Home Latest News ಸರ್ಫೇಸಿ ಕಾಯ್ದೆ ರದ್ದುಮಾಡಲು ದೇವರಾಜ್ ಆಗ್ರಹ
Latest NewschikamagalurHomenamma chikmagalur

ಸರ್ಫೇಸಿ ಕಾಯ್ದೆ ರದ್ದುಮಾಡಲು ದೇವರಾಜ್ ಆಗ್ರಹ

Share
Share

ಚಿಕ್ಕಮಗಳೂರು:  ಸರ್ಫೇಸಿ ಕಾಯ್ದೆ ಕಾಫಿ ಬೆಳೆಗಾರರಿಗೆ ಮರಣ ಶಾಸನವಾಗಿದ್ದು, ಬೆಳೆಗಾರರ ಜೊತೆ ಚೆಲ್ಲಾಟವಾಡದೆ ಕೇಂದ್ರಸರ್ಕಾರ ಈ ಕಾಯ್ದೆಯನ್ನು ರದ್ದುಮಾಡಿ, ಬೆಳೆಗಾರರ ನೆರವಿಗೆ ಧಾವಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್ ಆಗ್ರಹಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಯ ಕಾಫಿಯ ಗುಣಮಟ್ಟ ಮತ್ತು ಬೆಳೆಗಾರರ ಬಗ್ಗೆ ಮನ್‌ಕಿ ಬಾತ್ ನಲ್ಲಿ ಪ್ರಸ್ತಾಪಿಸಿದ್ದಾರೆ. ಬರಿ ಪ್ರಸ್ತಾಪ ಮಾಡಿದರೆ ಸಾಲದು ಬೆಳೆಗಾರರು ಸಂಕಷ್ಟದಲ್ಲಿದ್ದಾಗ ಅವರ ನೆರವಿಗೆ ಬರಬೇಕು. ಅಲ್ಲದೆ ಬೆಳೆಗಾರರಿಗೆ ಮರಣ ಶಾಸನವಾಗಿರುವ ಸರ್ಫೆಸಿ ಕಾಯಿದೆಯನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯ ಪ್ರಮುಖ ಬೆಳೆ ಕಾಫಿ ಅತಿವೃಷ್ಟಿಯಿಂದ ಶೇ.೫೦-೬೦ ರಷ್ಟು ನೆಲಕಚ್ಚಿದ್ದು, ಕಾಫಿ ಬೆಳೆಯಿಂದ ಅಧಿಕ ವಿದೇಶಿವಿನಿಮಯ ಪಡೆಯುವ ಕೇಂದ್ರ ಸರಕಾರ ಬೆಳೆಗಾರರಿಗೆ ಆಗಿರುವ ನಷ್ಟ ಭರ್ತಿಮಾಡಿಕೊಡಬೇಕು ಈ ವರ್ಷ ಸುರಿದ ಮಳೆಯಿಂದ ಶೇ.೫೦-೬೦ ರಷ್ಟು ಅರೆಬಿಕಾ ಕಾಫಿ ಉದುರಿ ಹೋಗಿದೆ. ರೊಬಸ್ಟಾ ಸೆಟ್ ಆಗಲೇ ಇಲ್ಲ. ಇಂತಹ ಕ್ಲಿಷ್ಟಕರ ಸಮಸ್ಯೆಯನ್ನು ಯಾರ ಬಳಿ ಹೇಳಿಕೊಳ್ಳಬೇಕು ಎಂಬುದೇ ತಿಳಿಯುತ್ತಿಲ್ಲ ಎಂದು ತಿಳಿಸಿದರು.

ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅವರು ಇನ್ನು ೬ ತಿಂಗಳಲ್ಲಿ ಸರ್ಫೆಸಿ ಕಾಯಿದೆ ರದ್ದು ಮಾಡಿಸುವುದಾಗಿ ಸಮಾರಂಭದಲ್ಲಿ ಹೇಳಿದ್ದರು. ಆದರೆ ವರ್ಷ ಕಳೆದರೂ ಬೆಳೆಗಾರರ ಹರಾಜು ಪ್ರಕ್ರಿಯೆ ಮುಂದುವರಿದಿದೆ. ಚಿಕ್ಕಮಗಳೂರು ಬೇಲೂರು ರಸ್ತೆ ಅಭಿವೃದ್ಧಿಪಡಿಸುವುದಾಗಿಯೂ ಸಂಸದರು ಹೇಳಿದ್ದರು, ಆ ಕೆಲಸವೂ ಆಗಿಲ್ಲ. ಹೀಗಾಗಿ ಹಿಂದಿನ ಸಂಸದೆ ಶೋಭಾ ಕರಂದ್ಲಾಜೆಯಂತೆ ಇವರೂ ನಮ್ಮ ಕಿವಿಗೆ ಹೂ ಮುಡಿಸುವುದು ಬೇಡ. ಸುಳ್ಳು ಹೇಳುವುದನ್ನು ನಿಲ್ಲಿಸಿ ನುಡಿದಂತೆ ನಡೆದುಕೊಳ್ಳಬೇಕು. ಇಲ್ಲದಿದ್ದರೆ ಅವರ ವಿರುದ್ಧವೂ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿ ಸವಿತಾ ಸಮಾಜದ ಬಗ್ಗೆ ಅವಹೇಳನಕಾರಿ ಪದ ಬಳಿಸಿರುವ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಇನ್ನಾದರೂ ತಮ್ಮ ನಡವಳಿಕೆಯಲ್ಲಿ ಬದಲಾವಣೆ ಮಾಡಿಕೊಳ್ಳಲಿ ಎಂದು ಸಲಹೆ ನೀಡಿದರು.

ಸಂಸದರು, ಮುಖ್ಯಮಂತ್ರಿಗಳು, ಅರಣ್ಯ, ಕಂದಾಯ ಸಚಿವರಿಗೆ ಸಧ್ಯದಲ್ಲೇ ಕಾಫಿ ಬೆಳೆಯುವ ಪ್ರದೇಶಗಳಾದ ಚಿಕ್ಕಮಗಳೂರು, ಹಾಸನ, ಕೊಡಗು ಈ ಮೂರು ಜಿಲ್ಲೆಗಳ ಬೆಳೆಗಾರರ ಸಂಘಟನೆ ನೇತೃತ್ವದಲ್ಲಿ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಮಹಮದ್ ಅಕ್ಬರ್, ಶಾಂತಕುಮಾರ್, ಪ್ರಧಾನ ಕಾರ್ಯದರ್ಶಿ ಹಿರೇಮಗಳೂರು ರಾಮಚಂದ್ರ ಉಪಸ್ಥಿತರಿದ್ದರು.

Devaraj demands repeal of SARFAESI Act

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ ಇಲಿಗೆ ‘ಹಣದ ಮೋಹ’

ಚಿಕ್ಕಮಗಳೂರು : ತುಮಕೂರಿನಲ್ಲಿ ಇತ್ತೀಚೆಗೆ ಇಲಿಯೊಂದು ಚಿನ್ನದ ಆಭರಣಗಳನ್ನು ಎಗರಿಸಿ ಸುದ್ದಿಯಾಗಿದ್ದರೆ, ಇತ್ತ ಚಿಕ್ಕಮಗಳೂರಿನಲ್ಲಿ ಮತ್ತೊಂದು ಚಾಣಾಕ್ಷ ಇಲಿ ಒಂದು ಹೆಜ್ಜೆ ಮುಂದೆ ಹೋಗಿ ನೇರವಾಗಿ ಹಣವನ್ನೇ ಕದ್ದು ತನ್ನ ಸಾಮ್ರಾಜ್ಯ...

ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಹೆಸರಿನಲ್ಲಿಯೂ ನಕಲಿ ವಾಟ್ಸಪ್ ಖಾತೆ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಹ್ಯಾಕರ್‌ಗಳು ಮತ್ತು ವಂಚಕರು ವಾಟ್ಸಪ್, ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರನ್ನು...

Related Articles

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...

ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ

ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ...

ಕನಸು ಫೈನಾನ್ಸ್ ಹೆಸರಿನಲ್ಲಿ ₹1.60 ಲಕ್ಷ ವಂಚನೆ ಆರೋಪ

ಕಡೂರು: ಪ್ರತಿದಿನ ಉಳಿತಾಯದ ಹಣವನ್ನು ಸ್ವೀಕರಿಸಿ ಶೇ.7ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ, ಹಣವನ್ನು ವಾಪಸ್ ನೀಡದೆ...