Home Latest News ಅ.19 ರಿಂದ 23 ರವರೆಗೆ ದೇವೀರಮ್ಮನವರ ದೀಪೋತ್ಸವ
Latest NewschikamagalurHomenamma chikmagalur

ಅ.19 ರಿಂದ 23 ರವರೆಗೆ ದೇವೀರಮ್ಮನವರ ದೀಪೋತ್ಸವ

Share
Share

ಚಿಕ್ಕಮಗಳೂರು: ತಾಲ್ಲೂಕು ಮಲ್ಲೇನಹಳ್ಳಿ ಬಿಂಡಿಗ ಆದಿಶಕ್ತ್ಯಾತ್ಮಕ ಶ್ರೀ ದೇವೀರಮ್ಮನವರ ದೀಪೋತ್ಸವ ಅ.೧೯ ರಿಂದ ೨೩ ರವರೆಗೆ ನಡೆಯಲಿದ್ದು, ಬೆಟ್ಟ ಹತ್ತಲು ರಾತ್ರಿ ಹೊರತುಪಡಿಸಿ ೨ ದಿನ ಅವಕಾಶ ಕಲ್ಪಿಸಲಾಗಿದೆ ಎಂದು ದೇವೀರಮ್ಮ ದೇವಸ್ಥಾನ ಸಮಿತಿ ಅಧ್ಯಕ್ಷ ಕುಲಶೇಖರ್ ತಿಳಿಸಿದರು.

ಅವರು ಇಂದು ದೇವಸ್ಥಾನದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಅ.೧೯ ರಂದು ಬೆಳಗ್ಗೆ ೯ ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ಹಾಗೂ ಅ.೨೦ ರಂದು ಬೆಳಗ್ಗೆ ೭ ಗಂಟೆಯಿಂದ ಬೆಟ್ಟ ಹತ್ತಲು ಭಕ್ತರಿಗೆ ಅವಕಾಶ ನೀಡಲಾಗಿದ್ದು, ಗಿರಿಪ್ರದೇಶದಲ್ಲಿ ಈ ಬಾರಿ ಅತಿ ಹೆಚ್ಚು ಮಳೆಯಾಗುತ್ತಿರುವ ಕಾರಣ ರಾತ್ರಿ ಬೆಟ್ಟ ಹತ್ತಲು ನಿಷೇಧಿಸಲಾಗಿದೆ ಎಂದರು.

ಅ.೧೯ ರಂದು ಬೆಳಗ್ಗೆ ೭ ಗಂಟೆಗೆ ಬೆಟ್ಟದಲ್ಲಿ ಅಭಿಷೇಕ, ಪೂಜಾ ಕಾರ್ಯಕ್ರಮಗಳು ಜರುಗಿದ ಬಳಿಕ ೯ ರಿಂದ ೫ ಗಂಟೆಯವರೆಗೆ ದೇವೀರಮ್ಮ ದೇವಿಯವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ೨೦ ರಂದು ೩ ಗಂಟೆಯವರೆಗೆ ಮಾತ್ರ ದೇವಿ ದರ್ಶನಕ್ಕೆ ಅವಕಾಶವಿದ್ದು, ಸಂಜೆ ೭ ಗಂಟೆಗೆ ದೀಪೋತ್ಸವ ನಡೆಯಲಿದೆ ಎಂದರು.

೨೧ ರಂದು ದೇವೀರಮ್ಮ ದೇವಸ್ಥಾನದಲ್ಲಿ ದೇವಿಯವರಿಗೆ ಉಡುಗೆ ಪೂಜೆ, ಸಂಜೆ ೬.೩೦ ಕ್ಕೆ ಬೆಣ್ಣೆಬಟ್ಟೆ ಸುಡುವುದು ನಂತರ ಮಹಾಮಂಗಳಾರತಿ, ಪ್ರಸಾದ ವಿನಿಯೋಗ, ೨೨ ರಂದು ಮಹಾಗಣಪತಿ ಪೂಜೆ, ಕುಂಕುಮಾರ್ಚನೆ ಇತ್ಯಾದಿ. ೨೩ ರಂದು ಮಹಾಮಂಗಳಾರತಿ, ಹರಕೆ ಒಪ್ಪಿಸುವುದು, ತೀರ್ಥಪ್ರಸಾದ ವಿನಿಯೋಗ.

ಶ್ರೀ ಕ್ಷೇತ್ರದಲ್ಲಿ ನಡೆಯುವ ಪ್ರಸಾದ ವಿನಿಯೋಗಕ್ಕೆ ಅಕ್ಕಿ, ಬೇಳೆ, ಎಣ್ಣೆ ಹಾಗೂ ಧನಸಹಾಯ ಮಾಡುವವರು ಕ್ಷೇತ್ರಕ್ಕೆ ತಂದು ಒಪ್ಪಿಸಬಹುದಾಗಿದೆ. ಬೆಟ್ಟದ ಮೇಲೆ ತೆಂಗಿನಕಾಯಿ ಒಡೆಯುವುದನ್ನು ನಿಷೇಧಿಸಲಾಗಿದೆ ಎಂದು ಹೇಳಿದರು.

ದೇವಿಯ ದರ್ಶನವಾದ ಬಳಿಕ ಬೆಟ್ಟದ ಮೇಲೆ ಕುಳಿತುಕೊಳ್ಳದೆ ಕೆಳಗೆ ಇಳಿಯಬೇಕು, ಬೆಟ್ಟದ ಹಾಗೂ ದೇವಸ್ಥಾನದ ಸುತ್ತಮುತ್ತ ಪ್ಲಾಸ್ಟಿಕ್ ಇತ್ಯಾದಿ ತ್ಯಾಜ್ಯ ವಸ್ತುಗಳನ್ನು ಎಸೆಯಬಾರದು, ದೇವಸ್ಥಾನದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ತರೀಕೆರೆ, ಬೀರೂರು, ಕಡೂರು, ಚಿಕ್ಕಮಗಳೂರಿನಿಂದ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದರು.

ಬೆಟ್ಟದಲ್ಲಿ ಪಟಾಕಿ ಒಡೆಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ, ಭಕ್ತರು ಸ್ವಚ್ಚತೆ ಕಾಪಾಡುವ ಜೊತೆಗೆ ಪರಿಸರದ ಕಾಳಜಿಯನ್ನು ಹೊಂದಬೇಕು ಎಂದು ಹೇಳಿದರು.

Deviramma’s Deepotsava from 19th to 23rd October

Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...