ಚಿಕ್ಕಮಗಳೂರು: ಮಡಿವಾಳ ಸಮಾಜವು ಎಲ್ಲಾ ಸಮಾಜಕ್ಕಿಂತ ಚಿಕ್ಕ ಜನಾಂಗವಾಗಿದೆ. ಸಮಾಜ ಬಾಂಧವರು ಒಂದುಗೂಡಿ ಸರ್ಕಾರದ ಯೋಜನೆಗಳನ್ನು ಪಡೆದುಕೊಂಡು ಜೀವನ ಮಟ್ಟವನ್ನು ಸುಧಾರಿಸಿಕೊಳ್ಳಬೇಕು ಎಂದು ಚಿತ್ರದುರ್ಗದ ಮಹಾಸಂಸ್ಥಾನ ಮಠದ ಶ್ರೀ ಬಸವ ಮಾಚಿದೇವ ಮಹಾ ಸ್ವಾಮೀಜಿ ಹೇಳಿದರು.
ನಗರದ ಬಸವನಹಳ್ಳಿ ಸಮೀಪದ ಜಿಲ್ಲಾ ಮಡಿವಾಳ ಸಂಘದ ಭವನದಲ್ಲಿ ಭಾನುವಾರ ಏರ್ಪಡಿಸಿ ದ್ಧ ‘ಮನ ಮನೆಗೆ ಮಾಚಿದೇವ’ ಶ್ರಾವಣ ಮಾಸದ ನಿಮಿತ್ಯ ವಿಶೇಷ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು ಆರ್ಶೀವಚನ ನೀಡಿ ಸಮಾಜ ಮತ್ತು ಸಮುದಾಯದ ಒಳಿತಿಗಾಗಿ ಮಾಚಿದೇವರ ಆದೇಶ ಮಾಡುತ್ತಾರೋ ಅಂತಹ ಕಾ ರ್ಯವನ್ನು ನಾವು ಪ್ರಾಮಾಣಿಕವಾಗಿ ಮಾಡುತ್ತೇವೆ. ಸಮುದಾಯದವರು ಸಂಘಟಿತರಾದರೆ ಮಾತ್ರ ಸಮಾ ಜವು ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಮುನ್ನೆಲೆಗೆ ಬರಲು ಸಾಧ್ಯ ಎಂಬುದು ಅರಿತುಕೊಳ್ಳಬೇಕು ಎಂದರು.
ಮಡಿವಾಳ ಸಮಾಜದ ಮುಂದಿನ ಪೀಳಿಗೆ ಉಳಿಸಿ ಬೆಳೆಸಲು ಇಂದಿನಿಂದಲೇ ಜನಾಂಗದ ಮುಖ ಂಡರು ಪ್ರಜ್ಞಾವಂತರಾಗಬೇಕು. ರಾಜ್ಯದ ಪ್ರತಿ ಜಿಲ್ಲೆ ಹಾಗೂ ತಾಲ್ಲೂಕಿನ ಮಡಿವಾಳ ಸಂಘದ ಅರಿವನ್ನು ಮೂಡಿಸುವುದು ಜಿಲ್ಲಾ ಮುಖಂಡರುಗಳ ಕರ್ತವ್ಯವಾಗಿದ್ದು ಆಗ ಮಾತ್ರ ಮಡಿವಾಳ ಜೀವನ ಉದ್ದಾರವಾ ಗಲು ಸಾಧ್ಯ ಎಂದು ತಿಳಿಸಿದರು.
ರಾಜಕೀಯವಾಗಿ ಜನಾಂಗದ ಯಾವುದೇ ಮುಖಂಡರುಗಳು ಜನಪ್ರತಿನಿಧಿಗಳಾಗಿಲ್ಲ. ಆ ನಿಟ್ಟಿನಲ್ಲಿ ಜಿ ಲ್ಲಾವಾರು ಮುಖಂಡರುಗಳೇ ಒಟ್ಟಾಗಿ ಕೈಜೋಡಿಸಬೇಕು. ಪ್ರತಿ ಜಿಲ್ಲೆಗಳಲ್ಲಿ ಸರ್ಕಾರದ ಸೌಲಭ್ಯ ಹಾಗೂ ದಾನಿಗಳ ಸಹಕಾರದಲ್ಲಿ ಒಂದೊಂದು ಭವನವನ್ನು ನಿರ್ಮಿಸಿಕೊಂಡಲ್ಲಿ ಆರ್ಥಿಕ ಏಳಿಗೆ ಹೊಂದುವ ಜೊ ತೆಗೆ ಸಮಾಜವು ಅಭಿವೃಧ್ದಿ ಹೊಂದಲಿದೆ ಎಂದರು.
ಚಿಕ್ಕಮಗಳೂರಿನ ಭವ್ಯವಾದ ಸಮುದಾಯ ಭವನ ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿದೆ. ಈ ಕಟ್ಟಡದ ಅಭಿವೃಧ್ದಿಗೂ ಮಠದಿಂದ ಮುಖ್ಯಮಂತ್ರಿಗಳಿಗೆ ಅನುದಾನಕ್ಕೆ ಕೋರಿ ಪತ್ರವು ಬರೆಯಲಾಗಿದೆ ಎಂ ದ ಅವರು ಮುಂದಿನ ಶ್ರಾವಣ ಮಾಸದ ಆರಂಭದೊಳಗೆ ಕಟ್ಟಡವನ್ನು ಸಂಪೂರ್ಣಗೊಳಿಸಿ ಉದ್ಘಾಟಿಸಲು ಜನಾಂಗವು ಮುಂದಾಗಬೇಕಿದೆ ಎಂದು ತಿಳಿಸಿದರು.
ಜಿಲ್ಲಾ ಮಡಿವಾಳ ಸಂಘದ ಅಧ್ಯಕ್ಷ ಲಕ್ಷ್ಮಣ್ ಮಾತನಾಡಿ ಜಿಲ್ಲೆಯಲ್ಲಿ ಸುಮಾರು ೧೦ ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಸಮಾಜದವರು ನೆಲೆಸಿದ್ದಾರೆ. ಆರ್ಥಿಕವಾಗಿ ಹಿಂದುಳಿದಿರುವ ಸಮಾಜದ ಏಳಿ ಗೆಗೆ ಸರ್ವರು ಒಗಟ್ಟಿನಿಂದ ಕೈಜೋಡಿಸಿದಾಗ ಮಾತ್ರ ಭವನದ ಕಟ್ಟಡವನ್ನು ಪೂರ್ಣಗೊಳಿಸಿ ಲೋಕಾರ್ಪ ಣೆಗೊಳಿಸಲು ಸಾಧ್ಯವಾಗಲಿದೆ ಎಂದರು.
ಈಗಾಗಲೇ ಸರ್ಕಾರದಿಂದ ಅನುದಾನವು ಹಂತ ಹಂತವಾಗಿ ಬಿಡುಗಡೆಗೊಂಡು ಶೇ.೮೫ರಷ್ಟು ಕಟ್ಟಡ ಪೂರ್ಣಗೊಂಡಿದೆ. ಇನ್ನಷ್ಟು ಸಣ್ಣಪುಟ್ಟ ಕೆಲಸಗಳು ಬಾಕಿಯಿರುವ ಹಿನ್ನೆಲೆಯಲ್ಲಿ ಜನಾಂಗದ ಮುಖಂಡರು ಕಟ್ಟಡಕ್ಕೆ ಅವಶ್ಯವಿರುವ ವಸ್ತುಗಳನ್ನು ಖರೀದಿಸಿಕೊಟ್ಟಲ್ಲಿ ಸಹಾಯವಾಗಲಿದೆ ಎಂದರು.
ಕಾರ್ಯಕ್ರಮಕ್ಕೂ ಮುನ್ನ ಶ್ರೀ ಬಸವ ಮಾಚಿದೇವ ಮಹಾಸ್ವಾಮೀಜಿಯವರಿಗೆ ಭಕ್ತಾಧಿಗಳು ಪಾದ ಪೂಜೆ ನೆರವೇರಿಸಿದರು. ಇದೇ ವೇಳೆ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ.ಯಲ್ಲಿ ಅತಿಹೆಚ್ಚು ಅಂಕ ಗಳಿ ಸಿದ ಸಮಾಜದ ಮುಖಂಡರುಗಳ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಪ್ರಸನ್ನ ದೇವನೂರು, ಕಾರ್ಯದರ್ಶಿ ರಾಮಚಂದ್ರ, ಸಮಾಜ ದ ಮುಖಂಡರಗಳಾದ ಷಡಕ್ಷರಿ, ಜಗದೀಶ್, ಸತೀಶ್, ಗುರುತಮೂರ್ತಿ, ನವೀನ್‌ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
Development is possible only if society is organized.
Leave a comment