗಿರುವ ರಸ್ತೆಯೇ ಕಾಣದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ವಿಶೇಷವಾಗಿ ಕಳಸ ಭಾಗವು ಮಂಜಿನ ನಡುವೆ ಸಂಪೂರ್ಣವಾಗಿ ಕಳೆದುಹೋಗಿದ್ದು, ಈ ದೃಶ್ಯಗಳು ಡೋನ್ ಕ್ಯಾಮೆರಾದಲ್ಲಿ ಅದ್ಭುತವಾಗಿ ಸೆರೆಯಾಗಿವೆ. ಗಿರಿಶಿಖರಗಳು ಮತ್ತು ಗುಡ್ಡಗಾಡು ಪ್ರದೇಶಗಳು ಮಂಜಿನಿಂದ ಕೂಡಿ ಹೊಸದೊಂದು ಲೋಕದಂತೆ ಭಾಸವಾಗುತ್ತಿವೆ.

ಈ ದಟ್ಟ ಮಂಜಿನಿಂದಾಗಿ ಚಾರ್ಮಾಡಿ ಘಾಟಿ ಮತ್ತು ಮುಳ್ಳಯ್ಯನಗಿರಿ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಹಗಲು ಹೊತ್ತಿನಲ್ಲೇ ಕಡ್ಡಾಯವಾಗಿ ಹೆಡ್‌ಲೈಟ್ ಹಾಗೂ ಫಾಗ್ ಲೈಟ್‌ಗಳನ್ನು ಹಾಕಿಕೊಂಡು ಸಂಚರಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಕಳೆದ ಎರಡು ದಿನಗಳಿಂದ ಸತತವಾಗಿ ಬೀಸುತ್ತಿರುವ ಶೀತ ಗಾಳಿ ಮತ್ತು ಭಾರೀ ಚಳಿಗೆ ಮಲೆನಾಡಿಗರು ಕಂಗಾಲಾಗಿದ್ದಾರೆ. ಮಂಜಿನ ಈ ಅಬ್ಬರ ಪ್ರವಾಸಿಗರಿಗೆ ಮುದ ನೀಡುತ್ತಿದ್ದರೂ, ದೈನಂದಿನ ಜನಜೀವನ ಮತ್ತು ವಾಹನ ಸಂಚಾರದ ಮೇಲೆ ಭಾರೀ ಪರಿಣಾಮ ಬೀರಿದೆ.

ರೋಗಿಗಳು ಮತ್ತು ವೃದ್ಧರು ಮನೆಯಿಂದ ಹೊರಬಾರದಂತಾಗಿದ್ದು, ಬೆಚ್ಚನೆಯ ಉಡುಪು, ಹೊದಿಕೆ ಹೊದ್ದುಕೊಂಡು ಬೆಂಕಿಕಾಯಿಸುವಂತ ಪರಿಸ್ಥಿತಿ ಉಂಟಾಗಿದೆ. ಮಧ್ಯಾಹ್ನ ಸ್ವಲ್ಪ ಹೊತ್ತು ಬಿಸಿಲಿನ ಕಿರಣ ಭೂಮಿಗೆ ತಾಕಿತಾಗಿದ್ದರೂ ಇಡೀ ದಿನ ದಟ್ಟ ಮಂಜು ಆವರಿಸಿದೆ. ಮನೆಯ ಪಕ್ಕದಲ್ಲಿ ಪ್ಲಾಸ್ಟಿಕ್ ಮೇಲೆ ಹರಡಿದ್ದ ಕಾಫಿಬೀಜವನ್ನು ಮುದಿರಿಡುವ ಪರಿಸ್ಥಿತಿ ಉಂಟಾಗಿದೆ

Dense fog in the hilly areas of the coffee country

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...