ಬೆಂಗಳೂರು: ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಸುತ್ತಮುತ್ತಲಿನ ಒಟ್ಟ 13 ಹಳ್ಳಿಗಳ 1,777 ಎಕರೆ ಭೂ ಸ್ವಾಧೀನ ನಿರ್ಧಾರವನ್ನು ರಾಜ್ಯ ಸರ್ಕಾರ ಹಿಂತೆಗೆದುಕೊಂಡಿದೆ. ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರೈತರು, ಹೋರಾಟಗಾರರು, ಸಂಘಟನೆಗಳ ಸಭೆಯಲ್ಲಿ ನೋಟಿಫಿಕೇಶನ್ ರದ್ದು ಮಾಡುವ ಬಗ್ಗೆ ಘೋಷಣೆ ಮಾಡಿದರು.
ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ ಅವರು, 1,777 ಎಕರೆ ಜಮೀನು ಭೂಸ್ವಾಧೀನಕ್ಕೆ ಸರ್ಕಾರ ನೋಟಿಫಿಕೇಶನ್ ಹೊರಡಿಸಿತ್ತು. ಕೃಷಿ ಭೂಮಿ ಭೂಸ್ವಾಧೀನ ಮಾಡದಂತೆ ರೈತರು ಹೋರಾಟ ಮಾಡುತ್ತಿದ್ದರು. ಕೃಷಿ ಚಟುವಟಿಕೆಗಳು ಮುಂದುವರೆಸುವ ದೃಷ್ಟಿಯಿಂದ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನ ರದ್ದು ಮಾಡಿರುವುದಾಗಿ ಸ್ಪಷ್ಟಪಡಿಸಿದರು. ಈ ಮೂಲಕ 1777 ಎಕರೆ ಕೃಷಿ ಜಮೀನು ಉಳಿಸಿಕೊಳ್ಳಲು 1197 ನಡೆದ ರೈತರ ಹೋರಾಟಕ್ಕೆ ಬಹುದೊಡ್ಡ ಜಯಸಿಕ್ಕಿದೆ.
ಸರ್ಕಾರದ ನಿರ್ಧಾರದ ಬಗ್ಗೆ ಮಾತನಾಡಿದ ನಟ ಪ್ರಕಾಶ್ ರಾಜ್, ಇದು 3 ವರ್ಷಗಳ ಪ್ರತಿಭಟನೆಗೆ ಸಿಕ್ಕ ಜಯ. ಇದು ರೈತರ ಜಯ ಇದು. ಸಂಘಟನೆಗಳ ಜಯ. ಐತಿಹಾಸಿಕ ಚಳುವಳಿಯ ಜಯ ಇದು. ಸರ್ಕಾರಕ್ಕೆ, ಸಿಎಂಗೆ ಧನ್ಯವಾದಗಳನ್ನು ಹೇಳ್ತೀನಿ. ದೇವನಹಳ್ಳಿ ಹೋರಾಟಕ್ಕೆ ಜಯವಾಗಿದೆ. ಮುಂದಿನ ಹೋರಾಟದ ಬಗ್ಗೆ ಮುಂದೆ ನೋಡೋಣ ಎಂದರು.
Leave a comment