Home Latest News ಮೇ 29ರಿಂದ ವಿಕಸಿತ ಕೃಷಿ ಸಂಕಲ್ಪ ಅಭಿಯಾನ
Latest NewschikamagalurHomenamma chikmagalur

ಮೇ 29ರಿಂದ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

Share
Share

ಚಿಕ್ಕಮಗಳೂರು:  ನವದೆಹಲಿಯ ಭಾರತೀಯ ಕೃಷಿ ಅನುಸಂಧಾನ ಪರಿಷತ್ತು ಹಾಗೂ ಅದರ ವಿವಿಧ ಸಂಸ್ಥೆಗಳು, ದೇಶದ ಕೃಷಿ ವಿಜ್ಞಾನ ಕೇಂದ್ರಗಳು, ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಈ ಮುಂಗಾರು ಹಂಗಾಮಿನಲ್ಲಿ ಕೃಷಿಕರಿಗೆ ತಾಂತ್ರಿಕತೆಗಳು ಲಭ್ಯವಾಗುವಂತೆ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ಮೇ ೨೯ ರಿಂದ ಜೂನ್ ೧೨ರವರೆಗೆ ಹಮ್ಮಿಕೊಳ್ಳಲಾಗಿದೆ.

ಈ ವಿನೂತನ ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ರೈತರ ಕಡೆ ತೆರಳಿ, ಜಿಲ್ಲೆಯ ಎಲ್ಲ ರೈತರಿಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಾಹಿತಿ ನೀಡುವುದು ಈ ಅಭಿಯಾನದ ಉದ್ದೇಶವಾಗಿದ್ದು, ಇಲ್ಲಿ ರೈತರನ್ನು ಒಗ್ಗೂಡಿಸಿ ನೂತನ ತಂತ್ರಜ್ಞಾನಗಳು, ಹೊಸ ತಳಿಗಳು ಮತ್ತು ಬೀಜಗಳು, ನಿಖರವಾದ ಹವಾಮಾನದ ಮಾಹಿತಿ ಮತ್ತು ಸರ್ಕಾರದ ನಾನಾ ಲಾಭದಾಯಕ ಯೋಜನೆಗಳು, ಕೃಷಿಯಲ್ಲಿ ಹೆಚ್ಚಿನ ಲಾಭವನ್ನು ಹೇಗೆ ಪಡೆಯಬಹುದು ಎಂಬ ಬಗ್ಗೆ ಮಾಹಿತಿ ನೀಡಲಾಗುವುದು. ರೈತರು ನೀಡುವ ಪ್ರತಿಕ್ರಿಯೆಗಳನ್ನು ಸಂಗ್ರಹಿಸಿ ಅವರ ಹೊಸ ಆವಿಷ್ಕಾರಗಳನ್ನು ಸಂಶೋಧನೆ ಮತ್ತು ಪ್ರಸಾರ ಚಟುವಟಿಕೆಗಳಲ್ಲಿ ಬಳಸಲಾಗುತ್ತದೆ.

ಬೆಳೆ, ಮಣ್ಣು ಮತ್ತು ಲಭ್ಯವಿರುವ ಸಂಪನ್ಮೂಲಗಳ ಆಧಾರದ ಮೇಲೆ ತಜ್ಞರಿಂದ ಸಲಹೆಗಳನ್ನು ನೀಡಲಾಗುತ್ತದೆ. ಜೊತೆಗೆ ಸರ್ಕಾರದ ಯೋಜನೆಗಳ ಲಾಭ ಪಡೆಯುವ ವಿಧಾನಗಳ ಕುರಿತು ಸಂಪೂರ್ಣ ಮಾಹಿತಿ ನೀಡಲಾಗುತ್ತದೆ.

ಜಿಲ್ಲೆಯ ಆಯಾ ಹೋಬಳಿಯ ರೈತ ಸಂಪರ್ಕ ಕೇಂದ್ರಗಳ ಮೂಲಕ ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ತಂಡ ಭೇಟಿ ನೀಡುವ ಬಗ್ಗೆ ಅಲ್ಲಿನ ರೈತರಿಗೆ ಮುಂಚಿತವಾಗಿ ಮಾಹಿತಿ ನೀಡಲಾಗುತ್ತದೆ. ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ತಂಡ ಆಯಾ ಗ್ರಾಮಗಳಿಗೆ ಬಂದಾಗ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡು ಕಾರ್ಯಕ್ರಮದ ಲಾಭ ಪಡೆದು ಕೃಷಿಯನ್ನು ಲಾಭದಾಯಕವಾಗಿಸಿಕೊಳ್ಳಬಹುದು ಎಂದು ಚಿಕ್ಕಮಗಳೂರು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ.ಎ.ಟಿ.ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.

Developed Agriculture Sankalpa Campaign from May 29th

Share

Leave a comment

Leave a Reply

Your email address will not be published. Required fields are marked *

Don't Miss

ಹುಯಿಗೆರೆ ಗ್ರಾಮ ಬಳಿ ಕಾಡಾನೆ ದಾಳಿಗೆ ಕೃಷಿಕನ ಸಾವು

ಬಾಳೆಹೊನ್ನೂರು: ಹುಯಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಡವಾನೆ ಜಾಗರ ಬಳಿ ಕೃಷಿಕ ಸಬ್ರಾಯಗೌಡ (65) ಎಂಬುವರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ, ತೀವ್ರ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಭಾನುವಾರ...

ವೇದಾನದಿಯಿಂದ ಕೆರೆ ತುಂಬಿಸುವ ಯೋಜನೆ ಸ್ಥಗಿತಗೊಳಿಸಬೇಕು

ಚಿಕ್ಕಮಗಳೂರು:  ವೇದಾ ನದಿಯ ಅಗ್ರಹಾರ ಬಳಿ ಇರುವ ಚೆಕ್‌ಡ್ಯಾಂನಿಂದ ಹುಲಿಕೆರೆ, ಬೆರಟಿಕೆರೆ, ನಾಗೇನಹಳ್ಳಿಯ ಕೆರೆಗಳಿಗೆ ನೀರೊದಗಿಸುವುದನ್ನು ಸ್ಥಗಿತಗೊಳಿಸದಿದ್ದರೆ ಉಗ್ರ ಹೋರಾಟವನ್ನು ನಡೆಸುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಎಚ್ಚರಿಸಿದೆ....

Related Articles

ಆದಿವಾಸಿ ಪ್ರದೇಶದ ಹೋಂಸ್ಟೇ ನಿರ್ಮಾಣಕ್ಕೆ ಸಹಾಯಧನ

ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರದ ಸಚಿವಾಲಯದ ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ...

ಗಿರಿಗೆ ತೆರಳಲು ಪಾಸ್ ಕಡ್ಡಾಯ ನಿರ್ಧಾರ ರದ್ದುಪಡಿಸುವಂತೆ ಆಗ್ರಹ

ಚಿಕ್ಕಮಗಳೂರು:  ಗುರುದತ್ತಾತ್ರೇಯ ಸ್ವಾಮಿ ಬಾಬಾಬುಡನ್‌ಗಿರಿ ದರ್ಗಾ ವ್ಯಾಪ್ತಿಯ ಸಂಚಾರಕ್ಕೆ ಸ್ಥಳೀಯ ನಿವಾಸಿಗಳಿಗೆ ಪಾಸ್ ಕಡ್ಡಾಯ ಮಾಡಲು...

ಸೈಕಲ್‌ನಲ್ಲಿ ಧರ್ಮಸ್ಥಳ ತೆರಳಲು ನಗರಕ್ಕಾಗಮಿಸಿದ ಯುವಕರ ತಂಡ

ಚಿಕ್ಕಮಗಳೂರು: ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾ ಮಿ ಸನ್ನಿಧಾನಕ್ಕೆ ತೆರಳಲು ವಿಜಯನಗರ...

೨ ಕೋಟಿ ರೂ ವೆಚ್ಚದಲ್ಲಿ ನಗರದ ಡಾ. ಅಂಬೇಡ್ಕರ್ ಭವನ

ಚಿಕ್ಕಮಗಳೂರು: ನಗರದ ಹೃದಯ ಭಾಗದಲ್ಲಿರುವ ಡಾ. ಅಂಬೇಡ್ಕರ್ ಭವನವನ್ನು ಸುಮಾರು ೨ ಕೋಟಿ ರೂ ವೆಚ್ಚದಲ್ಲಿ...