Home namma chikmagalur ವಿಮಾನ ನಿಲ್ದಾಣಗಳ ಮಾದರಿಯಲ್ಲಿ ರಾಜ್ಯದ ಎಲ್ಲ ರೈಲುನಿಲ್ದಾಣ ಅಭಿವೃದ್ಧಿ
namma chikmagalurKadurLatest News

ವಿಮಾನ ನಿಲ್ದಾಣಗಳ ಮಾದರಿಯಲ್ಲಿ ರಾಜ್ಯದ ಎಲ್ಲ ರೈಲುನಿಲ್ದಾಣ ಅಭಿವೃದ್ಧಿ

Share
Share

ಬೀರೂರು: ರಾಜ್ಯದ ಎಲ್ಲ ರೈಲು ನಿಲ್ದಾಣಗಳನ್ನು ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಲಾಗಿದೆ. ಅಂಗವಿಕಲರ ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ನಿಲ್ದಾಣಗಳಲ್ಲಿ ಲಿಫ್ಟ್‌, ಎಸ್ಕಲೇಟರ್‌ ಅಳವಡಿಸುವ ಉದ್ದೇಶವಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.

ಬೀರೂರು ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಭಾನುವಾರ ನಿಲ್ದಾಣ ಪರಿಶೀಲನೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಕೇಂದ್ರ ಬಜೆಟ್‌ನೊಂದಿಗೆ ರೈಲ್ವೆ ಬಜೆಟ್‌ ವಿಲೀನವಾದ ಬಳಿಕ ರಾಜ್ಯದಲ್ಲಿ ಇಲಾಖೆಯ ಕಾರ್ಯಗಳು ವೇಗ ಪಡೆದಿವೆ. ₹3300 ಕೋಟಿ ವೆಚ್ಚದಲ್ಲಿ 1,216 ಎಕರೆ ಭೂಸ್ವಾಧೀನದ ಮೂಲಕ ವಿಸ್ತರಣೆಗೆ ಇದ್ದ ಅಡಚಣೆ ತೆರವುಗೊಳಿಸಿದ್ದು ಇದೊಂದು ದಾಖಲೆಯಾಗಿದೆ ಎಂದು ಮಾಹಿತಿ ನೀಡಿದರು.

ಅಮೃತಭಾರತ್‌ ಯೋಜನೆಯಡಿ ಬೀರೂರು ಮತ್ತು ಕಡೂರು ನಿಲ್ದಾಣಗಳನ್ನು ತಲಾ ₹ 20 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೆ ಏರಿಸುವ ಕೆಲಸ 2027-28ರ ವೇಳೆಗೆ ಮುಗಿಯಲಿದೆ. ರೈಲ್ವೆ ಮೇಲ್ಸೇತುವೆ ಮತ್ತು ಕೆಳಸೇತುವೆಗಳ ವಿಷಯದಲ್ಲಿ ಆಂದೋಲನವೇ ನಡೆದಿದೆ. ಈಗಾಗಲೇ 644 ಮೇಲ್ಸೇತುವೆ ನಿರ್ಮಿಸಲಾಗಿದೆ.1,662 ಕಿ.ಮೀ ಹೊಸಲೈನ್‌ ಅಳವಡಿಕೆ ಪ್ರಗತಿಯಲ್ಲಿದೆ ಎಂದರು.

ಶುದ್ಧ ಕುಡಿಯುವ ನೀರು ಪೂರೈಕೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ವಿಷಯದಲ್ಲಿ ರಾಜ್ಯ ಸರ್ಕಾರ ಅಸಹಕಾರ ತೋರುತ್ತಿದೆ. ಶುದ್ಧ ಕುಡಿಯುವ ನೀರು ಪೂರೈಕೆಯಲ್ಲಿ ರಾಜ್ಯ ದೇಶದಲ್ಲಿ 21ನೇ ಸ್ಥಾನದಲ್ಲಿದ್ದು ತನ್ನ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ ಎಂದು ದೂರಿದರು.

ಈ ವೇಳೆ ರಾಜ್ಯ ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷ ಬೆಳ್ಳಿಪ್ರಕಾಶ್‌, ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್‌ ಮಿತ್ತಲ್‌, ಕಡೂರು ತಹಶೀಲ್ದಾರ್‌ ಸಿ.ಎಸ್‌.ಪೂರ್ಣಿಮಾ, ಬೀರೂರು ಪುರಸಭಾಧ್ಯಕ್ಷೆ ಭಾಗ್ಯಲಕ್ಷ್ಮಿ, ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ ಶೆಟ್ಟಿ, ಸವಿತಾ ರಮೇಶ್‌ ಹಾಜರಿದ್ದರು.

Development of all railway stations in the state on the model of airports

Share

Leave a comment

Leave a Reply

Your email address will not be published. Required fields are marked *

Don't Miss

ಕಡೂರಿನಲ್ಲಿ ಕಾರು–ಬೈಕ್ ಡಿಕ್ಕಿಯಲ್ಲಿ ಯುವಕ ಸಾವು

ಕಡೂರು: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಯುವಕ ಮೃತಪಟ್ಟಿದ್ದು, ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ಯಗಟಿ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲಾಪುರ ಗ್ರಾಮದ ವೇದಾವತಿ...

ಶಿರವಾಸೆ ಗ್ರಾಮದಲ್ಲಿ ಬಿಲ್ಲವ ಸಮುದಾಯ ಭವನ ಲೋಕಾರ್ಪಣೆ

ಚಿಕ್ಕಮಗಳೂರು: ಸಮಾಜದ ಸಂಘಟನೆ ಬಲಗೊಳ್ಳಬೇಕಾದರೆ ಸಂಘಟಿತ ಪ್ರಯತ್ನದ ಜೊತೆಗೆ ಶಿಕ್ಷಣಕ್ಕೂ ಹೆಚ್ಚಿನ ಆದ್ಯತೆ ನೀಡಬೇಕು. ಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳನ್ನು ಪಾಲಿಸುವ ಮೂಲಕ ಸಮಾಜದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಶಾಸಕ...

Related Articles

ನೀರು !  ನೀರು ! ನೀರಿನ ಬರ ? ವಾಟರ್ ವಾರ್, ವಾಟರ್ ವಾರ್

ಚಿಕ್ಕಮಗಳೂರು ಜಿಲ್ಲೆಯಲ್ಲಿ ನೀರಿನ ಬರ ಪ್ರಾರಂಭವಾಗಿ ಹಲವು ವರ್ಷಗಳ ಜನ ಪರದಾಡುತ್ತಿದ್ದಾರೆ. ಮಲೆನಾಡು ಸದಾಕಾಲವೂ ನೀರಿನ,ಜರಿ...

ಅಂಬಳೆ ಕೈಗಾರಿಕೆ ಪ್ರದೇಶಕ್ಕೆ ರೈತರು ದನ ಕರುಗಳೊಂದಿಗೆ ಮುತ್ತಿಗೆ

ಚಿಕ್ಕಮಗಳೂರು: ಗೌಡನಹಳ್ಳಿ ಸುತ್ತಮುತ್ತಲ ಗ್ರಾಮಸ್ಥರು ಎದುರಿಸುತ್ತಿರುವ ಕೈಗಾರಿಕೆ ಮಾಲಿನ್ಯ ತಪ್ಪಿಸಲು ಆಗ್ರಹಿಸಿ ರೈತರು ದನ ಕರುಗಳೊಂದಿಗೆ...

ಪೊಲೀಸ್ ಕರ್ತವ್ಯನಿಷ್ಠೆ ಇಲಾಖೆಯ ಪ್ರಮುಖ ಶಕ್ತಿ

ಚಿಕ್ಕಮಗಳೂರು: ಪೊಲೀಸ್ ಸಿಬ್ಬಂದಿಯ ಕರ್ತವ್ಯನಿಷ್ಠೆ, ಶಿಸ್ತು ಮತ್ತು ಪ್ರಾಮಾಣಿಕತೆ ಇಲಾಖೆಯ ಪ್ರಮುಖ ಶಕ್ತಿಯಾಗಿದ್ದು, ಒತ್ತಡದ ನಡುವೆಯೂ...

ಕಾಡಾನೆಗಳ ಸ್ಥಳಾಂತರ ಖಂಡಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಹಾಸನ ಜಿಲ್ಲೆಯಿಂದ ಕಾಡಾನೆಗಳನ್ನು ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸಲು ಮುಂದಾಗಿರುವುದನ್ನು ಖಂಡಿಸಿ ಕರ್ನಾಟಕ...